T20 World Cup: ಬ್ರಿಸ್ಬೇನ್‌ನಲ್ಲಿ ಇಂದಿನಿಂದ ಟೀಂ ಇಂಡಿಯಾ ಅಭ್ಯಾಸ, ತಂಡ ಸೇರಿಕೊಂಡ ಶಮಿ

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನ ಎರಡು ಅಭ್ಯಾಸ ಪಂದ್ಯಗಳನ್ನಾಡಲು ಬ್ರಿಸ್ಬೇನ್‌ಗೆ ತಲುಪಿದೆ. ರೋಹಿತ್ ಶರ್ಮಾ ಕ್ಯಾಪ್ಟನ್ ಡೇಗಾಗಿ ಮೆಲ್ಬೋರ್ನ್‌ನಲ್ಲಿದ್ದರೆ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಇತರರು ಬ್ರಿಸ್ಬೇನ್ ತಲುಪಿದರು.
ಬುಮ್ರಾ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಮೊಹಮ್ಮದ್ ಶಮಿ ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಕೂಡ ಶನಿವಾರ ತಡರಾತ್ರಿ ಆಗಮಿಸಲಿದ್ದಾರೆ. ಭಾರತ ತನ್ನ ಮೊದಲ ಅಭ್ಯಾಸವನ್ನು ಭಾನುವಾರ ಗಬ್ಬಾದಲ್ಲಿ ಇಡೀ ತಂಡದೊಂದಿಗೆ ನಡೆಸಲಿದೆ. ಸೋಮವಾರ ಭಾರತ ತಂಡ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಿದರೆ. ಅಕ್ಟೋಬರ್ 19ರಂದು ನ್ಯೂಜಿಲೆಂಡ್ ವಿರುದ್ಧ ಎರಡನೇ ಪಂದ್ಯವನ್ನು ಆಡಲಿದೆ.
ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಮಿ ಒಂದು ದಿನ ಮುಂಚಿತವಾಗಿ ಹೊರಟರೆ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಒಂದು ದಿನದ ನಂತರ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ್ದಾರೆ.

ಶಮಿ ಬಗ್ಗೆ ರೋಹಿತ್ ಶರ್ಮಾ ಮೆಚ್ಚುಗೆ
ಕ್ಯಾಪ್ಟನ್ಸ್ ಡೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಅಭ್ಯಾಸದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.
ನಾನು ಮೊಹಮ್ಮದ್ ಶಮಿಯನ್ನು ನೋಡಿಲ್ಲ ಆದರೆ ಅವರ ಬಗ್ಗೆ ಕೇಳಿದ್ದೆಲ್ಲ ಚೆನ್ನಾಗಿದೆ. ನಾವು ಭಾನುವಾರ ಬ್ರಿಸ್ಬೇನ್‌ನಲ್ಲಿ ಅಭ್ಯಾಸವನ್ನು ಹೊಂದಿದ್ದೇವೆ ಮತ್ತು ನಾನು ಶಮಿಯನ್ನು ನೋಡಲು ಕಾಯುತ್ತಿದ್ದೇನೆ ಎಂದು ರೋಹಿತ್ ಶರ್ಮಾ ತಿಳಿಸಿದರು. ಇಬ್ಬರು ಮೀಸಲು ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಭಾರತದಲ್ಲಿ ಉಳಿದುಕೊಂಡಿದ್ದಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದಾರೆ.
T20 World Cup 2022: ಯುಎಇ Vs ನೆದರ್ಲ್ಯಾಂಡ್ಸ್ ಪ್ಲೇಯಿಂಗ್ ಇಲೆವೆನ್, ಪಿಚ್ ರಿಪೋರ್ಟ್ ವರದಿ

ಆಟಗಾರರ ಗಾಯದ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ
ಆಟಗಾರರು ಗಾಯಗೊಳ್ಳುವುದು ಸಹಜ, ಬುಮ್ರಾ ಗಾಯಗೊಂಡಿರುವುದು ನಿಜಕ್ಕೂ ದೊಡ್ಡ ನಷ್ಟ ಹಾಗಂತ ಅವರನ್ನು ವಿಶ್ವಕಪ್‌ನಲ್ಲಿ ಆಡಿಸುವುದು ಅಪಾಯ ಎಂದು ರೋಹಿತ್ ಶರ್ಮಾ ಹೇಳಿದರು.
"ಗಾಯದ ಸಮಸ್ಯೆ ಬಗ್ಗೆ ನಿರಾಶೆಯನ್ನು ತೋರಿಸಲು ಸಾಧ್ಯವಿಲ್ಲ. ನಾವು ಏನು ಮಾಡಬೇಕು ಎನ್ನುವುದನ್ನು ಎದುರುನೋಡಬೇಕು. ನಾವು ಇತರ ಆಟಗಾರರನ್ನು ಬೆಂಬಲಿಸಿದ್ದೇವೆ. ನಾವು ಬೇಗನೆ ಇಲ್ಲಿಗೆ ಬಂದು ಪರಿಸ್ಥಿತಿಗೆ ಹೊಂದಿಕೊಳ್ಳಲು ಬಯಸಿದ್ದೇವೆ. ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆಗೆ ನಾವು ಸಿದ್ಧರಾಗಿರುತ್ತೇವೆ." ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಪಂತ್ ಮತ್ತು ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಚಿಂತೆ
ಭಾರತದ ಎರಡನೇ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಅಂತರದಿಂದ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ರಿಷಬ್ ಪಂತ್ 11 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿ ಔಟಾದರು. ದಿನೇಶ್ ಕಾರ್ತಿಕ್ 14 ಎಸೆತಗಳಲ್ಲಿ ಕೇವಲ 10 ರನ್ ಮಾತ್ರ ಗಳಿಸುವ ಮೂಲಕ ನಿರಾಸೆ ಅನುಭವಿಸಿದರು. ಎರಡೂ ವಿಕೆಟ್‌ಕೀಪರ್ ಬ್ಯಾಟರ್‌ನ ನೀರಸ ಪ್ರದರ್ಶನಗಳು ಈಗ ರೋಹಿತ್ ಶರ್ಮಾ ಚಿಂತೆಯನ್ನು ಹೆಚ್ಚಿಸಿವೆ.
ಎಡಗೈ ಬ್ಯಾಟರ್ ರಿಷಬ್ ಪಂತ್ ಭಾರತದ ಉತ್ತಮ ಬ್ಯಾಟರ್ ಎನ್ನುವುದರಲ್ಲಿ ಸಂಶಯವಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಇನ್ನಿಂಗ್ಸ್‌ಗಳು ಸಾಕಷ್ಟು ಉತ್ತಮವಾಗಿರುತ್ತದೆ. ಆದರೆ, ಟಿ20 ಮಾದರಿಯಲ್ಲಿ ಪಂತ್ ಉತ್ತಮ ರನ್ ಗಳಿಸುವಲ್ಲಿ ವಿಫಲರಾಗುತ್ತಿದ್ದಾರೆ. ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ದಿನೇಶ್ ಕಾರ್ತಿಕ್ ಕೂಡ ಆಸ್ಟ್ರೇಲಿಯಾದಲ್ಲಿ ಎರಡೂ ಅಭ್ಯಾಸ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ.
ಟೀಂ ಇಂಡಿಯಾದ ಫಿನಿಷರ್ ಆಗಿರುವ ದಿನೇಶ್ ಕಾರ್ತಿಕ್ ಎರಡನೇ ಅಭ್ಯಾಸ ಪಂದ್ಯದಲ್ಲಿ 14 ಎಸೆತಗಳಲ್ಲಿ ಕೇವಲ 10 ರನ್ ಮಾತ್ರ ಗಳಿಸಿದರು. ಇಬ್ಬರಿಗೂ ಉಳಿದ ಎರಡು ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಇದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications