ಕೊಹ್ಲಿ ಜೊತೆ ಬ್ಯಾಟಿಂಗ್ ಸುಂದರ ಅನುಭವ: ಅದ್ಭುತ ಜೊತೆಯಾಟದ ಬಳಿಕ ಸೂರ್ಯಕುಮಾರ್ ಮಾತು

ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಸಿಡ್ನಿ ಕ್ರಿಡಾಂಗಣದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಕೆಎಲ್ ರಾಹುಲ್ ಹೊರತುಪಡಿಸಿ ಬ್ಯಾಟಿಂಗ್‌ಗೆ ಇಳಿದ ಮೂವರು ಭಾರತೀಯ ದಾಂಡಿಗರು ಕೂಡ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದರು. ಅದ್ಭುತ ಜೊತೆಯಾಟದಲ್ಲಿ ಭಾಗಿಯಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ತಂಡ 180 ರನ್‌ಗಳ ಗುರಿ ನೀಡಲು ಕಾರಣವಾದರು.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ 48 ಎಸೆತಗಳಲ್ಲಿ ಅಜೇಯ 95 ರನ್‌ಗಳ ಮಹತ್ವದ ಜೊತೆಯಾಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಇಬ್ಬರು ಕೂಡ ತಮ್ಮ ವೈಯಕ್ತಿಕ ಅರ್ಧ ಶತಕವನ್ನು ಪೂರ್ಣಗೊಳಿಸಿದರು. ಈ ಪ್ರದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಮಾತನಾಡಿದ್ದು ವಿರಾಟ್ ಕೊಹ್ಲಿ ಜೊತೆಗೆ ಬ್ಯಾಟಿಂಗ್ ನಡೆಸುವುದನ್ನು ತಾನು ತುಂಬಾ ಆನಂದಿಸುತ್ತೇನೆ ಎಂದಿದ್ದಾರೆ.

ವಿಶ್ವಕಪ್‌ನಲ್ಲಿ ಸತತ ಎರಡನೇ ಅರ್ಧ ಶತಕ ದಾಖಲಿಸಿದ ಕೊಹ್ಲಿ
ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿಯೂ ಅಮೋಘ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ತಮ್ಮ ಅದ್ಭುತ ಫಾರ್ಮ್ ಮುಂದುವರಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅರ್ಥ ಶತಕ ಸಿಡಿಸಿದ್ದು ಮಾತ್ರವಲ್ಲದೆ ಈ ಪಂದ್ಯದಲ್ಲಿಯೂ ಅಜೇಯವಾಗಿ ಉಳಿಯುವ ಮೂಲಕ ಎದುರಾಳಿ ತಂಡಗಳಿಗೆ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ವಿಶ್ವಕಪ್ ವೇದಿಕೆಯಲ್ಲಿ ಕೊಹ್ಲಿ ಇಂಥಾ ಅದ್ಭುತ ಫಾರ್ಮ್ ಕಂಡುಕೊಂಡಿರುವುದು ಭಾರತೀಯ ಅಭಿಮಾನಿಗಳ ಸಂಭ್ರಮ ಹೆಚ್ಚಾಗಲು ಕಾರಣವಾಗಿದೆ.

ಕೊಹ್ಲಿ ಜೊತೆ ಬ್ಯಾಟಿಂಗ್ ನಡೆಸುವುದು ಅದ್ಭುತ ಅನುಭವ
"ಇಲ್ಲಿ ಬ್ಯಾಟಿಂಗ್ ನಡೆಸುವುದನ್ನು ನಾನು ಆನಂದಿಸುತ್ತಿದ್ದೇನೆ. ಈ ಜೊತೆಯಾಟವನ್ನು ಕೂಡ ಅದ್ಭುತವಾಗಿ ಆನಂದಿಸಿದೆ. ನಾನು ಬ್ಯಾಟಿಂಗ್‌ಗೆ ಇಳಿದಾಗ ವಿರಾಟ್ ಅವರು ನನ್ನ ಸಹಜ ಶೈಲಿಯಂತೆ ಬ್ಯಾಟಿಂಗ್ ನಡೆಸಲು ತಿಳಿಸಿದರು. ಹಾಗಾಗಿ ನನ್ನಿಷ್ಟದಂತೆ ಬ್ಯಾಟಿಂಗ್ ನಡೆಸಿದೆ. ಎಲ್ಲರೂ ಇಲ್ಲಿಗೆ ಬಂದು ಬೆಂಬಲಿಸುತ್ತಿರುವುದು ಖುಷಿ ನೀಡುತ್ತದೆ" ಎಂದು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನಡೆಸಿ ಬಳಿಕ ಹೇಳಿದರು, ಮುಂದುವರುದು ಮಾತನಾಡಿದ ಸೂರ್ಯ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆಯೂ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. "ಅವರು ಅದ್ಭುತವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಅವರು ಸಹಜ ಪ್ರಕ್ರಿಯೆಯಂತೆ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಅವರೊಂದಿಗೆ ಬ್ಯಾಟಿಂಗ್ ನಡೆಸುವುದನ್ನು ನಾನು ಆನಂದಿಸುತ್ತೇನೆ" ಎಂದಿದ್ದಾರೆ ಸೂರ್ಯಕುಮಾರ್ ಯಾವದ್.
ಇಂಗ್ಲೆಂಡ್ ವಿರುದ್ಧದ ಗೆಲುವು ರೋಮಾಂಚನಕಾರಿ ಅನುಭವ ಎಂದ ಐರ್ಲೆಂಡ್ ನಾಯಕ

56 ರನ್‌ಗಳ ಅಂತರದಿಂದ ಪಂದ್ಯ ಗೆದ್ದ ಭಾರತ
ಇನ್ನು ನೆದರ್ಲೆಂಡ್ಸ್ ವಿರುದ್ಧದ ಪಂದ್ಯವನ್ನು ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಭಾರತ 180 ರನ್‌ಗಳ ಸವಾಲಿನ ಗುರಿಯನ್ನು ನೆದರ್ಲೆಂಡ್ಸ್ ತಂಡಕ್ಕೆ ನೀಡಿತ್ತು. ಇದನ್ನು ಬೆನ್ನಟ್ಟಿದ ಡಚ್ ಪಡೆ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 123 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಭಾರತ ತಂಡ 56 ರನ್‌ಗಳ ಬೃಹತ್ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದ್ದು ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ರೋಚಕವಾಗಿ ಮಣಿಸಿತ್ತು.

ಇತ್ತಂಡಗಳ ಆಡುವ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications