ಇಂದಿನಿಂದ ಟಿ20 ವಿಶ್ವಕಪ್ ಆರಂಭ: ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ನಮೀಬಿಯಾ ಸವಾಲು

ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗುತ್ತಿದ್ದು ಅರ್ಹತಾ ಸುತ್ತಿನ ಪಂದ್ಯಗಳಿಗೆ ಚಾಲನೆ ದೊರೆಯಲಿದೆ. ಎಂಟು ತಂಡಗಳು ಈ ಸುತ್ತಿನಲ್ಲಿದ್ದು ಸೂಪರ್ 12 ಹಂತದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳಿಗಾಗಿ ಹೋರಾಟ ನಡೆಸಲಿದೆ. ಇಂದು ನಡೆಯುವ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಲಿದೆ.
ಅರ್ಹತಾ ಸುತ್ತಿನಲ್ಲಿರುವ ತಂಡಗಳನ್ನು ತಲಾ ನಾಲ್ಕು ತಂಡಗಳ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ತಮ್ಮ ಗುಂಪಿನಲ್ಲಿರುವ ಇತರ ಮೂರು ತಂಡಗಳ ಜೊತೆಗೆ ಒಂದೊಂದು ಪಂದ್ಯಗಳನ್ನು ಆಡಿ ಮುಂದಿನ ಹಂತಕ್ಕೇರುವ ಪ್ರಯತ್ನ ನಡೆಸಲಿದೆ ಈ ತಂಡಗಳು. ಅರ್ಹತಾ ಸುತ್ತಿನಲ್ಲಿ ನಮೀಬಿಯಾ, ಶ್ರೀಲಂಕಾ, ನೆದರ್ಲೆಂಡ್ಸ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಗ್ರೂಪ್ ಎ ನಲ್ಲಿ ಸ್ಪರ್ಧಿಸಲಿದ್ದರೆ ಐರ್ಲೆಂಡ್, ಸ್ಕಾಟ್‌ಲೆಂಡ್, ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ತಂಡಗಳು ಗ್ರೂಪ್‌ಬಿನಲ್ಲಿವೆ. ಈ ಎಂಟು ತಂಡಗಳ ಪೈಕಿ ಅಂಕಪಟ್ಟಿಯಲ್ಲಿ ಎರಡು ಗುಂಪುಗಳಲ್ಲಿಯೂ ಅಗ್ರಸ್ಥಾನವನ್ನು ಪಡೆದುಕೊಂಡ ತಲಾ ಎರಡು ತಂಡಗಳು ಮಾತ್ರ ಮುಂದಿನ ಹಂತಕ್ಕೇರಲು ಯಶಸ್ವಿಯಾಗಲಿದೆ.
ಇಂದು ನಡೆಯಲಿದೆ ಎರಡು ಪಂದ್ಯಗಳು: ವಿಶ್ವಕಪ್‌ನ ಆರಂಭಿಕ ದಿನವಾದ ಇಂದು ಎರಡು ಪಂದ್ಯಗಳು ನಡೆಯಲಿದೆ. ಗ್ರೂಪ್ 'ಎ'ಯ ಪಂದ್ಯಗಳು ಇದಾಗಿರಲಿದ್ದು ಮೊದಲಿಗೆ ಶ್ರೀಲಂಕಾ ಹಾಗೂ ನಮೀಬಿಯಾ ಮುಖಾಮುಖಿಯಾಗಲಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯದಲ್ಲಿ ಯುನೈಟೆಡ್ ಎಮಿರೇಟ್ಸ್ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಪಂದ್ಯಗಳು ಆರಂಭವಾಗಲಿದೆ.
ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳ ಸ್ಕ್ವಾಡ್ ಹೀಗಿದೆ
ಶ್ರೀಲಂಕಾ: ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್, ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಧನಂಜಯ ಡಿ ಸಿಲ್ವಾ, ದನುಷ್ಕ ಗುಣತಿಲಕ, ಭಾನುಕಾ ರಾಜಪಕ್ಸೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ದುಷ್ಮಂತ ಚಮೀರ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ, ಚರಿತ್ ಅಸಲಂಕಾ
ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್ (ವಿಕೆಟ್ ಕೀಪರ್), ಸ್ಟೀಫನ್ ಬಾರ್ಡ್, ಡೇವಿಡ್ ವೈಸ್, ಜಾನ್ ನಿಕೋಲ್ ಲೋಫ್ಟಿ-ಈಟನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಪಿಕ್ಕಿ ಯಾ ಫ್ರಾನ್ಸ್, ರೂಬೆನ್ ಟ್ರಂಪೆಲ್ಮನ್, ಬರ್ನಾರ್ಡ್ ಸ್ಕೋಲ್ಟ್ಜ್, ತಂಗೇನಿ ಲುಂಗಮೆನಿ, ಬೆನ್ ಶಿಕೊಂಗೊ, ಮೈಕೆಲ್ ವ್ಯಾನ್ ಲಿಂಗೆನ್, ಲೋಹಾಂಡ್ರೆ ಲೌರೆನ್ಸ್, ಕಾರ್ಲ್ ಬಿರ್ಕೆನ್‌ಸ್ಟಾಕ್, ದಿವಾನ್ ಲಾ ಕಾಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications