ಅಭ್ಯಾಸದ ವೇಳೆ ಅಭಿಮಾನಿ ಮೇಲೆ ರೇಗಿದ ಕೊಹ್ಲಿ: ವೈರಲ್ ಆಯ್ತು ವಿಡಿಯೋ

ಟಿ20 ವಿಶ್ವಕಪ್‌ನ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಕಠಿಣ ಅಭ್ಯಾಸವನ್ನು ನಡೆಸುತ್ತಿದೆ. ಪಾಕಿಸ್ತಾನದ ವಿರುದ್ಧ ಭಾನುವಾರ ಭಾರತ ತಂಡ ಈ ಬಾರಿಯ ವಿಶ್ವಕಪ್‌ನ ಮೊದಲ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್‌ನಲ್ಲಿ ಭರ್ಜರಿ ತಾಲೀಮು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳ ಗುಂಪು ವಿರಾಟ್ ಕೊಹ್ಲಿ ಏಕಾಗ್ರತೆಗೆ ಅಡ್ಡಿಯುಂಟು ಮಾಡಿದಾಗ ಅಭಿಮಾನಿಗಳ ಮೇಲೆ ಕೊಹ್ಲಿ ಸಿಡುಕಿದ್ದು ವಿಡಿಯೋ ವೈರಲ್ ಆಗಿದೆ.
ನೆಟ್‌ನಲ್ಲಿ ವಿರಾಟ್ ಕೊಹ್ಲಿ ಥ್ರೋಡೌನ್ ಎಸೆತಗಳಿಗೆ ಅಭ್ಯಾಸವನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ನೆಟ್ಸ್‌ನ ಹಿಂದೆ ನಿಂತ ಅಭಿಮಾನಿಗಳ ಗುಂಪಿನಲ್ಲಿ ಒಬ್ಬ ಅಭಿಮಾನಿ "ಸ್ಟೇಡಿಯಂನಿಂದ ಆಚೆಗೆ ಬಾರಿಸಿ" ಎಂದು ಜೋರಾಗಿ ಕಿರುಚಾಡಲು ಆರಂಭಿಸಿದ್ದರು. ಇದು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕಿರಿಕಿರಿಯುಂಟು ಮಾಡಿತ್ತು. ಹೀಗಾಗಿ ತಕ್ಷಣವೇ ವಿರಾಟ್ ಕೊಹ್ಲಿ ತನಗೆ ಇದರಿಂದ ತನ್ನ ಏಕಾಗ್ರತೆಗೆ ತಪ್ಪುತ್ತಿದೆ ಎಂದು ಸ್ವಲ್ಪ ಖಾರವಾಗಿಯೇ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ಹೇಳಿದ್ದೇನು?
"ಇದು ಅಭ್ಯಾಸದ ಸಂದರ್ಭ, ಮಾತಾಡಬೇಡಿ. ಏಕಾಗ್ರತೆ ತಪ್ಪುತ್ತದೆ" ಎಂದು ವಿರಾಟ್ ಕೊಹ್ಲಿ ಸ್ವಲ್ಪ ಖಾರವಾಗಿಯೇ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಆಡಿದ ಮಾತಿಗೆ ಅಭಿಮಾನಿಗ ಕೂಡ ಸಮ್ಮತಿ ಸೂಚಿಸಿದ್ದು ವಿಶ್ರಾಂತಿಯಲ್ಲಿರುವಾಗ ನಾನು ಮಾತನಾಡುತ್ತೇನೆ. ನಾನು ಕಿಂಗ್ ಪರವಾಗಿಯೇ ಇದ್ದೇನೆ. ಆತ ಕಿಂಗ್" ಎಂದು ಹೇಳುತ್ತಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಪಾಕಿಸ್ತಾನದ ವಿರುದ್ಧ ಕೊಹ್ಲಿ ಉತ್ತಮ ಪ್ರದರ್ಶನ
ಇನ್ನು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ತಂಡದ ವಿರುದ್ಧ ಯಾವಾಗಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇನ್ನು ಇತ್ತೀಚೆಗಷ್ಟೇ ಅಂತ್ಯವಾಗಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಸುದೀರ್ಘ ಕಾಲದ ಬಳಿಕ ಶತಕ ಸಿಡಿಸಿ ಫಾರ್ಮ್ ಕಂಡುಕೊಂಡಿದ್ದರು. ಹೀಗಾಗಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿಯೂ ಕೊಹ್ಲಿ ಮೇಲೆ ನಿರೀಕ್ಷೆಯಿದೆ.

ವಿಶ್ವಕಪ್‌ಗೂ ಮುನ್ನ ಉತ್ತಮ ಪ್ರದರ್ಶನ ನೀಡಿದ ಭಾರತ
ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಗೂ ಮುನ್ನ ನಡೆಸ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಏಷ್ಯಾ ಕಪ್‌ನಲ್ಲಿ ಹೊರತುಪಡಿಸಿ ಬಳಿಕ ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಮಿಂಚಿದ್ದು ಸರಣಿ ಗೆಲುವು ಸಾಧಿಸಿದೆ. ಬಳಿಕ ಆಸಿಸ್ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ನಡೆದ ಅಭ್ಯಾಸ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಬಳಗ ಅದ್ಭುತ ಪ್ರದರ್ಶನ ನೀಡಿದೆ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications