
ಆಸ್ಟ್ರೇಲಿಯಾಗೆ ಪ್ರಯಾಣಿಸಲು ಸಜ್ಜು
ಟೀಮ್ ಇಂಡಿಯಾದ ಆಟಗಾರರ ಪಡೆ ಈಗಾಗಲೇ ಆಸ್ಟ್ರೇಲಿಯಾಗೆ ಪ್ರಯಾಣಿಸಿದ್ದು ಚುಟುಕು ವಿಶ್ವಕಪ್‌ಗೆ ಬೇಕಾದ ಅಂತಿಮ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದರೆ ತಂಡದಲ್ಲಿ ಮೀಸಲು ಆಟಗಾರರಾಗಿ ಆಯ್ಕೆಯಾಗಿರುವ ಆಟಗಾರರು ಇನ್ನು ಪ್ರಯಾಣಿಸಿಲ್ಲ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ರವಿ ಬೊಷ್ಣೋಯ್ ಹಾಗೂ ಶ್ರೇಯಸ್ ಐಯ್ಯರ್ ಆಸ್ಟ್ರೇಲಿಯಾಗೆ ಪ್ರಯಾಣಿಸಲು ಸಜ್ಜಾಗಿದ್ದಾರೆ. ಅಕ್ಟೋಬರ್ 13ರಂದು ಈ ಆಟಗಾರರು ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ.

ಐಸಿಸಿ ನಿಯಮದಲ್ಲಿ ಏನಿದೆ?
ವಿಶ್ವಕಪ್‌ನಲ್ಲಿ ಭಾಗವಹಿಸುವ ಆಟಗಾರರ ಬದಲಾವಣೆಗೆ ಸಂಬಂಧಿಸಿದಂತೆ ಐಸಿಸಿ ನಿಯಮಗಳನ್ನು ಹೊಂದಿದೆ. ಈ ನಿಯಮದ ಪ್ರಕಾರ ಅಕ್ಟೋಬರ್ 9ರವರೆಗೂ ಆಟಗಾರರು ಗಾಯಗೊಳ್ಳದೆ ಇದ್ದರೂ ತಂಡದಲಲ್ಇ ಬದಲಾವಣೆ ಮಾಡಿಕೊಳ್ಳುವ ಅವಕಾಶವಿತ್ತು. ಈ ಡೆಡ್‌ಲೈನ್‌ನ ಬಳಿಕ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಐಸಿಸಿಯ ಅನುಮತಿ ಪಡೆಯಬೇಕಿದ್ದು ಗಾಯಗೊಂಡ ಆಟಗಾರರಿಗೆ ಮಾತ್ರವೇ ಬದಲಿ ಆಟಗಾರರನ್ನು ಸೇರ್ಪಡೆಗೊಳಿಸುವ ಅವಕಾಶವಿದೆ.

ಬೌಲಿಂಗ್ ವಿಭಾಗಕ್ಕೆ ಸವಾಲು
ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಏಷ್ಯಾ ಕಪ್‌ನಲ್ಲಿ ಭಾರತ ತಂಡದ ಬೌಲಿಂಗ್ ವಿಭಾಗ ನೀರಸ ಪ್ರದರ್ಶನ ನೀಡಿದ್ದ ಕಾರಣದಿಂದಾಗಿ ತಂಡಕ್ಕೆ ಭಾರೀ ಹಿನ್ನಡೆಯಾಗಿತ್ತು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್ ಸದ್ಯ ಭಾರತ ತಂಡದ ಬೌಲಿಂಗ್ ವಿಭಾಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ಮೊಹಮ್ಮದ್ ಶಮಿ ಈ ತಂಡದಲ್ಲಿ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ.

ವಿಶ್ವಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್


Click it and Unblock the Notifications
