
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾನುವಾರ ಮೂರು ಪಂದ್ಯಗಳು ನಡೆಯಲಿದೆ. ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ಗ್ರೂಪ್ ಎರಡರಲ್ಲಿರುವ ಈ ಎರಡು ತಂಡಗಳು ಕೂಡ ಮೊದಲ ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದ್ದು ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ. ಅದರಲ್ಲೂ ಪಾಕಿಸ್ತಾನ ತಂಡ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳ ಪೈಕಿ ಗುರುತಿಸಿಕೊಂಡಿದ್ದರೂ ಕಳಪೆ ಪ್ರದರ್ಶನ ನೀಡಿರುವುದು ಆ ತಂಡಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ.
ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ಭಾರತದ ವಿರುದ್ಧ ಆಡಿ ಸೋಲು ಅನುಭವಿಸಿತ್ತು. ಅದಾದ ಬಳಿಕ ಜಿಂಬಾಬ್ವೆ ವಿರುದ್ಧ ಸುಲಭ ಸವಾಲು ಪಡೆದುಕೊಂಡಿದ್ದರೂ ಆ ಪಂದ್ಯವನ್ನು ಕೂಡ ಕಳೆದುಕೊಳ್ಳುವ ಮೂಲಕ ಹೀನಾಯ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದೀಗ ಸೂಪರ್ 12 ಹಂತದಿಂದಲೇ ಹೊರಬೀಳುವ ಆತಂಕದಲ್ಲಿ ಪಾಕಿಸ್ತಾನ ತಂಡವಿದ್ದು ಉಳಿದ ಎಲ್ಲಾ ಪಂದ್ಯಗಳನ್ನು ಕೂಡ ಗೆದ್ದರೂ ಸೆಮಿಫೈನಲ್ ಹಾದಿ ಸುಲಭವಿಲ್ಲ.
ಪಂದ್ಯದ ಸಮಯ ನೇರಪ್ರಸಾರ ಮಾಹಿತಿ: ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳು ಭಾನುವಾರ ಪರ್ತ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 12:30ಕ್ಕೆ ಆರಂಭವಾಗಲಿದ್ದು ಮಧ್ಯಾಹ್ನ 12 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್: ಹವಾಮಾನ ವರದಿ: ಪಂದ್ಯದ ದಿನ ಪರ್ತ್‌ನಲ್ಲಿ ಮೋಡ ಕವಿದ ವಾತಾವರಣವಿರಲಿದೆ. 7-17 ಡಿಗ್ರಿ ಮಧ್ಯೆ ಉಷ್ಣಾಂಶವಿರಲಿ.
ಪಿಚ್ ರಿಪೋರ್ಟ್: ಪರ್ತ್ ಪಿಚ್ ಬೌಲರ್‌ಗಳಿಗೆ ಹೆಚ್ಚು ಅನುಕೂಲವನ್ನು ನೀಡುವ ಪಿಚ್ ಆಗಿದೆ. ವೇಗಿಗಳು ಇಲ್ಲಿನ ಏಲ್ಮೈನ ಕಾರಣದಿಂದಾಗಿ ಹೆಚ್ಚಿನ ವೇಗವನ್ನು ಪಡೆಯಲಿದ್ದಾರೆ. ಬ್ಯಾಟರ್‌ಗಳೀಗೆ ಕ್ರೀಸ್‌ನಲ್ಲಿ ನೆಲೆಯೂರಲು ಹೆಚ್ಚು ಸಮಯ ಬೇಕಾಗಬಹುದು.
ಪಾಕಿಸ್ತಾನ ಸಂಭಾವ್ಯ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೇನ್
ನೆದರ್ಲೆಂಡ್ಸ್ ಸಂಭಾವ್ಯ ಆಡುವ ಬಳಗ: ಸ್ಟೀಫನ್ ಮೈಬರ್ಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್