T20 World Cup: ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಗೆಲ್ಲುವರ್‍ಯಾರು ಎಂದು ತಿಳಿಸಿ, ಸೆಮಿಫೈನಲ್ ತಲುಪುವ ತಂಡಗಳನ್ನು ಹೆಸರಿಸಿದ ಸಚಿನ್
ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 23ರಂದು ಪ್ರತಿಷ್ಠಿತ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿವೆ. ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಅಭ್ಯಾಸ ಪಂದ್ಯದಲ್ಲಿ ಚಾಂಪಿಯನ್ನರಾದ ಆಸ್ಟ್ರೇಲಿಯಾ ತಂಡವನ್ನು ಮಣಿಸಿರುವ ಟೀಂ ಇಂಡಿಯಾ ಆತ್ಮವಿಶ್ವಾಸದಲ್ಲಿದೆ. ಇನ್ನು, ಪಾಕಿಸ್ತಾನ ತನ್ನ ಮೊದಲನೇ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದೆ. ಅಭ್ಯಾಸ ಪಂದ್ಯದಲ್ಲಿ ನಾಯಕ ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ ಕಣಕ್ಕಿಳಿದಿರಲಿಲ್ಲ.
ಕಳೆದ ಬಾರಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾರತ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಇದು, ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಟಿ20 ವಿಶ್ವಕಪ್‌ನಲ್ಲಿ ಮೊದಲನೇ ಜಯ ಆಗಿತ್ತು. ಭಾರತದ ವಿರುದ್ಧದ ಗೆಲುವಿನ ಅಭಿಯಾನವನ್ನು ಮುಂದುವರೆಸುವ ಉತ್ಸಾಹದಲ್ಲಿ ಪಾಕಿಸ್ತಾನ ಇದ್ದರೆ, ಗೆಲುವಿನ ಮೂಲಕ ತನ್ನ ಟಿ20 ವಿಶ್ವಕಪ್ ಅಭಿಯಾನ ಆರಂಭಿಸುವ ಯೋಚನೆಯಲ್ಲಿದೆ ರೋಹಿತ್ ಶರ್ಮಾ ಪಡೆ.
ಭಾರತ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎನ್ನುವ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಭವಿಷ್ಯ ನುಡಿದಿದ್ದಾರೆ.

ಭಾರತವೇ ಗೆಲ್ಲುವ ಫೇವರಿಟ್ ಎಂದ ಸಚಿನ್
ಭಾರತ ಪಾಕಿಸ್ತಾನ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವೇ ಗೆಲ್ಲುವ ಸಾಧ್ಯತೆ ಇದೆ ಎಂದು ಸಚಿನ್ ತೆಂಡುಲ್ಕರ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡ ಉತ್ತಮವಾಗಿದ್ದು ಪಾಕಿಸ್ತಾನದ ವಿರುದ್ಧ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
"ಹೌದು, ಖಂಡಿತವಾಗಿ ಭಾರತ ನೆಚ್ಚಿನ ತಂಡವಾಗಿದೆ. ನನ್ನ ಬೆಂಬಲ ಕೂಡ ಭಾರತ ತಂಡದೊಂದಿಗೆ ಇದೆ. ಯಾವಾಗಲೂ ಭಾರತ ತಂಡ ಗೆಲ್ಲಬೇಕೆಂದು ನಾನು ಬಯಸುತ್ತೇನೆ. ನಾನು ಭಾರತೀಯ ಎಂಬ ಕಾರಣಕ್ಕೆ ಅಲ್ಲ, ಈ ಪರಿಸ್ಥಿತಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಫೈರ್‌ಪವರ್ ನಮ್ಮಲ್ಲಿದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ" ಎಂದು ಸಚಿನ್ ಹೇಳಿದ್ದಾರೆ.
ಟಿ20 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲು: ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್

ಸೆಮಿಫೈನಲ್ ತಲುಪುವ ತಂಡಗಳಿವು
ಟಿ20 ವಿಶ್ವಕಪ್‌ನಲ್ಲಿ ಈ ಬಾರಿ ಸೆಮಿಫೈನಲ್ ತಲುಪುವ ನಾಲ್ಕು ತಂಡಗಳ ಬಗ್ಗೆ ಕೂಡ ಸಚಿನ್ ತೆಂಡುಲ್ಕರ್ ಭವಿಷ್ಯ ನುಡಿದಿದ್ದಾರೆ. ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ತಂಡ ಚಾಂಪಿಯನ್ ಆಗಬೇಕೆಂದು ನಾನು ಬಯಸುತ್ತೇನೆ. ನನ್ನ ಪ್ರಕಾರ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪುವ ತಂಡಗಳು ಎಂದು ಹೇಳಿದ್ದಾರೆ.
"ಭಾರತಕ್ಕೆ ಉತ್ತಮ ಅವಕಾಶವಿದೆ. ಈ ತಂಡವು ಸಮತೋಲಿತವಾಗಿದೆ. ಸಾಕಷ್ಟು ಉತ್ತಮ ಆಟಗಾರರು ತಂಡದಲ್ಲಿದ್ದಾರೆ. ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಭಾರತ ತಂಡ ಚಾಂಪಿಯನ್ ಆಗಲು ಉತ್ತಮ ಅವಕಾಶ ಹೊಂದಿದೆ. ಭಾರತ ಗೆಲ್ಲುವ ಬಗ್ಗೆ ನಾನು ಭರವಸೆ ಹೊಂದಿದ್ದೇನೆ" ಎಂದು ಸಚಿನ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡಗಳನ್ನು ಕಡೆಗಣಿಸುವಂತಿಲ್ಲ
ಇನ್ನು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ಬಗ್ಗೆ ಕೂಡ ಸಚಿನ್ ತೆಂಡುಲ್ಕರ್ ಮಾತನಾಡಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ಆಸ್ಟ್ರೇಲಿಯಾ ಪರಿಸ್ಥಿತಿಗಳು ಹೊಸದಲ್ಲ, ಎರಡೂ ರಾಷ್ಟ್ರಗಳ ಪರಿಸ್ಥಿತಿಗೂ ಆಸ್ಟ್ರೇಲಿಯಾಕ್ಕೂ ಸಾಮ್ಯತೆ ಇರುವದರಿಂದ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಎರಡೂ ತಂಡಗಳು ಡಾರ್ಕ್ ಹಾರ್ಸ್ ಆಗಿದ್ದು, ಅಚ್ಚರಿಯ ಫಲಿತಾಂಶಗಳನ್ನು ನೀಡುವ ಸಾಧ್ಯತೆ ಇದೆ. ಈ ತಂಡಗಳನ್ನು ಕಡೆಗಣಿಸುವಂತಿಲ್ಲ ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಶಮಿ
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications