Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Pak vs SA: ಪಾಕಿಸ್ತಾನಕ್ಕೆ ಅಂತಿಮ ಅವಕಾಶ: ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

T20 World Cup Pakistan vs South Africa: pitch report weather forecast and Probable XI details

ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದ್ದು ಗುರುವಾರ ನಡೆಯಲಿರುವ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಕದನ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಪಾಕಿಸ್ತಾನ ತಂಡ ಉಳಿದುಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಸಾಕಷ್ಟು ಉತ್ತಮ ಅಂತರದೊಂದಿಗೆ ಗೆಲುವು ಸಾಧಿಸುವುದು ಪಾಕ್ ಪಾಲಿಗೆ ಅನಿವಾರ್ಯವಾಗಿದೆ.

ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸೋಲು ಅನುಭವಿಸದೆ ಅಜೇಯವಾಗಿರುವ ಏಕೈಕ ತಂಡವಾಗಿದೆ. ಸೂಪರ್ 12 ಹಂತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ ತಂಡದ ಮೂರು ಪಂದ್ಯಗಳು ಮುಕ್ತಾಯವಾಗಿದ್ದು ಈ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ಮೂರು ಪಂದ್ಯಗಳಲ್ಲಿ 5 ಅಂಕಗಳಿಸಿಕೊಂಡಿದೆ. ಇತ್ತ ಪಾಕಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರವೇ ಸಾಧಿಸಿದ್ದು ಎರಡು ಅಂಕಗಳನ್ನು ಮಾತ್ರವೇ ಖಾತೆಯಲ್ಲಿ ಹೊಂದಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ: ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಗುರುವಾರ ಸಿಡ್ನಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ಹವಾಮಾನ ವರದಿ: ಪಂದ್ಯದ ದಿನ ಸಿಡ್ನಿಯಲ್ಲಿ ಸಂಪೂರ್ಣ ಆಟ ನಡೆಯಲು ಪೂರಕವಾದ ವಾತಾವರಣವಿರಲಿದೆ. 13-20 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.
ಪಿಚ್ ರಿಪೋರ್ಟ್: ಪರ್ತ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವನ್ನು ನೀಡುವ ಪಿಚ್ ಆಗಿದೆ. ಬ್ಯಾಟರ್‌ಗಳಿಗೆ ಚೆಂಡು ನೇರವಾಗಿ ಬ್ಯಾಟ್‌ಗೆ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ.

ಪಾಕಿಸ್ತಾನ ಸಂಭಾವ್ಯ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

ದಕ್ಷಿಣ ಆಪ್ರಿಕಾ ಸಂಭಾವ್ಯ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸ್ಸೌ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಅನ್ರಿಚ್ ನಾರ್ಟ್ಜೆ

Story first published: Wednesday, November 2, 2022, 22:10 [IST]
Other articles published on Nov 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+