T20 World Cup: ಬ್ರಿಸ್ಬೇನ್‌ನಲ್ಲಿ ಏಕಾಂಗಿಯಾಗಿ ಬ್ಯಾಟಿಂಗ್ ಅಭ್ಯಾಸ ಮಾಡಿದ ಕೊಹ್ಲಿ
ಪರ್ತ್‌ನಲ್ಲಿ ಸುದೀರ್ಘ ಆಭ್ಯಾಸವನ್ನು ಮುಗಿಸಿರುವ ಟೀಂ ಇಂಡಿಯಾ ಬ್ರಿಸ್ಬೇನ್‌ಗೆ ಆಗಮಿಸಿದೆ. ಸೋಮವಾರ ಆಸ್ಟ್ರೇಲಿಯಾ ವಿರುದ್ಧ ಭಾರತ ಅಧಿಕೃತ ಅಭ್ಯಾಸ ಪಂದ್ಯವನ್ನಾಡಲು ಸಜ್ಜಾಗುತ್ತಿದೆ. ಬ್ರಿಸ್ಬೇನ್‌ನ ಗಬ್ಬಾದಲ್ಲಿ ಈ ಅಭ್ಯಾಸ ಪಂದ್ಯ ನಡೆಯಲಿದೆ.
ಅಭ್ಯಾಸ ಪಂದ್ಯಕ್ಕೆ ಮುನ್ನ ಭಾನುವಾರ ಟೀಂ ಇಂಡಿಯಾದಲ್ಲಿ ಗಬ್ಬಾದಲ್ಲಿ ಅಭ್ಯಾಸ ಮಾಡುತ್ತಿದೆ. ಮೊಹಮ್ಮದ್ ಶಮಿ ಕೂಡ ಗಬ್ಬಾದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ, ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.
ಟೀಂ ಇಂಡಿಯಾದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಬ್ಯಾಟಿಂಗ್ ಅಭ್ಯಾಸ ಮಾಡಿದ್ದಾರೆ. ಗಬ್ಬಾ ಕ್ರೀಡಾಂಗಣದ ನೆಟ್ಸ್‌ನಲ್ಲಿ ಸುದೀರ್ಘ ಅವಧಿಯವರೆಗೆ ಅವರು ಬ್ಯಾಟಿಂಗ್ ಅಭ್ಯಾಸ ಮಾಡಿದರು.
ಅಭ್ಯಾಸ ಪಂದ್ಯಕ್ಕೆ ಮುನ್ನ ಆಟಗಾರರಿಗೆ ತಾಲೀಮು ನಡೆಸಲು ಭಾನುವಾರ ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ನಂತರ, ಅಕ್ಟೋಬರ್ 19ರಂದು ನ್ಯೂಜಿಲೆಂಡ್ ವಿರುದ್ಧ ಮತ್ತೊಂದು ಅಭ್ಯಾಸ ಪಂದ್ಯವನ್ನು ಟೀಂ ಇಂಡಿಯಾ ಆಡಲಿದೆ. ನಾಯಕ ರೋಹಿತ್ ಶರ್ಮಾಗೆ ತನ್ನ ಪ್ಲೇಯಿಂಗ್ ಇಲೆವೆನ್ ಅಂತಿಮಗೊಳಿಸಲು ಈ ಎರಡು ಪಂದ್ಯಗಳು ಬಹಳ ಮುಖ್ಯವಾಗಿವೆ.

ಅಭ್ಯಾಸ ಪಂದ್ಯದಲ್ಲಿ ಶಮಿ ಕಣಕ್ಕೆ
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹಿರಿಯ ವೇಗಿ ಮೊಹಮ್ಮದ್ ಶಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಐಪಿಎಲ್ ನಂತರ ಮೊಹಮ್ಮದ್ ಶಮಿ ಯಾವುದೇ ಪಂದ್ಯವನ್ನು ಆಡಿಲ್ಲ, ಕಳೆದ ವಿಶ್ವಕಪ್ ನಂತರ ಅವರು ಭಾರತಕ್ಕಾಗಿ ಕ್ರಿಕೆಟ್ ಆಡಿಲ್ಲ, ಆದರೂ ಅವರ ಅನುಭವದ ಆಧಾರದ ಮೇಲೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಆಸ್ಟ್ರೇಲಿಯಾ ಪಿಚ್‌ಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ನಾಯಕ ರೋಹಿತ್ ಶರ್ಮಾ ಕೂಡ ಶಮಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
T20 World Cup: 11 ವರ್ಷದ ಬಾಲಕನ ಬೌಲಿಂಗ್ ಕೌಶಲ್ಯಕ್ಕೆ ರೋಹಿತ್ ಶರ್ಮಾ ಫಿದಾ

ಯುವಕರಿಗೆ ಹೆಚ್ಚಿನ ಅವಕಾಶ
ಕಳೆದ ಟಿ20 ವಿಶ್ವಕಪ್‌ನಲ್ಲಿ ಭಾರತ ನಿರೀಕ್ಷಿತ ಪ್ರದರ್ಶನ ನೀಡದೆ ನಿರಾಸೆ ಮೂಡಿಸಿತ್ತು. ಅಂದಿನಿಂದ ಟೀಂ ಇಂಡಿಯಾದಲ್ಲಿ ಹಲವು ಯುವ ಆಟಗಾರರಿಗೆ ಸಾಕಷ್ಟು ಅವಕಾಶ ನೀಡಲಾಗಿದೆ. ಇದರಿಂದ ಯುವ ಆಟಗಾರರ ಆಟದ ಶೈಲಿಯನ್ನು ಸಾಕಷ್ಟು ಬದಲಾವಣೆ ಮಾಡಲಾಗಿದೆ.
"ಆಟಗಾರರು ಗಾಯಗೊಳ್ಳುವುದು ಸಹಜವಾಗಿದೆ. ಕಳೆದ ಒಂದು ವರ್ಷದಲ್ಲಿ ನಮ್ಮ ಗಮನವು ನಮ್ಮ ಬೆಂಚ್ ಬಲವನ್ನು ಹೆಚ್ಚಿಸುವುದರ ಮೇಲೆ ಕೇಂದ್ರೀಕೃತವಾಗಿದೆ. ಅವಕಾಶ ಸಿಕ್ಕಾಗಲೆಲ್ಲಾ ನಾವು ಹೊಸಬರಿಗೆ ಅವಕಾಶ ನೀಡಿದ್ದೇವೆ" ಎಂದು ನಾಯಕ ರೋಹಿತ್ ಶರ್ಮಾ ಹೇಳಿದರು.

ಅಕ್ಟೋಬರ್ 23ರಂದು ಪಾಕ್ ವಿರುದ್ಧ ಪಂದ್ಯ
ಟೀಂ ಇಂಡಿಯಾ ಟಿ20 ವಿಶ್ವಕಪ್‌ನ ತನ್ನ ಮೊದಲನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾರತದ ವಿರುದ್ಧ 10 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಬಾರಿ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿದೆ.
ಶಾಹಿನ್ ಅಫ್ರಿದಿ ಗಾಯದಿಂದ ಚೇತರಿಸಿಕೊಂಡಿದ್ದು ತಂಡಕ್ಕೆ ಮರಳಿದ್ದಾರೆ, ಬಲಿಷ್ಠ ಬೌಲಿಂಗ್ ಹೊಂದಿರುವ ಪಾಕಿಸ್ತಾನ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಯೋಜನೆಯಲ್ಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications