ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಒಮಾನ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿ ಬಾಂಗ್ಲಾದೇಶ

T20 world cup: OMN vs BAN, Bangladesh plays against Oman in must-win match

ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಮೊದಲ ಪಂದ್ಯದಲ್ಲಿಯೇ ಸೋಲು ಕಂಡು ಆಘಾತ ಅನುಭವಿಸಿದೆ. ಈಗ ತನ್ನ ಎರಡನೇ ಪಂದ್ಯವನ್ನಾಡಲು ಸಜ್ಜಾಗಿದ್ದು ಗೆಲುವು ಸಾಧಿಲೇ ಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಒಮಾನ್ ವಿರುದ್ಧ ಸೆಣೆಸಲಿದ್ದು ಒಮಾನ್‌ಗೆ ತವರು ಅಂಗಳದ ಅನುಕೂಲವಿದೆ ಎಂಬುದು ಗಮನಾರ್ಹ ಸಂಗತಿ. ಅಲ್ಲದೆ ಒಮಾನ್ ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಈ ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ತವರಿನಲ್ಲಿ ನಡೆದ ಸರಣಿಯಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡದ ವಿರುದ್ಧ ಐತಿಹಾಸಿಕ ಸರಣಿ ಗೆಲುವು ಸಾಧಿಸಿತ್ತು. ಈ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದು ಟೂರ್ನಿಗೆ ಕಾಲಿಟ್ಟಿತ್ತು ಬಾಂಗ್ಲಾದೇಶ. ಆದರೆ ಟಿ20 ವಿಶ್ವಕಪ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಸ್ಕಾಟ್ಲೆಂಟ್ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿದೆ. ಕಳೆದ ಭಾನುವಾರ ನಡೆದ ಈ ಪಂದ್ಯದಲ್ಲಿ ಬಾಂಗ್ಲಾ 6 ರನ್‌ಗಳ ಅಂತರದಲ್ಲಿ ಸೋಲು ಕಂಡಿದ್ದು ಆಘಾತ ಅನುಭವಿಸಿದೆ.

ಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತ

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದ ಬಾಂಗ್ಲಾ ಎದುರಾಳಿ ಸ್ಕಾಟ್ಲೆಂಡ್ ತಂಡದ ಮೊದಲ 6 ವಿಕೆಟ್‌ಗಳನ್ನು ಕೇವಲ 53 ರನ್‌ಗಳಿಗೆ ಕೆಡವಿತ್ತು. ಆದರೆ ನಂತರ ಸ್ಕಾಟ್ಲೆಂಡ್ ಬಾಂಗ್ಲಾದೇಶದ ವಿರುದ್ಧ ತಿರುಗಿ ಬೀಳಲು ಯಶಸ್ವಿಯಾಗಿತ್ತು. ನಂತರ ಬ್ಯಾಟಿಂಗ್‌ನಲ್ಲಿಯೂ ಎಡವಿದ ಬಾಂಗ್ಲಾದೇಶ ಅಂತಿಮವಾಗಿ 6 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಈ ಅನಿರೀಕ್ಷಿತ ಸೋಲಿಗೆ ತಮಡದ ಬ್ಯಾಟ್ಸ್‌ಮನ್‌ಗಳನ್ನು ಬಾಂಗ್ಲಾದೇಶದ ನಾಯಕ ಮಹ್ಮದುಲ್ಲಾ ದೂರಿದ್ದರು. ಇದೀಗ ಸ್ಕಾಟ್ಲೆಂಡ್ ವಿರುದ್ಧ ಮಾಡಿದ ತಮ್ಮನ್ನು ಸರಿಪಡಿಸಿಕೊಂಡು ಕಣಕ್ಕಿಳಿದರೆ ಮಾತ್ರ ಬಾಂಗ್ಲಾದೇಶಕ್ಕೆ ಗೆಲುವು ಸಾಧ್ಯ. ಒಮಾನ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ಆಡಿ ಭರ್ಜರಿ ಗೆಲುವು ಸಾಧಿಸಿದೆ.

ಟಿ20 ವಿಶ್ವಕಪ್‌: ಕಾರಣ ತಿಳಿಸಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದೆ ಸರಿದ ಕೊಹ್ಲಿ!ಟಿ20 ವಿಶ್ವಕಪ್‌: ಕಾರಣ ತಿಳಿಸಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದೆ ಸರಿದ ಕೊಹ್ಲಿ!

ಸೂಪರ್ 12 ಹಂತಕ್ಕೇರುವ ಸ್ಪರ್ಧೆಯಲ್ಲಿ ಮುಂದುವರಿಯಬೇಕಿದ್ದಾರೆ ಬಾಂಗ್ಲಾದೇಶ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. "ಬ್ಯಾಟಿಂಗ್ ವಿಭಾಗದಲ್ಲಿ ನಮ್ಮ ಪ್ರದರ್ಶನಕ್ಕೆ ನಾವೇ ಅಸಮಾಧಾನಗೊಂಡಿದ್ದೇವೆ. ಹಾಗಾಗಿ ನಮ್ಮ ಕಳವಳಕ್ಕೂ ಇದೇ ಕಾರಣವಾಗಿದೆ. ನಾವು ಎಲ್ಲಿ ಎಡವಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಂಡು ಮುಂದಿನ ಪಂದ್ಯದಲ್ಲಿ ಆ ತಪ್ಪನ್ನು ಮಾಡದಂತೆ ನೋಡಿಕೊಳ್ಳಬೇಕಿದೆ" ಎಂದು ಮಹಮ್ಮದುಲ್ಲಾ ಸೋಲಿನ ನಂತರ ಪ್ರತಿಕ್ರಿಯಿಸಿದ್ದರು.

ಇನ್ನು ಮತ್ತೊಂದೆಡೆ ಬಾಂಗ್ಲಾದೇಶದ ಬೌಲರ್‌ಗಳು ಆರಂಭದಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ್ದರು. ಆದರೆ ನಂತರ ಎಡವಿರುದು ಎಸುರಾಳಿ ತಂಡ ಗಳಿಸಿರುವ 140 ರನ್‌ಗಳೇ ಸಾಕ್ಷಿಯಾಗಿದೆ. ಪಿಚ್ ನಿಧಾನಗತಿಯಲ್ಲಿರುವ ಕಾರಣದಿಂದಾಗಿ ಅರ್ಥ ಮಾಡಿಕೊಂಡು ಸಾಧ್ತವಾದಷ್ಟು ರನ್‌ಗಳಿಸಿದರೆ ಮಾತ್ರ ಬಾಂಗ್ಲಾ ಒಮಾನ್ ವಿರುದ್ಧ ಮೇಲುಗೈ ಸಾಧಿಸಲು ಸಾಧ್ಯವಿದೆ.

ಟಿ20 ವಿಶ್ವಕಪ್: ಪಾರ್ಥೀವ್ ಪಟೇಲ್ ಹೆಸರಿಸಿದ ಟೀಮ್ ಇಂಡಿಯಾದ ಪ್ಲೇಯಿಂಗ್ XIಟಿ20 ವಿಶ್ವಕಪ್: ಪಾರ್ಥೀವ್ ಪಟೇಲ್ ಹೆಸರಿಸಿದ ಟೀಮ್ ಇಂಡಿಯಾದ ಪ್ಲೇಯಿಂಗ್ XI

ಬಾಂಗ್ಲಾದೇಶ ಸಂಪೂರ್ಣ ಸ್ಕ್ವಾಡ್: ಮಹ್ಮದುಲ್ಲಾ (ನಾಯಕ), ಲಿಟನ್ ದಾಸ್, ಮೊಹಮ್ಮದ್ ನಯೀಮ್, ಮಹೇದಿ ಹಸನ್, ಶಕೀಬ್ ಅಲ್ ಹಸನ್, ಸೌಮ್ಯ ಸರ್ಕಾರ್, ಮುಷ್ಫಿಕರ್ ರಹೀಮ್, ನೂರುಲ್ ಹಸನ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಶಮೀಮ್ ಹೊಸೇನ್, ಮುಸ್ತಫಿಜುರ್ ರೆಹಮಾನ್, ಮೊಹಮ್ಮದ್ ಸೈಫುದ್ದೀನ್.

Chahal ಅವರ ಜಾಗ ಕಸಿದುಕೊಂಡ ಆಟಗಾರ ಯಾರು ? | Oneindia Kannada

ಒಮಾನ್ ಸಂಪೂರ್ಣ ಸ್ಕ್ವಾಡ್: ಜೀಶನ್ ಮಕ್ಸೂದ್ (ನಾಯಕ), ಅಕಿಬ್ ಇಲ್ಯಾಸ್, ಜತೀಂದರ್ ಸಿಂಗ್, ಖಾವರ್ ಅಲಿ, ಮೊಹಮ್ಮದ್ ನದೀಮ್, ಅಯಾನ್ ಖಾನ್, ಸೂರಜ್ ಕುಮಾರ್, ಸಂದೀಪ್ ಗೌಡ್, ನೆಸ್ಟರ್ ದಂಬಾ, ಕಲೀಮುಲ್ಲಾ, ಬಿಲಾಲ್ ಖಾನ್, ನಸೀಮ್ ಖುಷಿ, ಸುಫ್ಯಾನ್ ಮೆಹಮೂದ್, ಫಯಾಜ್ ಬಟ್, ಖರ್ರಮ್ ನವಾಜ್ ಖಾನ್.

Story first published: Tuesday, October 19, 2021, 20:03 [IST]
Other articles published on Oct 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X