ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದ ಈ ಬ್ಯಾಟರ್ ವಿಶ್ವಕಪ್‌ನಲ್ಲಿ ಅತ್ಯುತ್ತಮ ಫಿನಿಷರ್ ಆಗಲಿದ್ದಾನೆ ಎಂದ ರವಿಚಂದ್ರನ್ ಅಶ್ವಿನ್

T20 World Cup: Suryakumar Yadav ahead of some of the world’s best finishers : Ravichandran Ashwin

ಭಾರತದ ಹಿರಿಯ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಬ್ಯಾಟರ್ ಸೂರ್ಯಕುಮಾರ್ ಯಾದವ್‌ರನ್ನು ಹಾಡಿ ಹೊಗಳಿದ್ದಾರೆ. ಸೂರ್ಯಕುಮಾರ್ ಇತ್ತೀಚಿನ ಪಂದ್ಯಗಳಲ್ಲಿ ನೀಡಿರುವ ಅದ್ಭುತ ಪ್ರದರ್ಶನ, ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಆತ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.

ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೂರ್ಯಕುಮಾರ್ ಯಾದವ್‌ರ ಸ್ಟ್ರೈಕ್ ರೇಟ್ ಬಗ್ಗೆ ಹೊಗಳಿದ್ದಾರೆ. 2022 ರ ಟಿ20 ವಿಶ್ವಕಪ್‌ನಲ್ಲಿ ವಿಶ್ವದ ಫಿನಿಶರ್‌ಗಳನ್ನೂ ಅವರು ಮೀರಿಸಲಿದ್ದಾರೆ ಎಂದು ಹೇಳಿದ್ದಾರೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸಂಭಾವ್ಯ 11ರ ಬಳಗ; ಪಂತ್ vs ಕಾರ್ತಿಕ್ ನಡುವೆ ಆಯ್ಕೆ ಯಾರು?IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸಂಭಾವ್ಯ 11ರ ಬಳಗ; ಪಂತ್ vs ಕಾರ್ತಿಕ್ ನಡುವೆ ಆಯ್ಕೆ ಯಾರು?

ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರ (ಸೆಪ್ಟೆಂಬರ್ 28) ನಡೆದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ 33 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರು. ಸೆಪ್ಟೆಂಬರ್ 25 ರಂದು ಆಸ್ಟ್ರೇಲಿಯಾ ವಿರುದ್ಧ 36 ಎಸೆತಗಳಲ್ಲಿ 69 ರನ್ ಬಾರಿಸುವ ಮೂಲಕ ಭಾರತಕ್ಕೆ ಟಿ20 ಸರಣಿಯನ್ನು ಗೆಲ್ಲಲು ಸಹಾಯ ಮಾಡಿದರು.

ಭಾರತದ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಅವರು ಭಾರತ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಫಿನಿಷರ್ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯ

ಫಿನಿಷರ್ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯ

"ಆತನ ಬ್ಯಾಟಿಂಗ್‌ ಅನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಟಿ20ಯಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕು ಎಂಬುದಕ್ಕೆ ಮಾಸ್ಟರ್ ಕ್ಲಾಸ್ ಹಾಕುತ್ತಲೇ ಇರುತ್ತಾರೆ. ಗ್ಲೆನ್ ಮ್ಯಾಕ್ಸ್‌ವೆಲ್, ಜಿಮ್ಮಿ ನೀಶಮ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ವಿಶ್ವದ ಅತ್ಯುತ್ತಮ ಫಿನಿಶರ್‌ಗಳ ಪಟ್ಟಿಯಲ್ಲಿದ್ದಾರೆ.

ಆದರೆ ಸೂರ್ಯಕುಮಾರ್ ಯಾದವ್ ಎಲ್ಲ ಆಟಗಾರರಿಗಿಂತ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅವರು 170 ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸಿದ್ದಾರೆ ಮತ್ತು ಸೂರ್ಯಕುಮಾರ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಯಾವುದೇ ಬ್ಯಾಟರ್ ಹಾಗೆ ಆಡುವಾಗ ನೋಡಲು ಸಂತೋಷವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಥರ್ಡ್ ಅಂಪೈರ್ ತಪ್ಪು ನಿರ್ಧಾರಕ್ಕೆ ಪೂಜಾ ವಸ್ತ್ರಾಕರ್ ಔಟ್‌: ಯುವರಾಜ್ ಸಿಂಗ್‌ ಅಸಮಾಧಾನ!

ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್

ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್

2022 ರಲ್ಲಿ, ಸೂರ್ಯಕುಮಾರ್ ಯಾದವ್ ಈಗಾಗಲೇ 21 ಟಿ20 ಪಂದ್ಯಗಳಲ್ಲಿ 180.3 ಸ್ಟ್ರೈಕ್ ರೇಟ್‌ನಲ್ಲಿ 732 ರನ್ ಗಳಿಸಿದ್ದಾರೆ, ಇದರಲ್ಲಿ ಐದು ಅರ್ಧ ಶತಕಗಳು ಮತ್ತು ಒಂದು ಶತಕ ಸೇರಿದೆ.

ಸ್ಟಾರ್ ಬ್ಯಾಟರ್ ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಟಿ20 ಪಂದ್ಯಗಳಲ್ಲಿ ಉತ್ತಮ ಫಾರ್ಮ್ ಮುಂದುವರಿಸಲು ಉತ್ಸುಕನಾಗಿದ್ದಾನೆ ಮತ್ತು ಆಸ್ಟ್ರೇಲಿಯಾದಲ್ಲಿ ವಿಶ್ವಕಪ್‌ನಲ್ಲಿ ಆತ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಬುಮ್ರಾ ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ

ಬುಮ್ರಾ ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ

ಟ್ವೆಂಟಿ-20 ವಿಶ್ವಕಪ್‌ಗೆ ಮುನ್ನ ಜಸ್ಪ್ರೀತ್ ಬುಮ್ರಾ ಚೇತರಿರಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ ಎಂದು ಅಶ್ವಿನ್ ಹೇಳಿದ್ದಾರೆ. ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಆರಂಭಿಕ ಟಿ20 ಪಂದ್ಯವನ್ನು ಬುಮ್ರಾ ತಪ್ಪಿಸಿಕೊಂಡರು, ಅವರು ಸಂಪೂರ್ಣ ಮೂರು ಪಂದ್ಯಗಳ ಸರಣಿಯಿಂದ ಹೊರಗಿದ್ದಾರೆ.

ಬುಮ್ರಾ ಮತ್ತೆ ಗಾಯಗೊಂಡಿದ್ದಾರೆ. ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ವಿಶ್ವಕಪ್ ಬರುತ್ತಿರುವ ಕಾರಣ, ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಬೇಕು. ಅನೇಕರು ಅವರ ಚೇತರಿಕೆಯ ಬಗ್ಗೆ ಹೆಚ್ಚು ಸಕಾರಾತ್ಮಕ ವಿಷಯಗಳನ್ನು ಹೇಳುತ್ತಿಲ್ಲ. ಬುಮ್ರಾ ಬೇಗ ಗುಣಮುಖರಾಗಲಿ ಎಂದು ಹಾರೈಸೋಣ ಎಂದು ಅಶ್ವಿನ್ ಹೇಳಿದ್ದಾರೆ.

ಬುಮ್ರಾ ಆಡುವ ವಿಶ್ವಾಸ ಇದೆ ಎಂದ ದ್ರಾವಿಡ್

ಬುಮ್ರಾ ಆಡುವ ವಿಶ್ವಾಸ ಇದೆ ಎಂದ ದ್ರಾವಿಡ್

ಟಿ20 ವಿಶ್ವಕಪ್‌ಗೆ ಮುನ್ನ ಬುಮ್ರಾ ಚೇತರಿಸಿಕೊಳ್ಳುವ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಆಶಾದಾಯಕವಾಗಿದೆ ಎಂದು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಎರಡನೇ ಪಂದ್ಯಕ್ಕೆ ಮುನ್ನಾದಿನದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, "ಅವರು ಹೊರಗುಳಿಯುತ್ತಾರೆ ಎಂದು ನಾನು ಅಧಿಕೃತ ದೃಢೀಕರಣವನ್ನು ಪಡೆಯುವವರೆಗೆ, ನಾವು ಯಾವಾಗಲೂ ಅವರು ವಿಶ್ವಕಪ್‌ನಲ್ಲಿ ಆಡುವ ಭರವಸೆ ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಮೊಹಮ್ಮದ್ ಸಿರಾಜ್‌ರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಟಿ20 ಪಂದ್ಯಗಳಿಗೆ ಬುಮ್ರಾ ಬದಲಿಗೆ ಹೆಸರಿಸಲಾಗಿದೆ. ಟೀಂ ಇಂಡಿಯಾ ಭಾನುವಾರ (ಅಕ್ಟೋಬರ್ 2) ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಡಲಿದೆ.

Story first published: Sunday, October 2, 2022, 17:02 [IST]
Other articles published on Oct 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X