T20 World Cup Power-Hitters: ಇತಿಹಾಸದಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಟಾಪ್ 5 ಬ್ಯಾಟರ್ಸ್
ಟಿ20 ವಿಶ್ವಕಪ್ ಆರಂಭವಾಗಿದ್ದು, ಎಲ್ಲರ ಕಣ್ಣುಗಳು ಸ್ಟಾರ್ ಬ್ಯಾಟರ್‌ಗಳ ಮೇಲೆ ನೆಟ್ಟಿವೆ. ಈ ಮೆಗಾ ಟೂರ್ನಿಯಲ್ಲಿ ತಮ್ಮ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಸ್ಟಾರ್ ಬ್ಯಾಟರ್‌ಗಳು ಮಿಂಚುತ್ತಾರೆ. ಚುಟುಕು ಫಾರ್ಮೆಟ್‌ನಲ್ಲಿ ಬ್ಯಾಟರ್‌ಗಳ ಸ್ಟ್ರೈಕ್ ರೇಟ್ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರುತ್ತವೆ. ಹೊಡಿ ಬಡಿ ಆಟದ ಖ್ಯಾತನಾಮ ಆಟಗಾರರು ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ರನ್ ವೇಗಕ್ಕೆ ಚುರುಕು ಮುಟ್ಟಿಸುತ್ತಾರೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಬ್ಯಾಟರ್‌ಗಳ ಅಬ್ಬರಿಸಿದ್ದಾರೆ. ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್ ಅವರಿಗೆ ಮೊದಲ ಸ್ಥಾನ. ಇವರು ಈ ಬಾರಿಯೂ ಟಿ20 ವಿಶ್ವಕಪ್‌ನಲ್ಲಿ ಆಂಗ್ಲರ ತಂಡದ ಭಾಗವಾಗಿದ್ದಾರೆ. ಬಟ್ಲರ್ ಆಡಿರುವ 35 ಟಿ20 ವಿಶ್ವಕಪ್ ಪಂದ್ಯಗಳಲ್ಲಿ 1 ಶತಕ, 5 ಅರ್ಧಶತಕ ಸೇರಿದಂತೆ ಒಟ್ಟು 1013 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 147.23 ಆಗಿದೆ.

ಅತಿ ಹೆಚ್ಚು ಸ್ಟ್ರೈಕ್ ರೇಟ್
ಹೊಡಿ ಬಡಿ ಆಟದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಸಹ ಭಾರೀ ಸದ್ದು ಮಾಡಿದ್ದಾರೆ. ಮಿಸ್ಟರ್ 360 ಎಂದೇ ಖ್ಯಾತಿ ಪಡೆದಿರುವ ಎಬಿಡಿಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಪ್ಲೇಯರ್. ಅಲ್ಲದೆ ತಂಡದ ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆ ಹೊಂದಿದ್ದರು. ಇವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬಾಯ್ ಹೇಳಿದ್ದಾರೆ. ಇವರು ಟಿ20 ವಿಶ್ವಕಪ್‌ನಲ್ಲಿ ಆಡಿದ 30 ಪಂದ್ಯಗಳಲ್ಲಿ 143.4ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದ್ದಾರೆ.
ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಮೂರನೇ ಹೆಸರು ವೆಸ್ಟ್ ಇಂಡೀಸ್ ತಂಡದ ಕ್ರಿಸ್ ಗೇಲ್. ಈ ಪ್ಲೇಯರ್ ಟಿ20 ಆಟಕ್ಕೆ ಹೊಸ ರೂಪವನ್ನೇ ತಮ್ಮ ಆಟದ ಮೂಲಕ ನೀಡಿದ ಆಟಗಾರ. ಇವರು ಸಹ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿದಿದ್ದಾರೆ. ಇವರು ಟಿ20 ವಿಶ್ವಕಪ್‌ನಲ್ಲಿ ಆಡಿದ 33 ಪಂದ್ಯಗಳಲ್ಲಿ 965 ರನ್ ಬಾರಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 142.75 ಆಗಿದೆ.

ಶ್ರೀಲಂಕಾ ತಂಡದ ದಿಗ್ಗಜ ಆಟಗಾರರ ಸಾಲಿನ ಕಾಣಿಸಿಕೊಳ್ಳುವ ಮಹೆಲ ಜಯವರ್ಧನೆ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಆಡಿದ 31 ಪಂದ್ಯಗಳಲ್ಲಿ 134.74 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದ್ದಾರೆ. ಇನ್ನು ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಕಾಣಿಸಿಕೊಳ್ಳುತ್ತಾರೆ. ಇವರು 134.24ರ ಸ್ಟ್ರೈಕ್ ರೇಟ್ ರನ್ ಸಿಡಿಸಿದ್ದಾರೆ.
ರೋಹಿತ್‌ಗೂ ಸ್ಥಾನ
ಟೀಮ್ ಇಂಡಿಯಾದ ಸ್ಫೋಟಕ ಆಟಗಾರ ರೋಹಿತ್ ಶರ್ಮಾ ಸಹ ಟಿ20 ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಟೂರ್ನಿಯಲ್ಲಿ 133.04 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications