T20 World Cup Super : ಭಾರತಕ್ಕೆ 188 ರನ್ ಗುರಿ ನೀಡಿದ ದಕ್ಷಿಣ ಆಫ್ರಿಕಾ
ಅಹಮದಾಬಾದ್: ಭರವಸೆಯ ಬ್ಯಾಟರ್ ಡೇವಿಡ್ ಮಿಲ್ಲರ್ ಬಾರಿಸಿದ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಬ್ ಅವರ ಬಿರುಸಿನ ಬ್ಯಾಟಿಂಗ್ ಬಲದಿಂದ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ 188 ರನ್‌ಗಳ ಗುರಿಯನ್ನು ಭಾರತ ತಂಡಕ್ಕೆ ನೀಡಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಮೊದಲು ಬ್ಯಾಟ್ ಮಾಡುವ ನಿರ್ಧಾರವನ್ನು ಮಾಡಿತು. ಆದರೆ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳು ವಿಫಲರಾದರು. ಇವರು ಭಾರತದ ಬಿಗುವಿನ ವೇಗದ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಇನಿಂಗ್ಸ್‌ನ ಎರಡನೇ ಓವರ್ ಬೌಲ್ ಮಾಡಿದ ಜಸ್ಪ್ರೀತ್ ಬುಮ್ರಾ ಅವರು ಕ್ವಿಂಟನ್ ಡಿಕಾಕ್ ಅವರಿಗೆ ಖೆಡ್ಡಾ ತೋಡಿದರು.

ಎರಡನೇ ಓವರ್‌ನ ನಾಲ್ಕನೇ ಎಸೆತವನ್ನು ಬುಮ್ರಾ ಫುಲ್ ಟಾಸ್ ಮಾಡಿದರು. ಇದನ್ನು ಸಮರ್ಥವಾಗಿ ಬಳಸಿಕೊಂಡ ಡಿಕಾಕ್ ಬೌಂಡರಿ ಬಾರಿಸಿದರು. ಇದಾದ ಬಳಿಕ ನಂತರದ ಎಸೆತವನ್ನು ತಪ್ಪಾಗಿ ಗುರುತಿಸಿದ ಡಿಕಾಕ್ ಬೋಲ್ಡ್ ಆದರು. 10 ರನ್‌ಗಳಿಗೆ ದಕ್ಷಿಣ ಆಫ್ರಿಕಾ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಏಡನ್ ಮಾರ್ಕ್ರಾಮ್ ಅವರು ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಅರ್ಶದೀಪ್ ಎಸೆದ ಔಟ್ ಸೈಡ್ ಆಫ್ ಚೆಂಡನ್ನು ಮಿಡ್ ಆಫ್ ಮೇಲೆ ಬೌಂಡರಿ ಬಾರಿಸಲು ಹೋಗಿ ಹಾರ್ದಿಕ್ ಪಾಂಡ್ಯ ಅವರಿಗೆ ಕ್ಯಾಚ್ ನೀಡಿದರು.
ರಿಯಾನ್ ರಿಕಲ್ಟನ್ ಅವರು ಸಹ ಬಿಗ್ ಇನಿಂಗ್ಸ್ ಕಟ್ಟುವ ಭರವಸೆ ಮೂಡಿಸಿದ್ದರು. ಆದರೆ ಇವರ ಆಟಕ್ಕೆ ಬುಮ್ರಾ ಸ್ಲೋವರ್ ಒನ್ ಎಸೆತದ ಮೂಲಕ ಬ್ರೇಕ್ ಹಾಕಿದರು. ಇವರು ಬುಮ್ರಾ ಅವರ ಎಸೆತವನ್ನು ತಪ್ಪಾಗಿ ಅರ್ಥಹಿಸಿಕೊಂಡು ಮಿಡ್ ಆಫ್‌ನಲ್ಲಿದ್ದ ಶಿವಂ ದುಬೆಗೆ ಕ್ಯಾಚ್ ನೀಡಿದರು. ದಕ್ಷಿಣ ಆಫ್ರಿಕಾ 20 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಲ್ಲದೆ ಆಫ್ರಿಕಾ ಪವರ್ ಪ್ಲೇನಲ್ಲಿ 3 ವಿಕೆಟ್ ನಷ್ಟಕ್ಕೆ 41 ರನ್ ಸೇರಿಸಿತು. ಈ ಜೋಡಿ ದಕ್ಷಿಣ ಆಫ್ರಿಕಾ ತಂಡ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕುವಲ್ಲಿ ನೆರವಾದರು.
ಡೇವಿಡ್ ಮಿಲ್ಲರ್ ಹಾಗೂ ಡೇವಾಲ್ಡ್ ಬ್ರೆವಿಸ್ ಜೋಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿತು. ಈ ಜೋಡಿ 51 ಎಸೆತಗಳ ವರೆಗೆ ವಿಕೆಟ್ ಬೀಳದಂತೆ ನೋಡಿಕೊಂಡು ಬ್ಯಾಟ್ ಮಾಡಿದ ಮಿಲ್ಲರ್ ಹಾಗೂ ಬ್ರೆವಿಸ್ 97 ರನ್ ಸೇರಿಸಿತು. ಈ ಹಂತದಲ್ಲಿ ಮಿನಿ ಎಬಿಡಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 45 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ಮಿಲ್ಲರ್ ಅರ್ಧಶತಕ
ದಕ್ಷಿಣ ಆಫ್ರಿಕಾದ ತಂಡದ ಭರವಸೆಯ ಮಧ್ಯಮ ಕ್ರಮಾಂಕದ ಆಟಗಾರ ಡೇವಿಡ್ ಮಿಲ್ಲರ್ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಇವರು 35 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ನೆರವಿನಿಂದ 63 ರನ್ ಬಾರಿಸಿದರು. ಟ್ರಿಸ್ಟನ್ ಸ್ಟಬ್ಬ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಇವರು ಕೇವಲ 24 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 44 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 187 ರನ್ ಸೇರಿಸಿತು. ಭಾರತದ ಪರ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 3, ಅರ್ಶದೀಪ್ ಸಿಂಗ್ 2 ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications