ಈ ತಂಡದ ವಿರುದ್ಧ ಫೈನಲ್ ಆಡುವುದು ನಮ್ಮ ಬಯಕೆ: ಮೊಹಮ್ಮದ್ ರಿಜ್ವಾನ್

ಟಿ20 ವಿಶ್ವಕಪ್‌ನಲ್ಲಿ ಗುರುವಾರ ಇಂಗ್ಲೆಂಡ್ ತಂಡದ ಸವಾಲನ್ನು ಎದುರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅಡಿಲೇಡ್ ಓವಲ್‌ನಲ್ಲಿ ಗೆದ್ದು ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸುವ ತಂಡ ಯಾವುದು ಎಂಬುದು ಎಲ್ಲರ ಕುತೂಹಲ. ಈ ಸಂದರ್ಭದಲ್ಲಿ ಮೊದಲ ಸೆಮಿಫೈನಲ್ ಗೆದ್ದು ಫೈನಲ್‌ಗೆ ಅರ್ಹತೆ ಪಡೆದಿರುವ ಪಾಕಿಸ್ತಾನ ತಂಡದ ಪ್ರಮುಖ ಆಟಗಾರ ಮೊಹಮ್ಮದ್ ರಿಜ್ವಾನ್ ಪ್ರತಿಕ್ರಿಯಿಸಿದ್ದು ತಂಡದ ಆಟಗಾರರು ಯಾವ ತಂಡದ ವಿರುದ್ಧ ಫೈನಲ್‌ನಲ್ಲಿ ಸೆಣೆಸಾಡಲು ಎದುರು ನೋಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಸೆಮಿಫೈನಲ್‌ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಮೊಹಮ್ಮದ್ ರಿಜ್ವಾನ್ ತಂಡದ ಆಟಗಾರರು ಫೈನಲ್‌ನಲ್ಲಿ ಭಾರತದ ವಿರುದ್ಧ ಆಡುವುದನ್ನು ಬಯಸುತ್ತಿದ್ದಾರೆ ಎಂದಿದ್ದಾರೆ. ಅಭಿಮಾನಿಗಳ ನಿರೀಕ್ಷೆಗಳು ಕೂಡ ಇದೇ ಆಗಿರುವ ಕಾರಣ ನಾವು ಭಾರತದ ವಿರುದ್ಧ ಆಡುವುದನ್ನು ಬಯಸುತ್ತೇವೆ ಎಂದಿದ್ದಾರೆ ರಿಜ್ವಾನ್.

ಭಾರತದ ವಿರುದ್ಧ ಫೈನಲ್ ಆಡುವ ಬಯಕೆ
"ನಮ್ಮ ಹುಡುಗರು ಫೈನಲ್‌ನಲ್ಲಿ ಭಾರತ ತಂಡವನ್ನು ಎದುರಿಸಲು ಬಯಸುತ್ತಿದ್ದಾರೆ. ಇನ್ನೂ ಕೆಲ ಆಟಗಾರರು ನಮ್ಮ ಈ ಹೋರಾಟವನ್ನು 1992 ರ ವಿಶ್ವಕಪ್‌ಗೆ ಹೋಲಿಸುತ್ತಿದ್ದಾರೆ. ಅವರಿಗೆ ಇಂಗ್ಲೆಂಡ್ ವಿರುದ್ಧ ಫೈನಲ್ ಆಡಿದರೂ ಪರವಾಗಿಲ್ಲ" ಎಂದು ಸೆಮಿಫೈನಲ್‌ನಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ರಿಜ್ವಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಇಡೀ ಕ್ರಿಕೆಟ್ ಲೋಕ ಎದುರು ನೋಡುತ್ತಿರುವ ಮುಖಾಮುಖಿ
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಅರ್ಧ ಶತಕ ಸಿಡಿಸಿದ ರಿಜ್ವಾನ್ ನಾಯಕ ಬಾಬರ್ ಜೊತೆಗೆ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. ಈ ಪ್ರದರ್ಶನದ ಕಾರಣದಿಂದಾಗಿ ಪಾಕಿಸ್ತಾನದ ಗೆಲುವು ಸಾಧ್ಯವಾಗಿತ್ತು. ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೆಣೆಸಾಟವನ್ನು ಇಡೀ ಕ್ರಿಕೆಟ್ ಜಗತ್ತು ಆನಂದಿಸುತ್ತದೆ ಎಂದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲುವಿಗೆ ಕಾರಣ ಹೇಳಿದ ಹರ್ಭಜನ್ ಸಿಂಗ್

ಆಶಸ್ ಸರಣಿಗಿಂತಲೂ ಭಾರತ ಪಾಕ್ ಪಂದ್ಯ ದೊಡ್ಡದು
"ನನ್ನ ಪ್ರಕಾರ ವಿಶ್ವದ ಶ್ರೇಷ್ಠ ಸರಣಿಯಲ್ಲಿ ಆಶಸ್‌ಗೆ ಅಗ್ರಸ್ಥಾನವಿದೆ. ಆದರೆ ಸರಣಿಗಿಂತಲೂ ದೊಡ್ಡದು ಭಾರತ vs ಪಾಕಿಸ್ತಾನ ಪಂದ್ಯ. ಈ ಮುಖಾಮುಖಿಯನ್ನು ಇಡೀ ಕ್ರಿಕೆಟ್ ಜಗತ್ತು ಆನಂದಿಸುತ್ತದೆ. ಇದಕ್ಕಿಂತ ಹೆಚ್ಚಿನದನ್ನು ನಾವು ಏನು ನಿರೀಕ್ಷಿಸಲು ಸಾಧ್ಯ" ಎಂದಿದ್ದಾರೆ ಪಾಕ್ ಪ್ರಮುಖ ಆಟಗಾರ ಮೊಹಮ್ಮದ್ ರಿಜ್ವಾನ್.

ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ಸೆಣೆಸಾಟ
ಇನ್ನು ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸೆಣೆಸಾಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಆಡಲಿದ್ದು ಚಾಂಪಿಯನ್ ಪಟ್ಟಕ್ಕಾಗಿ ಹೋರಾಡಲಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಮುಖಾಮುಖಿ ತೀವ್ರ ಕುತೂಹಲ ಕೆರಳಿಸಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ: ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್/ ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications