ಜಿಂಬಾಬ್ವೆ ವಿರುದ್ಧ ಮುಖಭಂಗ ಅನುಭವಿಸಿದ ಪಾಕಿಸ್ತಾನ: ಭಾರತದ ವಿಶ್ವಕಪ್ ಪ್ರಯಾಣದ ಬಗ್ಗೆ ಭವಿಷ್ಯ ನುಡಿದ ಅಖ್ತರ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಅದ್ಭುತ ಆರಂಭವನ್ನು ಪಡೆದುಕೊಂಡಿದ್ದು ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಮತ್ತೊಂದೆಡೆ ಪಾಕಿಸ್ತಾನದ ಪರಿಸ್ಥಿತಿ ಭಿನ್ನವಾಗಿದ್ದು ಆರಂಭಿಕ ಎರಡು ಪಂದ್ಯಗಳಲ್ಲಿಯೂ ಸೋತು ಟೂರ್ನಿಯಿಂದ ಹೊರಬೀಳು ಆತಂಕದಲ್ಲಿದೆ. ಮುಂದಿನ ಎಲ್ಲಾ ಪಂದ್ಯಗಳು ಕೂಡ ಪಾಕಿಸ್ತಾನ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂಥಾ ಪರಿಸ್ಥಿತಿಯಿದೆ.
ಈ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಟೀಮ್ ಇಂಡಿಯಾದ ಈ ಬಾರಿಯ ವಿಶ್ವಕಪ್ ಪ್ರಯಾಣದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ್ದು ಯಾವ ಹಂತವನ್ನು ಪ್ರವೇಶಿಸಲಿದೆ ಎಂದು ಶೋಯೆಬ್ ಅಖ್ತರ್ ಭವಿಷ್ಯ ನುಡಿದಿದ್ದು ಕುತೂಹಲ ಮೂಡಿಸಿದೆ.

ಪಾಕ್ ಬೇಗ ವಾಪಾಸಾಗುತ್ತೆ ಎಂದು ಮೊದಲೇ ಹೇಳಿದ್ದೆ ಎಂದ ಅಖ್ತರ್
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಪಾಕ್ ತಂಡದ ಬಗ್ಗೆ ಕಟು ಟೀಕೆಯನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಖ್ತರ್ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಬೇಗನೆ ವಾಪಾಸಗಾಲಿದೆ ಎಂದು ಮೊದಲೇ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ. ಆಟಗಾರರ ಆಯ್ಕೆಯ ಬಗ್ಗೆ ಪಾಕ್ ನಾಯಕ ಬಾಬರ್ ಅಜಂ ಬಗ್ಗೆ ಟೀಕೆ ಮಾಡಿರುವ ಶೋಯೆಬ್ ಅಖ್ತರ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಬಗ್ಗೆಯೂ ಅಸಮಾಧಾನ ಹೊರ ಹಾಕಿದ್ದಾರೆ.

ಭಾರತ ಸೆಮಿಫೈನಲ್‌ನಲ್ಲಿ ವಾಪಾಸಾಗಲಿದೆ ಎಂದ ಅಖ್ತರ್
ಇನ್ನು ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಭಾರತ ತಂಡದ ಬಗ್ಗೆಯೂ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅಖ್ತರ್ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಹೊರಬರಲಿದೆ ಎಂದಿದ್ದಾರೆ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್. ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು 2ನೇ ಗುಂಪಿನಲ್ಲಿ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂಬುದು ಗಮನಾರ್ಹ ಅಂಶ.

ಮುಂದಿನ ಸೆಣೆಸಾಟ ಭಾನುವಾರ
ಭಾರತ ಹಾಗೂ ಪಾಕಿಸ್ತಾನ ತಂಡಗಳು ತಮ್ಮ ಮೂರನೇ ಪಂದ್ಯವನ್ನು ಭಾನುವಾರ ಆಡಲಿದೆ. ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡಕ್ಕೆ ದಕ್ಷಿಣ ಆಫ್ರಿಕಾ ತಂಡ ಎದುರಾಳಿಯಾಗಿದ್ದರೆ ಪಾಕಿಸ್ತಾನ ತಂಡಕ್ಕೆ ನೆದರ್ಲೆಂಡ್ಸ್ ತಂಡ ಸವಾಲೊಡ್ಡಲಿದೆ. ಭಾರತ ತನ್ನ ಗೆಲುವಿನ ಲಯವನ್ನು ಮುಂದುವರಿಸುವ ಆತ್ಮವಿಸ್ವಾಸದಲ್ಲಿದ್ದರೆ ಪಾಕಿಸ್ತಾನ ತಂಡಕ್ಕೆ ಟೂರ್ನಿಯಲ್ಲಿ ಮೊದಲ ಗೆಲುವು ಕಾಣುವ ಕಾತುರವಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications