ಈತನನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ ಅದು ಅದ್ಭುತ ನಿರ್ಧಾರವಾಗಲಿದೆ: ರೋಹನ್ ಗವಾಸ್ಕರ್

ಏಷ್ಯಾ ಕಪ್ ಮುಕ್ತಾಯದ ಬಳಿಕ ಟಿ20 ವಿಶ್ವಕಪ್ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದ್ದು ಈ ಮಹತ್ವದ ಟೂರ್ನಿಗೆ ಭಾರತ ತಂಡವನ್ನು ಕೂಡ ಈಗಾಗಲೇ ಘೋಷಣೆ ಮಾಡಲಾಗಿದೆ. ಹೀಗಾಗಿ ಯಾವೆಲ್ಲಾ ಆಟಗಾರರು ಟೂರ್ನಿಗೆ ಆಯ್ಕೆಯಾಗಬಹುದು ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಇದೀಗ ಆಯ್ಕೆಯಾಗಿರುವ 15 ಆಟಗಾರರ ಪಡೆಯಲ್ಲಿ ಯಾವ ಆಟಗಾರರು ಆಡುವ ಬಳಗದಲ್ಲಿ ಇರಬೇಕು, ಯಾರಿಗೆ ಯಾವ ಕ್ರಮಾಂಕ ಎಂಬ ಬಗ್ಗೆಯೂ ಕ್ರಿಕೆಟ್ ಪಂಡಿತರು ಹಾಗೂ ಅಭಿಮಾನಿಗಳು ತಮ್ಮ ಅನಿಸಿಕೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಮಾಜಿ ಕ್ರಿಕೆಟಿಗ ರೋಹನ್ ಗವಾಸ್ಕರ್ ಕೂಡ ಈ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ರೋಹನ್ ಗವಾಸ್ಕರ್ ಟೀಮ್ ಇಂಡಿಯಾದ ಆರಂಭಿಕ ಸ್ಥಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಮುಂಬರುವ ವಿಶ್ವಕೊ್‌ನಲ್ಲಿ ಭಾರತ ತಂಡದ ಆರಂಭಿಕನಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬೇಕು ಎಂದಿರುವ ರೋಹನ್ ಗವಾಸ್ಕರ್ ಈ ನಿರ್ಧಾರವನ್ನು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ತೆಗೆದುಕೊಂಡಿದ್ದೇ ಆದರೆ ಅದು ತಂಡದ ಅದ್ಭುತ ಹೆಜ್ಜೆಯಾಗಲಿದೆ ಎಂದಿದ್ದಾರೆ.

ಫಾರ್ಮ್‌ಗೆ ಮರಳಿದ ವಿರಾಟ್ ಕೊಹ್ಲಿ
ಸುದೀರ್ಘ ಕಾಲದಿಂದ ಫಾರ್ಮ್ ಕೊರತೆಯನ್ನು ಅನುಭವಿಸುತ್ತಿದ್ದ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಅಂತ್ಯವಾದ ಏಷ್ಯಾಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಅದರಲ್ಲೂ ಅಫ್ಘಾನಿಸ್ತಾನದ ವಿರುದ್ಧ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದು ಭರ್ಜರಿ ಶತಕವನ್ನು ಕೂಡ ಸಿಡಿಸಿದ್ದರು. ಈ ಮೂಲಕ ಸುದೀರ್ಘ ಕಾಲದ ಬಳಿಕ ಕೊಹ್ಲಿ ಶತಕದ ಬರ ನೀಗಿಸಿಕೊಂಡಿದ್ದಲ್ಲದೆ ಟಿ20 ಮಾದರಿಯ ಚೊಚ್ಚಲ ಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ವಿಶ್ವಕಪ್‌ಗೆ ತಾನು ಸಿದ್ಧ ಎಂಬ ಸೂಚನೆ ನೀಡಿರುವ ಕೊಹ್ಲಿ ಬಗ್ಗೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿ ಎಂದ ರೋಹನ್
ಮಾಜಿ ಕ್ರಿಕೆಟಿಗ ರೋಹನ್ ಗವಾಸ್ಕರ್ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿ ಎಂದಿದ್ದಾರೆ. ಕೊಹ್ಲಿಯನ್ನು ಆರಂಭಿಮನಾಗಿ ಕಣಕ್ಕಿಳಿಸುವುದು ಯಾವ ದೃಷ್ಟಿಯಿಂದಲೂ ಕೆಟ್ಟ ನಿರ್ಧಾರವಾಗದು. ಅವರನ್ನು ಯಾವಾಗಲೂ ಆರಂಭಿಕನಾಗಿ ಕಣಕಕ್ಇಳಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿರುವ ರೋಹನ್ ಗವಾಸ್ಕರ್ ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿ ಎಂದಿದ್ದಾರೆ.

ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications