India vs Pakistan: ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ!
ಜೂನ್ 9 ಭಾನುವಾರ, ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನವನ್ನು ಟೀಮ್ ಇಂಡಿಯಾ ಹಲವು ಬಾರಿ ಹೀನಾಯವಾಗಿ ಸೋಲಿಸಿದೆ. ಟಿ20 ವಿಶ್ವಕಪ್‌ನಲ್ಲಿ ಈವರೆಗೆ 7 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ.
ಭಾರತದ ಎದುರು ಪಾಕಿಸ್ತಾನ ಕೇವಲ 1 ಪಂದ್ಯದಲ್ಲಿ ಗೆಲುವ ಸಾಧಿಸಿದೆ. ಭಾರತ 6 ಬಾರಿ ಪಾಕಿಸ್ತಾನವನ್ನು ಸೋಲಿಸಿ ದಾಖಲೆ ನಿರ್ಮಿಸಿದೆ. ಸೋಲು ಗೆಲುವಿನ ಲೆಕ್ಕಚಾರದಲ್ಲಿ ಪಾಕಿಸ್ತಾನ ಎದುರು ಭಾರತ ತನ್ನ ಪ್ರಾಬಲ್ಯ ಸಾಧಿಸಿದೆ.

ಇದೇ ಪ್ರಾಬಲ್ಯ ಮುಂದುವರೆಸಿರುವ ಟೀಮ್ ಇಂಡಿಯಾ ಭಾನುವಾರ ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಂಪು ಹಂತದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಭರ್ಜರಿ ಬೇಟೆಯಾಡಿದೆ.
ಇದುವರೆಗೆ 7 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಚೇಸಿಂಗ್ ಮಾಡಿದ ಪಾಕಿಸ್ತಾನವನ್ನು 6 ರನ್‌ಗಳಿಂದ ಸೋಲಿಸಿರುವ ಟೀಮ್ ಇಂಡಿಯಾ ವಿಶ್ವ ದಾಖಲೆ ಮಾಡಿದೆ.
ಟಿ20 ವಿಶ್ವಕಪ್‌ನಲ್ಲಿ ಭಾರತ ಹೊಸ ಮೈಲಿಗಲ್ಲು
ಟಿ20 ವಿಶ್ವಕಪ್‌ನಲ್ಲಿ ಪ್ರಪಂಚದಾದ್ಯಂತದ ಶ್ರೇಷ್ಠ ತಂಡಗಳು ಭಾಗವಹಿಸಿವೆ. ಆದರೆ ಪಾಕಿಸ್ತಾನವನ್ನು ಸೋಲಿಸಿರುವ ಟೀಮ್ ಇಂಡಿಯಾ ಹೊಸ ಮೈಲಿಗಲ್ಲು ತಲುಪಿದೆ.
ಟಿ20 ವಿಶ್ವಕಪ್‌ನಲ್ಲಿ ಒಂದು ತಂಡದ ವಿರುದ್ಧ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೆ ಯಾವುದೇ ತಂಡ ಒಂದೇ ತಂಡದ ವಿರುದ್ಧ 7 ಬಾರಿ ಗೆದ್ದಿಲ್ಲ. ಈ ಸಾಧನೆಯನ್ನು ಇದೀಗ ಭಾರತ ಮಾಡಿರುವುದು ವಿಶೇಷವಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ ಒಂದೇ ತಂಡದ ವಿರುದ್ಧ ಗೆಲುವು
- ಪಾಕಿಸ್ತಾನ ವಿರುದ್ಧ ಭಾರತ 7 ಗೆಲುವು
- ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ 6 ಗೆಲುವು
- ಶ್ರೀಲಂಕಾ ವಿರುದ್ಧ ವೆಸ್ಟ್ ಇಂಡೀಸ್ 6 ಗೆಲುವು
- ಬಾಂಗ್ಲಾದೇಶ ವಿರುದ್ಧ ಆಸ್ಟ್ರೇಲಿಯಾ 5 ಗೆಲುವು
- ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ 5 ಗೆಲುವು
ಟಿ20 ಕ್ರಿಕೆಟ್‌ನಲ್ಲಿ ಭಾರತ vs ಪಾಕಿಸ್ತಾನ ಅಂಕಿ-ಅಂಶ
ಭಾರತ ಮತ್ತು ಪಾಕಿಸ್ತಾನ ನಡುವಿನ ಒಟ್ಟು ಟಿ20 ಅಂತರಾಷ್ಟ್ರೀಯ ಅಂಕಿ-ಅಂಶಗಳನ್ನು ಗಮನಿಸಿದರೆ, ಉಭಯ ತಂಡಗಳು 12 ಬಾರಿ ಮುಖಾಮುಖಿಯಾಗಿವೆ.
ಈ ಪೈಕಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ 10ರಲ್ಲಿ ಗೆದ್ದಿದ್ದರೆ, 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತ ಪಾಕಿಸ್ತಾನ 12 ಟಿ20 ಪಂದ್ಯಗಳ ಪೈಕಿ ಕೇವಲ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, 10 ಪಂದ್ಯಗಳಲ್ಲಿ ಸೋಲು ಕಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications