T20 World Cup: ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮಾಡದ ಸಾಧನೆ ಮಾಡಿದ ಟೀಮ್ ಇಂಡಿಯಾ
ಕೋಲ್ಕತ್ತಾದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದೆ. ಭಾನುವಾರ ನಡೆದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿದ್ದು, ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ದೊಡ್ಡ ಸಾಧನೆಯನ್ನು ಮಾಡಿದೆ. ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ದಂತಹ ತಂಡಗಳು ಮಾಡದ ಸಾಧನೆಯನ್ನು ಭಾರತ ಮಾಡಿ ಬೀಗಿದೆ.
ಭಾನುವಾರ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ಭಾರತ 6ನೇ ಬಾರಿಗೆ ಸೆಮಿಫೈನಲ್ ಪ್ರವೇಶ ಪಡೆದಿದೆ. ಈ ಮೂಲಕ ಇಂಗ್ಲೆಂಡ್, ಪಾಕಿಸ್ತಾನ ಮಾಡದ ಸಾಧನೆಯನ್ನು ಮಾಡಿ ಬೀಗಿದೆ. ಈ ಮೊದಲು ಈ ಸಾಧನೆಯನ್ನು ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮಾಡಿದ್ದವು. ಈಗ ಟೀಮ್ ಇಂಡಿಯಾ ಆ ತಂಡಗಳ ಸಾಲಿಗೆ ಸೇರಿಕೊಂಡಿದೆ.

ಭಾರತ ತಂಡವು 2007, 2014, 2016, 2022 ಮತ್ತು 2024 ರಲ್ಲಿ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿತ್ತು. ಭಾರತ 2026ರಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಮೂಲಕ ದೊಡ್ಡ ಸಾಧನೆಯನ್ನು ಮಾಡಿದೆ.
ಪಾಕಿಸ್ತಾನ - 6 ಬಾರಿ (2007, 2009, 2010, 2012, 2021, 2022)
ಭಾರತ - 6 ಬಾರಿ (2007, 2014, 2016, 2022, 2024, 2026)
ಇಂಗ್ಲೆಂಡ್ - 6 ಬಾರಿ (2010, 2016, 2021, 2022, 2024, 2026)
ದಾಖಲೆಯ ಚೇಸ್ ಮಾಡಿದ ಭಾರತ
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ನೀಡಿದ್ದ 196 ರನ್‌ಗಳ ಗುರಿಯನ್ನು ಸಮರ್ಥವಾಗಿ ಬೆನ್ನಟ್ಟಿತು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ಯಶಸ್ವಿ ರನ್ ಚೇಸ್ ಮಾಡಿದ ದಾಖಲೆಯನ್ನು ಬರೆದಿದೆ. ಇದಕ್ಕೂ ಮೊದಲು ಭಾರತ 2014ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 173 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸಂಭ್ರಮಿಸಿತ್ತು.
ಪಂದ್ಯದ ಫಲಿತಾಂಶ
ಟೀಮ್ ಇಂಡಿಯಾ ಟಾಸ್ ಗೆದ್ದು ವೆಸ್ಟ್ ಇಂಡೀಸ್ ತಂಡಕ್ಕೆ ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿತು. ಈ ವೇಳೆ ವಿಂಡೀಸ್ ತಂಡದ ಬ್ಯಾಟರ್‌ಗಳು ಸಮಯೋಚಿತ ಬ್ಯಾಟಿಂಗ್ ನಡೆಸಿದರು. ಅಲ್ಲದೆ ಪವರ್ ಪ್ಲೇನಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡು ಬ್ಯಾಟ್ ಮಾಡಿದರು. ವಿಂಡೀಸ್ ತಂಡದ ಪರ ರೋಸ್ಟನ್ ಚೇಸ್, ಜೇಸನ್ ಹೋಲ್ಡರ್ 37 ರನ್ ಸಿಡಿಸಿದರು. ಅಂತಿಮವಾಗಿ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 195 ರನ್ ಗಳಿಸಿತು.
ಸವಾಲಿನ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಪವರ್ ಪ್ಲೇನಲ್ಲಿ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಅವರ ವಿಕೆಟ್ ಕಳೆದುಕೊಂಡಿತು. ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಬಾರಿಸಿದ ಅಜೇಯ 97 ರನ್‌ಗಳ ಬಲದಿಂದ ಭಾರತ, ಇನ್ನು ನಾಲ್ಕು ಎಸೆತ ಬಾಕಿ ಇರುವಂತೆ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications