ಟಿ20 ವಿಶ್ವಕಪ್: ಭಾರತ ಈಗ ಸಾಮಾನ್ಯ ತಂಡ ಎಂದ ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಖ್ತರ್

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡದ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ ಭಾರತ ಭಾರೀ ಅಂತರದಿಂದ ಸೋಲು ಕಂಡಿದೆ. ಈ ಸೋಲಿನ ನಂತರ ಭಾರತ ಸೆಮಿಫೈನಲ್ ಪ್ರವೇಶದ ಹಾದಿಯನ್ನು ದುರ್ಗಮಗೊಳಿಸಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರ ಈ ಪ್ರದರ್ಶನ ಈಗ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಮಡದ ಪ್ರದರ್ಶನದ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಪ್ರತಿಕ್ರಿಯಿಸಿದ್ದಾರೆ. ಭಾರತ ಈಗ ಬಹಳ ಸಾಮಾನ್ಯ ತಂಡದಂತೆ ಭಾಸವಾಗುತ್ತಿದೆ ಎಂದಿದ್ದಾರೆ ಶೋಯೆಬ್ ಅಖ್ತರ್.
ಇನ್ನು ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವ ಬದಲಿಗೆ ಯುವ ಆಟಗಾರನನ್ನು ಕಣಕ್ಕಿಳಿಸಿದ ಕಾರಣವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು.
"ಅವರು ಯಾಕೆ ಇಶಾನ್ ಕಿಶನ್‌ನನ್ನು ಆರಂಭಿಕನಾಗಿ ಕಣಕ್ಕಿಳಿಸಿದರು? ಹಾರ್ದಿಕ್ ಪಾಂಡ್ಯ ಪಂದ್ಯದ ಅಂತ್ಯದಲ್ಲಿ ಬೌಲಿಂಗ್ ಮಾಡಿದ್ದಾರೆ. ಅವರಿಗೆ ಆರಂಭದಲ್ಲಿ ಬೌಲಿಂಗ್ ನೀಡಬೇಕಿತ್ತು. ಭಾರತ ಯಾವ ರೀತಿಯ ಯೋಜನೆಯೊಂದಿಗೆ ಆಡುತ್ತಿದ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದೊಂದು ರೀತಿ ಸಂಪೂರ್ಣ ಸೋತ ತಂಡವಾಗಿದೆ" ಎಂದು ಶೋಯೆಬ್ ಅಖ್ತರ್ ಟ್ವಿಟ್ಟರ್‌ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
"ಪ್ರತಿಯೊಬ್ಬರು ಕೂಡ ಆತಂಕಗೊಂಡಿದ್ದಾರೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬೇರೆ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಹೊಸ ಹುಡುಗ ಅಗ್ರ ಕ್ರಮಾಂಕದಲ್ಲಿ ಆಡಲು ಇಳಿದಿದ್ದಾನೆ. ಅವರು ಟಾಸ್ ಕಳೆದುಕೊಂಡರು ಹಾಗೂ ಗಾಬರಿಯಾದರು" ಎಂದು ಟೀಮ್ ಇಂಡಿಯಾ ಬಗ್ಗೆ ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ಬಳಿಕ ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ ಗಳಿಸಿದ್ದು 110 ರನ್. ಟೀಮ್ ಇಂಡಿಯಾದ ಅಗ್ರ ಕ್ರಮಾಂಕದಲ್ಲಿ ಇಳಿದ ನಾಲ್ವರು ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್, ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಾಗಿ ಗಳಿಸಿದ್ದು 48 ರನ್ ಮಾತ್ರ. ಶೋಯೆಬ್ ಅಖ್ತರ್ ಈ ವಿಚಾರವಾಗಿ ಮಾತನಾಡುತ್ತಾ ಬ್ಯಾಟರ್‌ಗಳು ಚೆಂಡು ಸಂಪರ್ಕ ಸಾಧ್ಯವಾಗದಿದ್ದರೂ 20 ಓವರ್‌ಗಳನ್ನು ಆಡುವ ಪ್ರಯತ್ನವನ್ನು ನಡೆಸಲೇಬೇಕು ಎಂದಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಭಾರತೀಯ ತಂಡದ ಬೌಲಿಂಗ್ ದಾಳಿಯ ಬಗ್ಗೆಯೂ ಶೋಯೆಬ್ ಅಖ್ತರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾ ಪರವಾಗಿ 2 ವಿಕೆಟ್ ಪಡೆದ ಜಸ್ಪ್ರೀತ್ ಬೂಮ್ರಾ ಹೊರತುಪಡಿಸಿದರೆ ಉಳಿದ ಎಲ್ಲಾ ಬೌಲರ್‌ಗಳು ಕೂಡ ತುಂಬಾ ಸಾಮಾನ್ಯ ಪ್ರದರ್ಶನ ನೀಡಿದರು ಎಂದಿದ್ದಾರೆ. ನ್ಯೂಜಿಲೆಂಡ್ ತಂಡ ಕಳೆದುಕೊಂಡಿದ್ದ 2 ವಿಕೆಟ್‌ಗಳು ಕೂಡ ಜಸ್ಪ್ರೀತ್ ಬೂಮ್ರಾ ಎಸೆತಕ್ಕೆ ಬಿದ್ದಿತ್ತು.
ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್ (ವಿಕೆ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ ಮೀಸಲು: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ದೀಪಕ್ ಚಾಹರ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications