T20 World Cup Semifinals Schedule : ಸೆಮಿಫೈನಲ್‌ನಲ್ಲಿ ಭಾರತದ ಎದುರಾಳಿ ಯಾರು? ಸಂಪೂರ್ಣ ಮಾಹಿತಿ

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಎಲ್ಲಾ ಪಂದ್ಯಗಳು ಮುಕ್ತಾಯವಾಗಿದ್ದು ಯಾವೆಲ್ಲಾ ತಂಡಗಳು ಸೆಮಿಓಯನಲ್ ಹಂತಕ್ಕೆ ಸ್ಥಾನ ಪಡೆದಿದೆ ಎಂಬುದು ಸ್ಪಷ್ಟವಾಗಿದೆ. ಇನ್ನು ಇದೇ ಸಂದರ್ಭದಲ್ಲಿ ಸೆಮಿಫೈನಲ್‌ನಲ್ಲಿ ಯಾವ ತಂಡಕ್ಕೆ ಯಾರು ಎದುರಾಳಿಯಾಗಿರಲಿದ್ದಾರೆ ಎಂಬ ಪ್ರಶ್ನೆಗೂ ಕೂಡ ಈಗ ಸ್ಪಷ್ಟ ಉತ್ತರ ದೊರೆತಿದ್ದು ಸೆಮಿಫೈನಲ್ ಹಣಾಹಣಿಗಾಗಿ ಅಭಿಮಾನಿಗಳು ಈಗ ಕಾತರಿಸುತ್ತಿದ್ದಾರೆ.
ಸೂಪರ್ 12 ಹಂತದಲ್ಲಿ ಅಂತಿಮ ದಿನ ಅನಿರೀಕ್ಷಿತ ಫಲಿತಾಂಶ ಬಂದ ಕಾರಣ ಕ್ರಿಕೆಟ್ ಪಂಡಿತರ ಲೆಕ್ಕಾಚಾರ ತಲೆಕೆಳಗಾಗಿದೆ. ಅದರಲ್ಲೂ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿದ್ದ ದಕ್ಷಿಣ ಆಫ್ರಿಕಾ ತಂಡ ಅಂತಿಮ ಪಂದ್ಯದಲ್ಲಿ ಎಡವಿದ್ದು ನೆದರ್ಲೆಂಡ್ಸ್ ವಿರುದ್ಧ ಆಘಾತಕಾರಿಯಾಗಿ ಸೋಲು ಅನುಭವಿಸಿದೆ. ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಹಂತಕ್ಕೇರುವ ಸ್ಪರ್ಧೆಯಿಂದಲೇ ಹೊರಬಿದ್ದಿದ್ದು ಆಘಾತ ಅನುಭವಿಸಿದೆ. ಇನ್ನು ಟೂರ್ನಿಯಿಂದ ಬಹುತೇಕ ಹೊರಬಿದ್ದಿದ್ದ ಪಾಕಿಸ್ತಾನ ಈ ಫಲಿತಾಂಶದಿಂದಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದು ಈ ಬಾರಿಯ ವಿಶ್ವಕಪ್‌ನ ಅತ್ಯಂತ ದೊಡ್ಡ ತಿರುವು ಎನ್ನಲಾಗಿದೆ.

ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನಕ್ಕೆ ನ್ಯೂಜಿಲೆಂಡ್ ಸವಾಲು
ಈ ಬಾರಿಯ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಸೂಪರ್ 12 ಹಂತದ 1ನೇ ಗುಂಪಿನಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದ ತಂಡ ಹಾಗೂ 2ನೇ ಗುಂಪಿನಲ್ಲಿ 2ನೇ ಸ್ಥಾನವನ್ನು ಪಡೆದ ತಂಡಗಳ ಮಧ್ಯೆ ನಡೆಯಲಿದೆ. ಅಂದರೆ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮೊದಲ ಸೆಮಿಫೈನಲ್‌ನಲ್ಲಿ ಸೆಣೆಸಾಟ ನಡೆಸಲಿದ್ದು ಫೈನಲ್ ಹಂತಕ್ಕೇರಲು ಪೈಪೋಟಿ ನಡೆಸಲಿದೆ. ಈ ಪಂದ್ಯ ನವೆಂಬರ್ 9ರಂದು ಬುಧವಾರ ನಡೆಯಲಿದ್ದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಭಾರತಕ್ಕೆ ಇಂಗ್ಲೆಂಡ್ ಸವಾಲು
ಎರಡನೇ ಸೆಮಿಫೈನಲ್ ಪಂದ್ಯದಲ್ಲಿ 2ನೇ ಗುಂಪಿನಲ್ಲಿ ಮೊದಲ ಸ್ಥಾವನ್ನು ಪಡೆದ ಭಾರತ ತಂಡ ಹಾಗೂ 1ನೇ ಗುಂಪಿನಲ್ಲಿ 2ನೇ ಸ್ಥಾನವನ್ನು ಪಡೆದ ಇಂಗ್ಲೆಂಡ್ ತಂಡಗಳ ಮಧ್ಯೆ ಸೆಣೆಸಾಟ ನಡೆಯಲಿದೆ. ಈ ಪಂದ್ಯ ಅಡಿಲೇಡ್‌ನಲ್ಲಿರುವ ಅಡಿಲೇಡ್ ಕ್ರಿಕೆಟ್ ಮೈದಾನದಲ್ಲಿ ನವೆಂಬರ್ 10 ಗುರುವಾರದಂದು ನಡೆಯಲಿದೆ. ಎರಡು ತಂಡಗಳು ಕೂಡ ಅದ್ಭುತ ಆಟಗಾರರ ಪಡೆಯನ್ನು ಹೊಂದಿರುವ ಕಾರಣ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆಯಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಟಿ20 ವಿಶ್ವಕಪ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದ ಐಸಿಸಿ: ಸೆಮಿಫೈನಲ್‌ಗೂ ಮುನ್ನ ದೊಡ್ಡ ನಿರ್ಧಾರ!

ಸೆಮಿಫೈನಲ್ ಹಂತಕ್ಕೆ ಭಾರತದ ಹಾದಿ
ಮೆಲ್ಬೋರ್ನ್‌ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲುವು
ಸಿಡ್ನಿಯಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಗೆಲುವು
ಪರ್ತ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೋಲು
ಅಡಿಲೇಡ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು
ಮೆಲ್ಬೋರ್ನ್ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಗೆಲುವು
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications