ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs Zim: ಜಿಂಬಾಬ್ವೆ ವಿರುದ್ಧ 71 ರನ್‌ಗಳ ಬೃಹತ್ ಜಯ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

T20 World Cup: Team India Won By 71 Runs Against Zimbabwe Will Play Against England In Semi Final

ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ ಅರ್ಧಶತಕ, ಅಶ್ವಿನ್, ಶಮಿ, ಅಕ್ಷರ್ ಪಟೇಲ್ ಉತ್ತಮ ಬೌಲಿಂಗ್‌ ನೆರವಿನಿಂದ ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ 71 ರನ್‌ಗಳ ಬೃಹತ್ ಜಯ ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ಪ್ರವೇಶಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್‌ ಅವರ ಅರ್ಧಶತಕಗಳ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

Pakistan Vs Bangladesh: ಮೂರನೇ ಅಂಪೈರ್ ಮಾಡಿದ ಎಡವಟ್ಟಿಗೆ ಬಲಿಯಾದ ಶಕೀಬ್Pakistan Vs Bangladesh: ಮೂರನೇ ಅಂಪೈರ್ ಮಾಡಿದ ಎಡವಟ್ಟಿಗೆ ಬಲಿಯಾದ ಶಕೀಬ್

187 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಜಿಂಬಾಬ್ವೆ ತಂಡಕ್ಕೆ ಭಾರತ ಬೌಲರ್ ಗಳು ಆರಂಭದಲ್ಲೇ ಆಘಾತ ನೀಡಿದರು. ಭಾರತದ ವೇಗದ ಬೌಲಿಂಗ್ ದಾಳಿಗೆ ತತ್ತರಿಸಿದ ಜಿಂಬಾಬ್ವೆ 7 ಓವರ್ ಗಳಲ್ಲಿ 31 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಆಲ್‌ರೌಂಡರ್ ಸಿಕಂದರ್ ರಾಜಾ ಮತ್ತು ರಿಯಾನ್ ಬರ್ಲ್ ಕೆಲ ಹೊತ್ತು ಭಾರತದ ಬೌಲಿಂಗ್‌ ಅನ್ನು ಸಮರ್ಥವಾಗಿ ಎದುರಿಸಿದರು. ರಾಜಾ 24 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರೆ, ಬರ್ಲ್ 22 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರು. ಇವರಿಬ್ಬರ ನಂತರ ಜಿಂಬಾಬ್ವೆ ಬ್ಯಾಟರ್ ಗಳು ತರಗೆಲೆಗಳಂತೆ ಉದುರಿದರು.

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸು

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸು

17.2 ಓವರ್ ಗಳಲ್ಲಿ 115 ರನ್‌ಗಳಿಗೆ ಆಲೌಟ್ ಆಗುವ ಮೂಲಕ 71 ರನ್‌ಗಳ ಸೋಲನುಭವಿಸಿದರು. ರವಿಚಂದ್ರನ್ ಅಶ್ವಿನ್ 4 ಓವರ್ ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಭುವನೇಶ್ವರ್, ಅರ್ಷ್‌ದೀಪ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರು.

ನವೆಂಬರ್ 10ರಂದು ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಡಿಲೇಡ್‌ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದೆ. ಮತ್ತೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ನವೆಂಬರ್ 9 ರಂದು ಈ ಪಂದ್ಯ ನಡೆಯಲಿದೆ.

ಎರಡನೇ ಅರ್ಧಶತಕ ದಾಖಲಿಸಿದ ಕೆಎಲ್ ರಾಹುಲ್

ಎರಡನೇ ಅರ್ಧಶತಕ ದಾಖಲಿಸಿದ ಕೆಎಲ್ ರಾಹುಲ್

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿತು. ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. 13 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು.

ಆದರೆ ಕೆಎಲ್ ರಾಹುಲ್ ತಮ್ಮ ಉತ್ತಮ ಫಾರ್ಮ್ ಮುಂದುವರೆಸಿದರು. 35 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಸಹಿತ 51 ರನ್ ಗಳಿಸಿದರು. ಈ ಟಿ20 ವಿಶ್ವಕಪ್‌ನಲ್ಲಿ ತಮ್ಮ ಎರಡನೇ ಅರ್ಧಶತಕವನ್ನು ದಾಖಲಿಸಿದರು. ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 26 ರನ್‌ ಗಳಿಸಿ ಔಟಾದರು. ರಿಷಬ್ ಪಂತ್ 5 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 18 ರನ್ ಗಳಿಸಿದರು.

ಆರ್ಭಟಿಸಿದ ಸೂರ್ಯಕುಮಾರ್ ಯಾದವ್

ಆರ್ಭಟಿಸಿದ ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್ ಜಿಂಬಾಬ್ವೆ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. ಕೇವಲ 25 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಿತ 61 ರನ್ ಚಚ್ಚಿದ ಸೂರ್ಯಕುಮಾರ್ ಭಾರತ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು.

ಸೂರ್ಯಕುಮಾರ್ ಯಾದವ್ ಸ್ಫೋಟಕ ಆಟದ ನೆರವಿನಿಂದ ಭಾರತ ಕೊನೆಯ ಐದು ಓವರ್ ಗಳಲ್ಲಿ 79 ರನ್ ಕಲೆಹಾಕಿತು. ಕೊನೆಯ ಓವರ್ ನಲ್ಲಿ ಭಾರತ 21 ರನ್ ಕೆಲಹಾಕುವ ಮೂಲಕ ಮೆಲ್ಬೊರ್ನ್ ಅಂಗಳದಲ್ಲಿ 186 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಎರಡೂ ತಂಡಗಳ ಪ್ಲೇಯಿಂಗ್ XI

ಎರಡೂ ತಂಡಗಳ ಪ್ಲೇಯಿಂಗ್ XI

ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಿಯಾನ್ ಬರ್ಲ್, ಟೆಂಡೈ ಚತಾರ, ರಿಚರ್ಡ್ ನಾಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ

Story first published: Sunday, November 6, 2022, 17:14 [IST]
Other articles published on Nov 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X