For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಫೈನಲ್‌ಗೆ ಪ್ರವೇಶಿಸಿದ ಪಾಕಿಸ್ತಾನ: ನ್ಯೂಜಿಲೆಂಡ್ ವಿರುದ್ಧ ಅಮೋಘ ಗೆಲುವು

T20 world cup: Semi Final 1: Pakistan won the match against New Zealand by 7 wickets and enter Final

ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಅಮೋಘ ಪ್ರದರ್ಶನ ನೀಡಿದ್ದು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2022ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಫೈನಲ್‌ಗೆ ಪ್ರವೇಶ ಪಡೆದ ಸಾಧನೆ ಮಾಡಿದೆ. ಒಂದು ಹಂತದಲ್ಲಿ ಟೂರ್ನಿಯಿಂದ ಲೀಗ್ ಹಂತದಿಂದಲೇ ಹೊರಬೀಳುವ ಆತಂಕದಲ್ಲಿದ್ದ ಪಾಕಿಸ್ತಾನ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿದ್ದು ಈಗ ಫೈನಲ್ ಹಂತಕ್ಕೇರಿ ಅಚ್ಚರಿ ಮೂಡಿಸಿದೆ.

ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಪಾಕಿಸ್ತಾನ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಸಾಧಾರಣ ಮೊತ್ತಕ್ಕೆ ನ್ಯೂಜಿಲೆಂಡ್ ತಂಡವನ್ನು ಕಟ್ಟಿ ಹಾಕಿದ ಪಾಕಿಸ್ತಾನ ತಂಡ ಬಳಿಕ ರನ್ ಬೆನ್ನಟ್ಟುವಾದ ಆರಂಭಿಕರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಪಾಕ್ ಪಡೆ ಭರ್ಜರಿಯಾಘಿ ರನ್ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.

ಆರಂಭದಿಂದಲೇ ಕಿವೀಸ್‌ಗೆ ಹಿನ್ನಡೆ

ಆರಂಭದಿಂದಲೇ ಕಿವೀಸ್‌ಗೆ ಹಿನ್ನಡೆ

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ನ್ಯೂಜಿಲೆಂಡ್ ತಂಡದ ವಿರುದ್ಧ ಆರಂಭಿಕ ಓವರ್‌ನಿಂದಲೇ ಪಾಕಿಸ್ತಾನ ತಂಡ ನಿಯಂತ್ರಣ ಸಾಧಿಸಲು ಯಶಸ್ವಿಯಾಯಿತು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡ್ಯಾರೆಲ್ ಮಿಚೆಲ್ ಅವರ ಬ್ಯಾಟಿಂಗ್‌ನ ಕಾರಣದಿಂದಾಗಿ ಕಿವೀಸ್ ಪಡೆ ಸವಾಲಿನ ಮೊತ್ತ ಸೇರಿಸಲು ಯಶಸ್ವಿಯಾಯಿತು. ಈ ಜೋಡಿ ತಂಡವನ್ನು ಕುಸಿತದಿಂದ ಪಾರು ಮಾಡುವುದರ ಜೊತೆಗೆ ಉತ್ತಮ ಜೊತೆಯಾಟದಲ್ಲಿಯೂ ಭಾಗಿಯಾದರು.

ಕೇನ್ ವಿಲಿಯಮ್ಸನ್ 42 ಎಸೆತಗಳಲ್ಲಿ 46 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರೆ ಮಿಷೆಲ್ 35 ಎಸೆತಗಳಲ್ಲಿ 53 ರನ್‌ಗಳನ್ನು ಸಿಡಿಸಿ ಅಜೇಯವಾಗಿ ಉಳಿದರು. ಈ ಇಬ್ಬರು ಆಟಗಾರರ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 4 ವಿಕೆಟ್ ಕಳೆದುಕೊಂಡು 152 ರನ್‌ಗಳನ್ನು ಗಳಿಸಲು ಯಶಸ್ವಿಯಾಯಿತು. ಆದರೆ ಈ ಮೊತ್ತ ಪಾಕಿಸ್ತಾನವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಅದ್ಭುತ ಆರಂಭ ಪಡೆದ ಪಾಕಿಸ್ತಾನ

ಅದ್ಭುತ ಆರಂಭ ಪಡೆದ ಪಾಕಿಸ್ತಾನ

ಇನ್ನು ನ್ಯೂಜಿಲೆಂಡ್ ತಂಡ ನೀಡಿದ 153 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಈ ಬಾರಿಯ ವಿಶ್ವಕಪ್ ಟೂರ್ನಿಯುದ್ದಕ್ಕೂ ವೈಫಲ್ಯ ಅನುಭವಿಸಿದ ಬಾಬರ್ ಅಜಂ ಹಾಗೂ ಮೊಹ್ಮದ್ ರಿಜ್ವಾನ್ ಜೋಡಿ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದರು. ಇಬ್ಬರು ಆಟಗಾರರು ಕೂಡ ಭರ್ಜರಿ ಅರ್ಧ ಶತಕ ಸಿಡಿಸಿ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟ ನೀಡುವ ಮೂಲಕ ಪಂದ್ಯವನ್ನು ಬಹುತೇಕ ವಶಕ್ಕೆ ಪಡೆದುಕೊಂಡಿತ್ತು.

ಪಾಕಿಸ್ತಾನ ಫೈನಲ್‌ಗೆ ಪ್ರವೇಶ

ಬಾಬರ್ ಅಜಂ 42 ಎಸೆತಗಳಲ್ಲಿ 53 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಮೊಹಮ್ಮದ್ ರಿಜ್ವಾನ್ 43 ಎಸೆತಗಳಲ್ಲಿ 57 ರನ್‌ ಸಿಡಿಸಿ ಔಟಾದರು. ನಂತರ ಮೊಹಮ್ಮದ್ ಹ್ಯಾರಿಸ್ 30 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಅಂತಿಮವಾಗಿ ಶಾನ್ ಮಸೂದ್ ಗೆಲುವಿನ ಪ್ರಕ್ರಿಯೆ ಪೂರ್ತಿಗೊಳಿಸಿದರು. ಈ ಮೂಲಕ ಭರ್ಜರಿ 7 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡ ಪಾಕಿಸ್ತಾನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ನ್ಯೂಜಿಲೆಂಡ್ ಆಡುವ ಬಳಗ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

Story first published: Wednesday, November 9, 2022, 17:01 [IST]
Other articles published on Nov 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+