Ind Vs Ned: ಒಂದೇ ಪಂದ್ಯದಲ್ಲಿ ಮೂರು ದಾಖಲೆ ನಿರ್ಮಿಸಿದ ಟೀಂ ಇಂಡಿಯಾ ಆಟಗಾರರು

ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್‌ನ ತಮ್ಮ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಕೂಡ 56 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ. ಅಕ್ಟೋಬರ್ 27 ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ (SCG) ನಲ್ಲಿ ಈ ಪಂದ್ಯ ನಡೆಯಿತು.
ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು ಮತ್ತು ನಿಧಾನಗತಿಯ ಆರಂಭ ಹೊಂದಿತ್ತು. ಕೆಎಲ್ ರಾಹುಲ್ ಬೇಗನೆ ಔಟಾದ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡಿದರು ಮತ್ತು 56 ಎಸೆತಗಳಲ್ಲಿ 73 ರನ್‌ಗಳ ಜೊತೆಯಾಟ ನೀಡಿದರು. ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಗಳಿಸಿದರು.
ರೋಹಿತ್ ಶರ್ಮಾ ಔಟಾದ ಬಳಿಕ ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಸ್ಫೋಟಕ ಜೊತೆಯಾಟ ಆಡಿದರು. ಕೇವಲ 48 ಎಸೆತಗಳಲ್ಲಿ 95 ರನ್‌ಗಳನ್ನು ಗಳಿಸಿದರು. ಇವರಿಬ್ಬರು ಅಜೇಯರಾಗಿ ಉಳಿದು ಅರ್ಧಶತಕಗಳನ್ನು ಯಶಸ್ವಿಯಾಗಿ ಪೂರೈಸಿ, ಭಾರತದ ಮೊತ್ತವನ್ನು 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲು ಸಹಕಾರಿಯಾದರು. ಸೂರ್ಯಕುಮಾರ್ 25 ಎಸೆತಗಳಲ್ಲಿ ಅಜೇಯ 51 ರನ್ ಬಾರಿಸಿದರೆ, ಕೊಹ್ಲಿ 44 ಎಸೆತಗಳಲ್ಲಿ ಅಜೇಯ 62 ರನ್ ಗಳಿಸಿದರು.
ಡಚ್ ತಂಡವನ್ನು ಕೇವಲ 123-9ಕ್ಕೆ ನಿರ್ಬಂಧಿಸಿ 56 ರನ್‌ಗಳಿಂದ ಜಯಗಳಿಸಿತು. ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರ ನಾಲ್ವರು ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಸಿಡ್ನಿಯಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಭಾರತ ಮೂರು ದಾಖಲೆಗಳನ್ನು ನಿರ್ಮಿಸಿತು.

ಹಿಟ್ ಮ್ಯಾನ್ ರೋಹಿತ್ ಶರ್ಮಾ ದಾಖಲೆ
ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾದ ರೋಹಿತ್ ಶರ್ಮಾ, ನೆದರ್ಲ್ಯಾಂಡ್ಸ್ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 39 ಎಸೆತಗಳಲ್ಲಿ ಮೂರು ಭರ್ಜರಿ ಸಹಿತ 53 ರನ್ ಗಳಿಸಿದರು.
ಭಾರತದ ಪರವಾಗಿ 8 ಆವೃತ್ತಿಗಳಲ್ಲಿ ಆಡಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅದರ ಜೊತೆಯಲ್ಲೇ, ಭಾರತದ ಪರವಾಗಿ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆದ ದಾಖಲೆಯನ್ನು ರೋಹಿತ್ ಶರ್ಮಾ ಮುರಿದರು. ಯುವಿ ಈ ವರೆಗೆ ಟಿ20 ವಿಶ್ವಕಪ್‌ನಲ್ಲಿ 33 ಸಿಕ್ಸರ್ ಸಿಡಿಸಿದ್ದಾರೆ. ರೋಹಿತ್ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಆಡಿದ 32 ಇನ್ನಿಂಗ್ಸ್‌ಗಳಲ್ಲಿ 34 ಸಿಕ್ಸರ್ ಬಾರಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದರು.
ಟಿ20 ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ಕಳಪೆ ಬ್ಯಾಟಿಂಗ್‌ಗೆ ಇದೂ ಒಂದು ಕಾರಣ; ವಾಸಿಂ ಜಾಫರ್

ಅತಿ ಹೆಚ್ಚು ಮೇಡನ್ ಓಬರ್ ಮಾಡಿದ ಭುವಿ
ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನ ತಮ್ಮ ಬೌಲಿಂಗ್‌ಗಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಭುವನೇಶ್ವರ್ ಕುಮಾರ್, ಟಿ20 ವಿಶ್ವಕಪ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ಮಾಡುತ್ತಿದ್ದಾರೆ.
ಪಾಕಿಸ್ತಾನ ವಿರುದ್ಧ 4 ಓವರ್ ಬೌಲ್ ಮಾಡಿ 22 ರನ್ ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧ 3 ಓವರ್ ಬೌಲ್ ಮಾಡಿ 9 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು.
ನೆದರ್ಲ್ಯಾಂಡ್ಸ್ ವಿರುದ್ಧ ಎರಡು ಓವರ್ ಮೇಡನ್ ಮಾಡುವ ಮೂಲಕ ದಾಖಲೆ ನಿರ್ಮಿಸಿದರು. ಭುವಿ ಈವರೆಗೂ ಟಿ20 ವಿಶ್ವಕಪ್‌ನಲ್ಲಿ 20 ಮೇಡನ್ ಓವರ್ ಮಾಡಿದ್ದಾರೆ. ಈ ಮೊದಲು ಪ್ರವೀಣ್ ಕುಮಾರ್ 19 ಮೇಡನ್ ಓವರ್ ಮಾಡಿ, ಭಾರತದ ಪರವಾಗಿ ಹೆಚ್ಚು ಮೇಡನ್ ಓವರ್ ಮಾಡಿದ ಬೌಲರ್ ಎನಿಸಿಕೊಂಡಿದ್ದರು. ಭುವನೇಶ್ವರ್ ಕುಮಾರ್ ಈಗ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ನಡೆಯುತ್ತಿರುವ ಸ್ಪರ್ಧೆಯಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಟಿ20 ವೃತ್ತಿಜೀವನದಲ್ಲಿ 19 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ್ದಾರೆ.

ಹೆಚ್ಚು ರನ್ ಗಳಿಸಿದ ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧ 25 ಎಸೆತಗಳಲ್ಲಿ ಅಜೇಯ 51 ರನ್ ಗಳಿಸಿದರು. ಅವರು 10 ರನ್ ಗಳಿಸಿದ್ದಾಗ, 2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
2022ರಲ್ಲಿ 25 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ 184.6 ರ ಸ್ಟ್ರೈಕ್ ರೇಟ್‌ನಲ್ಲಿ 867 ರನ್ ಗಳಿಸಿದ್ದಾರೆ. ಪಾಕಿಸ್ತಾನದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರ 20 ಪಂದ್ಯಗಳಿಂದ 839 ರನ್ ಗಳಿಸಿದ್ದು ಈವರೆಗೂ ಅಗ್ರ ಸ್ಥಾನದಲ್ಲಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications