ಕೊಲಂಬೊದಲ್ಲಿ ಜಿಂಬಾಬ್ವೆ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟಿ20 ವಿಶ್ವಕಪ್‌ನ ಮೊದಲ ಅಪ್‌ಸೆಟ್ ದಾಖಲಾಗಿದೆ. ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ವಿಶ್ವಕಪ್‌ನಲ್ಲಿ 23 ರನ್‌ಗಳಿಂದ ಜಿಂಬಾಬ್ವೆ ಜಯ ಸಾಧಿಸಿ ದಾಖಲೆ ಬರೆದಿದೆ. ಜಿಂಬಾಬ್ವೆ ಇತಿಹಾಸದ ಪುಟಕ್ಕೆ ಮತ್ತೊಮ್ಮೆ ಎಂಟ್ರಿ ಪಡೆದಿದೆ. ಟಿ20 ವಿಶ್ವಕಪ್‌ನಲ್ಲಿ ಈ ರೀತಿಯ ಫಲಿತಾಂಶಗಳು ಹೊರಹೊಮ್ಮಿದು ಇದೇ ಮೊದಲೇನಲ್ಲ. ಇದಕ್ಕೂ ಮೊದಲು ಈ ರೀತಿಯ ಫಲಿತಾಂಶಗಳು ಬಂದಿವೆ. ಈ ಬಗ್ಗೆ ವರದಿ ಇಲ್ಲಿದೆ.
ಟಿ20 ವಿಶ್ವಕಪ್‌ನ "ಬಿ" ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 169 ರನ್ ಸೇರಿಸಿತು. ಈ ವೇಳೆ ಜಿಂಬಾಬ್ವೆ ತಂಡದ ಪರ ಆರಂಭಿಕ ಆಟಗಾರ ಬ್ರಿಯಾನ್ ಬೆನೆಟ್ ಮನಮೋಹಕ ಬ್ಯಾಟಿಂಗ್ ನಡೆಸಿದರು. ಅಲ್ಲದೆ 7 ಬೌಂಡರಿ ನೆರವಿನಿಂದ ಅಜೇಯ 64 ರನ್ ಬಾರಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕುವಲ್ಲಿ ನೆರವಾದರು. ತಡಿವಾನಾಶೆ ಮರುಮಣಿ (35), ರಯಾನ್ ಬರ್ಲ್ (35), ನಾಯಕ ಸಿಕಂದರ್ ರಜಾ (ಅಜೇಯ 25) ತಂಡಕ್ಕೆ ಆಧಾರವಾದರು.

ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಪರ ಸ್ಟಾರ್ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ (31) ಹಾಗೂ ಮ್ಯಾಟ್ ರೆನ್ಶೊ (65) ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. 5ನೇ ವಿಕೆಟ್‌ಗೆ ಈ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ಆಸ್ಟ್ರೇಲಿಯಾ 19.3 ಓವರ್‌ಗಳಲ್ಲಿ 146 ರನ್ ಸೇರಿಸಿತು. ಈ ಮೂಲಕ ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಮೊದಲ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.
2009ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲೂ ಇಂತಹದ್ದೇ ಒಂದು ಫಲಿತಾಂಶ ಹೊರಬಿದ್ದಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲಿನ ರುಚಿಯನ್ನು ತೋರಿಸಿದ ನೆದರ್‌ಲ್ಯಾಂಡ್ ಟಿ20 ವಿಶ್ವಕಪ್‌ನಲ್ಲಿ ಅಚ್ಚರಿಯ ಫಲಿತಾಂಶ ನೀಡಿತ್ತು. ಈ ಪಂದ್ಯವನ್ನು 4 ವಿಕೆಟ್‌ಗಳಿಂದ ಗೆದ್ದ ನೆದರ್‌ಲ್ಯಾಂಡ್ ಅಬ್ಬರಿಸಿತ್ತು. ತವರಿನಲ್ಲಿ ಆಡುತ್ತಿದ್ದರಿಂದ ಇಂಗ್ಲೆಂಡ್ ತಂಡಕ್ಕೆ ಸೋಲು ಅರಗಿಸಿಕೊಳ್ಳುವುದು ಕಷ್ಟವಾಯಿತು.
2022ರ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಐರ್ಲೆಂಡ್ ಸಹ ದೊಡ್ಡ ದಾಖಲೆ ನಿರ್ಮಿಸಿತ್ತು. ಆಗ ಐರ್ಲೆಂಡ್ ಸಹ ವಿಶ್ವಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಅಬ್ಬರಿಸಿತ್ತು. ಅಲ್ಲದೆ ಈ ಪಂದ್ಯವನ್ನು ಐರ್ಲೆಂಡ್ 9 ರನ್‌ಗಳಿಂದ ಗೆದ್ದು ಆರ್ಭಟಿಸಿತ್ತು. ಈ ಸೋಲು ವೆಸ್ಟ್ ಇಂಡೀಸ ತಂಡ ಲೀಗ್ ಹಂತದಲ್ಲೇ ಟೂರ್ನಿಗೆ ಗುಡ್ ಬಾಯ್ ಹೇಳುವಂತೆ ಮಾಡಿತು.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಸದಾ ನೆನಪಿನಲ್ಲಿರುವ ಅಚ್ಚರಿಯ ಫಲಿತಾಂಶಗಳಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ನಮೀಬಿಯಾ ಪಂದ್ಯ ಸಹ ಉಳಿಯುತ್ತದೆ. ಈ ಪಂದ್ಯದಲ್ಲಿ ನಮೀಬಿಯಾ 55 ರನ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತ್ತು. 2022ರ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಈ ಅಚ್ಚರಿಯ ಫಲಿತಾಂಶ ಬಂದಿತ್ತು.
2021ರಲ್ಲಿ ಬಾಂಗ್ಲಾದೇಶ ತಂಡವನ್ನು ಸ್ಕಾಟ್ಲೆಂಡ್ 6 ರನ್‌ಗಳಿಂದ ಮಣಿಸಿತ್ತು. ಇದಕ್ಕೂ ಮೊದಲು 2016ರಲ್ಲಿ ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವಲ್ಲಿ ಸಫಲವಾಗಿತ್ತು. ದಕ್ಷಿಣ ಆಫ್ರಿಕಾಕ್ಕೆ 2022ರಲ್ಲಿ ನಡೆದ ವಿಶ್ವಕಪ್‌ನಲ್ಲಿ ನೆದರ್‌ಲ್ಯಾಂಡ್ 13 ರನ್‌ಗಳಿಂದ ಭರ್ಜರಿ ಜಯ ಸಾಧಿಸಿತು.
ಕಳೆದ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಯುಎಸ್‌ಎ ತಂಡ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಆರ್ಭಟಿಸಿತ್ತು. ಪಾಕಿಸ್ತಾನ ತಂಡ ನೀಡಿದ್ದ 160 ರನ್ ಕಲೆ ಹಾಕುವಲ್ಲಿ ವಿಫಲವಾಗಿ, 159 ರನ್ ಸೇರಿಸಿತು. ಎರಡೂ ತಂಡಗಳು ರನ್ ಸಮನಾಗಿದ್ದರಿಂದ ಸೂಪರ್ ಓವರ್ ಆಡಿಸಲಾಯಿತು. ಈ ಪಂದ್ಯದಲ್ಲಿ ಯುಎಸ್‌ಎ ಭರ್ಜರಿ ಜಯ ದಾಖಲಿಸಿ ರೆಕಾರ್ಡ್ ನಿರ್ಮಿಸಿತು.