
ಆರಂಭಿಕ ಆಟಗಾರರು
ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್: ರೋಹಿತ್ ಶರ್ಮಾ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎನಿಸಿದ್ದಾರೆ. ಅನುಭವಿ ರೋಹಿತ್ ಶರ್ಮಾ ಆಡುವ ಬಳಗದಲ್ಲಿರುವುದು ಎದುರಾಳಿಗೆ ಯಾವತ್ತಿಗೂ ಭೀತಿಯುಂಟು ಮಾಡುತ್ತದೆ. ಅದರಲ್ಲೂ ಪಾಕಿಸ್ತಾನದ ವಿರುದ್ಧ ರೋಹಿತ್ ಶರ್ಮಾ ಉತ್ತಮ ದಾಖಲೆ ಹೊಂದಿದ್ದಾರೆ. ಈ ಹಿಂದಿನ 2019ರ ಏಕದಿನ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳ ಮುಖಾಮುಖಿಯಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕವನ್ನು ದಾಖಲಿಸಿದ್ದರು. ಮತ್ತೊಂದೆಡೆ ಕೆಎಲ್ ರಾಹುಲ್ ಚುಟುಕು ಕ್ರಿಕೆಟ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರವಾಗಿ ಅಮೋಘ ಆಟವನ್ನು ಪ್ರದರ್ಶಿಸಿರುವ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿಯೂ ಈ ಪ್ರಚಂಡ ಫಾರ್ಮ್‌ಅನ್ನು ಮುಂದುವರಿಸಿದ್ದರು.

ಮಧ್ಯಮ ಕ್ರಮಾಂಕ
ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ಇಶಾನ್ ಕಿಶನ್, ರಿಷಭ್ ಪಂತ್: ಟೀಮ್ ಇಂಡಿಯಾದ ಮೂರನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಎಲ್ಲಾ ಮಾದರಿಯಲ್ಲಿಯೂ ಅದ್ಭುತ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಇತ್ತೀಚೆಗೆ ವಿರಾಟ್ ಕೊಹ್ಲಿ ಫಾರ್ಮ್ ಕಳೆಗುಂದಿದಂತೆ ಕಂಡು ಬಂದಿದ್ದರೂ ವಿರಾಟ್ ಯಾವ ಕ್ಷಣದಲ್ಲಿಯೂ ಎದುರಾಳಿಯನ್ನು ಪುಡಿಗಟ್ಟುವ ಸಾಮರ್ಥ್ಯ ಹೊಂದಿದ್ದಾರೆ ಎಂಬುದು ಅಷ್ಟೇ ನಿಜ. ಇನ್ನು ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪರವಾಗಿ ಸಾಕಷ್ಟು ಭರವಸೆ ಮೂಡಿಸಿರುವ ಆಟಗಾರ. ಮತ್ತೊಂದೆಡೆ ಇಶಾನ್ ಕಿಶನ್ ಕೂಡ ಅದ್ಭುತವಾದ ಫಾರ್ಮ್‌ನಲ್ಲಿದ್ದು ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಅತ್ಯಂತ ಅರ್ಹರಾಗಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಅವರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳುವ ಪ್ರಯತ್ನ ಕಂಡಿತಾ ನಡೆಯಲಿದೆ. ಆದರೆ ಇಶಾನ್ ಕಿಶನ್‌ಗೆ ಎಲ್ಲಿ ಅವಕಾಶ ನೀಡಬೇಕು ಎಂಬುದು ತಂಡದ ಮ್ಯಾನೇಜ್‌ಮೆಂಟ್‌ನ ಚಿಂತೆಯಾಗಿದೆ. ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಆಡಲಿದ್ದು ಎಲ್ಲಾ ಮಾದರಿಯಲ್ಲಿಯೂ ಅದ್ಭುತವಾದ ಸಾಮರ್ಥ್ಯವನ್ನು ಹೊಂದಿದ್ದಾರೆ ಪಂತ್.

ಕೆಳ ಕ್ರಮಾಂಕ ಹಾಗೂ ಆಲ್‌ರೌಂಡರ್
ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಫಾರ್ಮ್ ಸಮಸ್ಯೆ ಹಾಗೂ ಬೌಲಿಂಗ್ ಮಾಡಲು ಸಮರ್ಥರಾಗದಿರುವುದು ತಂಡದ ಚಿಂತೆಯಾಗಿದೆ. ಬೌಲಿಂಗ್ ಮಾಡದಿದ್ದರೂ ಸಂಪೂರ್ಣ ಬ್ಯಾಟರ್ ಆಗಿ ಹಾರ್ದಿಕ್ ಪಾಂಡ್ಯ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ. ಇನ್ನು ರವೀಂದ್ರ ಜಡೇಜಾ ಆಲ್‌ರೌಂಡರ್ ಆಗಿ ಟೀಮ್ ಇಂಡಿಯಾದ ಪ್ರಮುಖ ಭರವಸೆಯಾಗಿದ್ದಾರೆ. ಬ್ಯಾಟಿಂಗ್ ಬೌಲಿಂಗ್ ಹಾಗೂ ಫೀಲ್ಡಿಂಗ್ ವಿಭಾಗದಲ್ಲಿ ಅದ್ಭುತವಾದ ಆಟ ಪ್ರದರ್ಶಿಸುವ ಸಾಮರ್ಥ್ಯವಿರುವ ಜಡೇಜಾ ಪರಿಪೂರ್ಣ ಆಲ್‌ರೌಂಡರ್ ಎಂಬುದರಲ್ಲಿ ಅನುಮಾನವಿಲ್ಲ.

ಬೌಲರ್‌ಗಳು
ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ವರುಣ್ ಚಕ್ರವರ್ತಿ: ಟೀಮ್ ಇಂಡಿಯಾದ ಬೌಲಿಂಗ್ ಪಡೆ ಕೂಡ ಅತ್ಯಂತ ಬಲಿಷ್ಠವಾಗಿದೆ. ಬಹುತೇಕ ಎಲ್ಲಾ ಬೌಲರ್‌ಗಳು ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಶಮಿ ಹಾಗೂ ಬೂಮ್ರಾ ನೀಡಿದ ಪ್ರದರ್ಶನ ಟೀಮ್ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿಸಿದೆ. ಶಾರ್ದೂಲ್ ಠಾಕೂರ್ ಬೌಲಿಂಗ್‌ನ ಜೊತೆಗೆ ಬ್ಯಾಟ್ ಮೂಲಕವೂ ತಂಡಕ್ಕೆ ಕೊಡುಗೆ ನೀಡಬಲ್ಲವರಾಗಿದ್ದಾರೆ. ಸ್ಪಿನ್ನರ್ ಆಗಿ ವರುಣ್ ವಕ್ರವರ್ತಿ ಅಉತ್ತಮ ಆಯ್ಕೆಯಾಗಲಿದ್ದಾರೆ.


Click it and Unblock the Notifications
