T20 World Cup: ಟೂರ್ನಿಯಲ್ಲಿ ಗರಿಷ್ಠ ರನ್ ಕಲೆ ಹಾಕಿದ ಟಾಪ್ 5 ತಂಡಗಳು
ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಹಲವು ತಂಡಗಳು ತಯಾರಿ ನಡೆಸಿವೆ. ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಸಹ ಈ ಟೂರ್ನಿಗೆ ಭರದ ಸಿದ್ಧತೆಗಳನ್ನು ನಡೆಸಿದೆ. ಇದಕ್ಕಾಗಿ ಟೀಮ್ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗಳನ್ನು ಆಡುತ್ತಿದೆ. ಆಟಗಾರರು ಭರ್ಜರಿ ಫಾರ್ಮ್‌ಗೆ ಮರಳಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ.
ಟಿ20 ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳ ಮೆರೆದಾಟ ಜೋರಗಿರುತ್ತದೆ. ಈ ಲೀಗ್‌ನಲ್ಲಿ ಬ್ಯಾಟರ್‌ಗಳು ಬೌಲರ್‌ಗಳ ತಂತ್ರವನ್ನು ಮೆಟ್ಟಿನಿಂತು ಅಬ್ಬರಿಸುತ್ತಾರೆ. ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಸ್ಥಾನ ಪಡೆಯಲು ಹಗಲಿರುಳು ಪ್ರಯತ್ನಿಸುತ್ತಾರೆ. ಅಲ್ಲದೆ ಬಿಗ್ ಇನಿಂಗ್ಸ್ ಆಡಿ ತಂಡದಲ್ಲಿ ಜಯದಲ್ಲಿ ಮಿಂಚುವ ಯೋಜನೆಯನ್ನು ಹಾಕಿಕೊಂಡಿರುತ್ತಾರೆ. ಟಿ20 ವಿಶ್ವಕಪ್‌ನಲ್ಲಿ ಈಗಾಗಲೇ 200ಕ್ಕೂ ಹೆಚ್ಚು ರನ್‌ಗಳನ್ನು 18 ಬಾರಿ ತಂಡಗಳು ಮುಟ್ಟಿವೆ. ಈ ವರದಿಯಲ್ಲಿ ವಿಶ್ವಕಪ್‌ನಲ್ಲಿ ದಾಖಲಾದ ಅತಿ ಹೆಚ್ಚು ಮೊತ್ತಗಳ ಬಗ್ಗೆ ವರದಿ ಇಲ್ಲಿದೆ.

ಲಂಕಾ ಹೆಸರನಲ್ಲಿ ದಾಖಲೆ
ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಕೀರ್ತಿ ಶ್ರೀಲಂಕಾ ತಂಡದ್ದಾಗಿದೆ. ಶ್ರೀಲಂಕಾ ಟಿ20 ಕ್ರಿಕೆಟ್‌ನ ಮೊದಲ ಆವೃತ್ತಿಯಲ್ಲೇ ಕೀನ್ಯಾ ವಿರುದ್ಧ ದೊಡ್ಡ ಮೊತ್ತ ಕಲೆ ಹಾಕಿತ್ತು. ಈ ದಾಖಲೆಯನ್ನು ಈ ವರೆಗೆ ಯಾವ ತಂಡವನ್ನು ಅಳಿಸಿ ಹಾಕಲು ಆಗಲಿಲ್ಲ. ಶ್ರೀಲಂಕಾ 2007ರಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ 6 ವಿಕೆಟ್‌ಗೆ 260 ರನ್ ಕಲೆ ಹಾಕಿತು. ಈ ವೇಳೆ ಸನತ್ ಜಯಸೂರ್ಯ 11 ಬೌಂಡರಿ, 4 ಸಿಕ್ಸರ್ ನೆರವಿನಿಂದ 88 ರನ್ ಬಾರಿಸಿ ಅಬ್ಬರಿಸಿದ್ದರು. ಅನುಭವಿ ಮಹೇಲ್ ಜಯವರ್ಧನೆ ಸಹ 240 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿ 65 ರನ್ ಸಿಡಿಸಿದ್ದರು. ಈ ಪಂದ್ಯವನ್ನು ಲಂಕಾ 172 ರನ್‌ಗಳಿಂದ ಗೆದ್ದಿತು.
ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ಮೊತ್ತ ಕಲೆ ಹಾಕಿದ ತಂಡಗಳು
ಕೀನ್ಯಾ ವಿರುದ್ಧ ಶ್ರೀಲಂಕಾ, 260ಕ್ಕೆ 6
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್, 230ಕ್ಕೆ 8
ಇಂಗ್ಲೆಂಡ್ ವಿರುದ್ಧ ದ.ಆಫ್ರಿಕಾ, 229ಕ್ಕೆ 4
ಇಂಗ್ಲೆಂಡ್ ವಿರುದ್ಧ ಭಾರತ, 218ಕ್ಕೆ 4
ಅಫ್ಘಾನಿಸ್ತಾನ ವಿರುದ್ಧ ವೆಸ್ಟ್ ಇಂಡೀಸ್, 218ಕ್ಕೆ 5
ಭಾರತ ಸಹ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. 2007ರಲ್ಲಿ ಇಂಗ್ಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 218 ರನ್ ಕಲೆ ಹಾಕಿತ್ತು. ಈ ಪಂದ್ಯದಲ್ಲಿ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿ ಅಬ್ಬರಿಸಿದ್ದರು. ಇದೇ ಪಂದ್ಯದಲ್ಲಿ ಯುವಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಈ ಪಂದ್ಯವನ್ನು ಭಾರತ 18 ರನ್‌ಗಳಿಂದ ಗೆದ್ದು ಕೊಂಡಿತ್ತು. ಇನ್ನು ಭಾರತ ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ 200ಕ್ಕೂ ಹೆಚ್ಚು ರನ್ ಬಾರಿಸಿದ ದಾಖಲೆಯನ್ನು ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications