T20 World Cup: ಭಾರತ ತಂಡದ ಆಯ್ಕೆ ನಂತರ ಟ್ರೆಂಡ್ ಆದ ಈ ಆಟಗಾರರು; ಬಿಸಿಸಿಐ ವಿರುದ್ಧ ಆಕ್ರೋಶ

ಆಸ್ಟ್ರೇಲಿಯಾದಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತವು ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿತು ಮತ್ತು ಕಳಪೆ ಏಷ್ಯಾ ಕಪ್ ಪ್ರದರ್ಶನದ ಹೊರತಾಗಿಯೂ, ಅದೇ ತಂಡಕ್ಕೆ ಮಣೆ ಹಾಕಲಾಗಿದೆ.
ಆಸ್ಟ್ರೇಲಿಯದಲ್ಲಿ ಅಕ್ಟೋಬರ್ 16ರಿಂದ ಆರಂಭವಾಗಲಿರುವ ಮುಂಬರುವ ಟಿ20 ವಿಶ್ವಕಪ್‌ಗಾಗಿ ಗಾಯದಿಂದ ಚೇತರಿಸಿಕೊಂಡು ಭಾರತ ತಂಡಕ್ಕೆ ಮತ್ತೊಮ್ಮೆ ಫಿಟ್ ಆಗಿ ಹಿಂತಿರುಗಿರುವ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಅವರು ವೇಗದ ದಾಳಿಯನ್ನು ಬಲಪಡಿಸಲಿದ್ದಾರೆ.
ಮೊಹಮ್ಮದ್ ಶಮಿ, ಸಂಜು ಸ್ಯಾಮ್ಸನ್ ಹೆಸರು ಟ್ರೆಂಡ್
ಗಾಯಗೊಂಡ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಏಷ್ಯಾ ಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್ ಅವರಂತಹ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡವು ಘೋಷಿಸಿದ ತಕ್ಷಣವೇ, ಅನುಭವಿ ವೇಗಿ ಮೊಹಮ್ಮದ್ ಶಮಿ ಮತ್ತು ವಿಕೆಟ್-ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಹೆಸರುಗಳು ಟ್ವಿಟ್ಟರ್‌ನಲ್ಲಿ ಸೌಂಡ್ ಮಾಡಲು ಪ್ರಾರಂಭಿಸಿದವು ಮತ್ತು ಅಂತಿಮವಾಗಿ ಟ್ರೆಂಡಿಂಗ್ ಪ್ರಾರಂಭಿಸಿದವು.
ಸಂಜು ಸ್ಯಾಮ್ಸನ್ ಅಭಿಮಾನಿಗಳ ಮೆಚ್ಚಿನ ಆಟಗಾರರಾಗಿದ್ದಾರೆ
ಇಬ್ಬರೂ ಆಟಗಾರರು ಅಭಿಮಾನಿಗಳ ಮೆಚ್ಚಿನ ಆಟಗಾರರಾಗಿದ್ದಾರೆ ಮತ್ತು ಐಪಿಎಲ್ 2022ರಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಪ್ರಶಸ್ತಿ ವಿಜೇತ ಗುಜರಾತ್ ಟೈಟಾನ್ಸ್‌ಗೆ ಮೊಹಮ್ಮದ್ ಶಮಿ ಪ್ರಮುಖ ವಿಕೆಟ್ ಟೇಕರ್ ಆಗಿದ್ದರೆ, ಸಂಜು ಸ್ಯಾಮ್ಸನ್ 2008ರಲ್ಲಿ ಟ್ರೋಫಿ ಗೆದ್ದ ನಂತರ ರಾಜಸ್ಥಾನ ರಾಯಲ್ಸ್‌ನ ಮೊದಲ ಫೈನಲ್‌ಗೆ ಮುನ್ನಡೆಸುವ ಮೂಲಕ ಎಲ್ಲರನ್ನೂ ಮೆಚ್ಚಿಸಿದ್ದರು.
ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಿದ್ದು, ವೇಗಿ ಅವೇಶ್ ಖಾನ್ ಮತ್ತು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರು ವಿಶ್ವಕಪ್ ತಂಡದಿಂದ ವಂಚಿತರಾದ ಇಬ್ಬರು ಆಟಗಾರರಾಗಿದ್ದಾರೆ.
ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಶಮಿ
ಆದಾಗ್ಯೂ, ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಟಿ20 ತಂಡಕ್ಕೆ ಮರಳಿದರು, ಏಕೆಂದರೆ ಅವರು ದೊಡ್ಡ ಪಂದ್ಯಾವಳಿಗೂ ಮೊದಲು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ ಮತ್ತು ಟಿ20 ವಿಶ್ವಕಪ್‌ಗೆ ಪ್ರಯಾಣಿಸುವ ನಾಲ್ಕು ಸ್ಟ್ಯಾಂಡ್-ಬೈಗಳಲ್ಲಿ ಒಬ್ಬರು. ಇತರ ಮೂವರು ಮೀಸಲು ಆಟಗಾರರೆಂದರೆ ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್ ಮತ್ತು ವೇಗಿ ದೀಪಕ್ ಚಹಾರ್.
ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದರೆ, ಸಂಜು ಸ್ಯಾಮ್ಸನ್ ಹೆಸರು ಯಾವುದರಲ್ಲೂ ಇಲ್ಲ. ಇದು ಅವರ ಅವರ ಮತ್ತು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕೋಪ ತರಿಸಿದ್ದು, ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್.
ಸ್ಟ್ಯಾಂಡ್‌ಬೈ ಆಟಗಾರರು - ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications