T20 World Cup 2022: ಭಾರತ ತಂಡದ ಘೋಷಣೆ ದಿನಾಂಕ ಫೈನಲ್, ಆದ್ರೆ ಇನ್ನೂ ತಪ್ಪಿಲ್ಲ ಸೆಲೆಕ್ಷನ್ ತಲೆನೋವು!

ಟಿ20 ವಿಶ್ವಕಪ್ ಗೆಲ್ಲುವ ಕನಸಿಗೆ ಎಲ್ಲಾ ತಂಡಗಳು ತಯಾರಿ ನಡೆಸುತ್ತಿವೆ. ಆಸ್ಟ್ರೇಲಿಯಾ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್‌ನಲ್ಲಿ ಆತಿಥೇಯರಾಗಿ ಕಾಂಗರೂಗಳು ಫೇವರಿಟ್ ಆಗಿದ್ದಾರೆ. ಭಾರತ, ಇಂಗ್ಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿ ರೇಸ್‌ನಲ್ಲಿದ್ದು, ಆಸ್ಟ್ರೇಲಿಯಾಕ್ಕೆ ದೊಡ್ಡ ತಲೆನೋವು ನೀಡುವ ಸಾಮರ್ಥ್ಯ ಹೊಂದಿವೆ.
ಇದರಲ್ಲಿ ಭಾರತವೇ ಪ್ರಬಲ ಪ್ರತಿಸ್ಪರ್ಧಿ ಎಂದು ಹೇಳಬಹುದು. ಅನೇಕ ಸ್ಟಾರ್ ಆಟಗಾರರನ್ನ ಒಳಗೊಂಡಿರುವ ಭಾರತ ತಂಡದಲ್ಲಿ ಯಾರು ಅಂತಿಮವಾಗಿ ಆಯ್ಕೆಯಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯ ತಂಡದಲ್ಲಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಹಾಗಾಗಿ ಆಯ್ಕೆದಾರರಿಗೆ ಹೆಚ್ಚಿನ ಕೆಲಸವಿರುತ್ತದೆ. ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸುವ ದಿನಾಂಕ ಹೊರಬಿದ್ದಿದೆ.

ಸೆಪ್ಟೆಂಬರ್ 15ಕ್ಕೆ ಟೀಂ ಇಂಡಿಯಾ ಪ್ರಕಟ
ಸೆಪ್ಟೆಂಬರ್ 15 ರಂದು ಭಾರತ ತಂಡವನ್ನು ಪ್ರಕಟಿಸಲಾಗುವುದು ಎಂಬ ಮಾಹಿತಿ ಸಿಕ್ಕಿದೆ. ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಲು ಐಸಿಸಿ ಸೆಪ್ಟೆಂಬರ್ 16 ಕೊನೆಯ ದಿನಾಂಕ ಎಂದು ಘೋಷಿಸಿದೆ. ಅದಕ್ಕೂ ಮುನ್ನಾ ದಿನ ಭಾರತ ತಂಡ ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಭಾರತ ತಂಡವನ್ನು ಈಗಾಗಲೇ ಶೇಕಡಾ 80-90 ರಷ್ಟು ನಿರ್ಧರಿಸಲಾಗಿದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಳೆದ ದಿನ ಹೇಳಿದ್ದರು. ಹೀಗಾಗಿ ಭಾರತ ತಂಡದಲ್ಲಿ ಕೇವಲ ಎರಡು ಅಥವಾ ಮೂರು ಬದಲಾವಣೆ ಆಗುವ ಸಾಧ್ಯತೆ ಇದೆ.
Ind vs Pak: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಶೇ.60ರಷ್ಟು ಗೆಲುವಿನ ಅವಕಾಶವಿದೆ ಎಂದ ಡ್ಯಾನಿಶ್ ಕನೇರಿಯಾ

ಸ್ಟಾರ್ ಆಟಗಾರರ ಮೇಲೆ ತೂಗುಗತ್ತಿ!
ಹಿರಿಯ ಆಟಗಾರರಾದ ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಇರುವುದು ಖಚಿತವಾಗಿದೆ. ಇದರಲ್ಲಿ ಕೆಎಲ್ ರಾಹುಲ್ ಅವರ ಫಿಟ್ನೆಸ್ ಮತ್ತು ವಿರಾಟ್ ಕೊಹ್ಲಿ ಅವರ ಫಾರ್ಮ್ ನಿರ್ಣಾಯಕವಾಗಲಿದೆ. ಏಷ್ಯಾಕಪ್ ನಲ್ಲಿ ಕೊಹ್ಲಿಯ ರಂಗು ಮಂಕಾದರೆ ಭಾರತ ಟಿ20 ವಿಶ್ವಕಪ್ ನಲ್ಲಿ ಸ್ಥಾನ ಪಡೆಯುವುದು ಕಷ್ಟ ಎಂದೇ ಹೇಳಬಹುದು. ಆದರೆ, ಹಿರಿಯ ಆಟಗಾರನಾಗಿ ಹಾಗೂ ಲೆಜೆಂಡರಿ ಬ್ಯಾಟ್ಸ್‌ಮನ್ ಆಗಿ ಭಾರತ ಕೊಹ್ಲಿಯನ್ನು ಬದಲಿಸುವ ಸಾಧ್ಯತೆ ಕಡಿಮೆ.
ನಾಯಕನಾಗಿ ತನ್ನ ಮುಖ್ಯ ಜವಾಬ್ಧಾರಿ ಯಾವುದೆಂದು ಹೇಳಿದ ರೋಹಿತ್ ಶರ್ಮಾ

ಇಬ್ಬರು ಪ್ರಮುಖ ಆಟಗಾರರಿಗೆ ಇಂಜ್ಯುರಿ
ಭಾರತದ ಮುಂದಿರುವ ಎರಡು ದೊಡ್ಡ ಸವಾಲು ಎಂದರೆ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯಗಳು. ಗಾಯದ ಸಮಸ್ಯೆಯಿಂದ ಇಬ್ಬರೂ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ. ಹೀಗಿರುವಾಗ ಟಿ20 ವಿಶ್ವಕಪ್‌ಗೂ ಮುನ್ನ ಪೂರ್ಣ ಪ್ರಮಾಣದ ಫಿಟ್‌ನೆಸ್ ತಲುಪುವರೇ ಎಂಬುದನ್ನು ಕಾದು ನೋಡಬೇಕಿದೆ. ಇವರಿಬ್ಬರ ಅನುಪಸ್ಥಿತಿಯಲ್ಲಿ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಮೊಹಮ್ಮದ್ ಶಮಿ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ.

ಟೀಂ ಇಂಡಿಯಾದ ಪ್ರಮುಖ ಬ್ಯಾಟರ್ಸ್
ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನೊಳಗೊಂಡ ಮಧ್ಯಮ ಕ್ರಮಾಂಕ ಕೂಡ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಬೆನ್ನೆಲುಬಾಗಲಿದೆ. ಟಿ20 ವಿಶ್ವಕಪ್‌ಗೆ ಪರಿಗಣಿಸಲು ಯಾವುದೇ ಅಂದಾಜಿಲ್ಲಿ ಇರದ ಆರ್ ಅಶ್ವಿನ್ ಅವರನ್ನು ಭಾರತ ಟಿ20 ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೆಯೇ ಎಂದು ನೋಡಬೇಕಾಗಿದೆ. ಬ್ಯಾಕ್‌ಅಪ್ ಆಟಗಾರರ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಸೇರ್ಪಡೆಯಾಗುತ್ತಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications