Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind Vs Zim: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ರಿಷಬ್‌ ಪಂತ್‌ಗೆ ಸಿಕ್ತು ಅವಕಾಶ

T20 World Cup: Team India Won The Toss And Opt To Bat First Against Zimbabwe

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲನುಭವಿಸುವ ಮೂಲಕ ಟಿ20 ವಿಶ್ವಕಪ್‌ನಿಂದಲೇ ಹೊರಬಿದ್ದಿದ್ದರೆ, ಭಾರತ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ.

ಮತ್ತೊಂದೆಡೆ ಬಾಂಗ್ಲಾದೇಶದ ವಿರುದ್ಧ ಜಯಗಳಿಸುವ ಮೂಲಕ ಪಾಕಿಸ್ತಾನ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಭಾರತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳಲು ಈ ಪಂದ್ಯವನ್ನು ಗೆಲ್ಲಬೇಕಾಗಿದೆ.

ಸೆಮಿಫೈನಲ್‌ಗೆ ಮುನ್ನ ಟೀಂ ಇಂಡಿಯಾ ರಿಷಬ್‌ ಪಂತ್‌ಗೆ ಅವಕಾಶ ಕೊಡಲು ನಿರ್ಧರಿಸಿದ್ದು, ಜಿಂಬಾಬ್ವೆ ವಿರುದ್ಧ ಅವರು ಕಣಕ್ಕಿಳಿಯಲಿದ್ದಾರೆ. ಟೂರ್ನಿಯಲ್ಲಿ ಅಷ್ಟೇನು ಉತ್ತಮ ಪ್ರದರ್ಶನ ನೀಡದ ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ ಹೊರಗುಳಿಯಲಿದ್ದಾರೆ.

ಟಾಸ್ ನಂತರ ಮಾತನಾಡಿದ ಜಿಂಬಾಬ್ವೆ ತಂಡದ ನಾಯಕ ಕ್ರೇಗ್ ಎರ್ವಿನ್ ನಾವು ಟಾಸ್ ಗೆದ್ದಿದ್ದರೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೆವು ಎಂದು ಹೇಳಿದ್ದಾರೆ. ಜಿಂಬಾಬ್ವೆ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ಲ್ಯೂಕ್ ಜೊಂಗ್ವೆ ಗಾಯಕ್ಕೆ ತುತ್ತಾಗಿದ್ದು ಅವರ ಬದಲಿಗೆ ವೆಲ್ಲಿಂಗ್ಟನ್ ಮಸಕಡ್ಜಾ ಸ್ಥಾನ ಪಡೆದಿದ್ದಾರೆ. ಮಿಲ್ಟನ್ ಶುಂಭಾ ಬದಲಿಗೆ ಟೋನಿ ಮುನ್ಯೊಂಗಾ ಸ್ಥಾನ ಪಡೆದಿದ್ದಾರೆ.

T20 World Cup: Team India Won The Toss And Opt To Bat First Against Zimbabwe

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಿಯಾನ್ ಬರ್ಲ್, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ

Story first published: Sunday, November 6, 2022, 13:20 [IST]
Other articles published on Nov 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+