ಟಿ20 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲು: ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್

ಟಿ20 ವಿಶ್ವಕಪ್‌ನ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಭರ್ಜರಿ ಸೋಲಿನ ರುಚಿ ತೋರಿಸಿದೆ. ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆದ ಈ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ ಸವಾಲಿನ ಮೊತ್ತ ಪೇರಿಸಿತ್ತು. ಆದರೆ ಈ ಮೊತ್ತವನ್ನು ಇಂಗ್ಲೆಂಡ್ ತಂಡ 14.4 ಓವರ್‌ಗಳಲ್ಲಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು.
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಪ್ರಮುಖ ಆಟಗಾರರಾದ ನಾಯಕ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಆಡಲು ಇಳಿದಿರಲಿಲ್ಲ. ಹೀಗಾಗಿ ಶದಬ್ ಖಾನ್ ತಂಡವನ್ನು ಮುನ್ನಡೆಸಿದರು. ಇತ್ತ ಇಂಗ್ಲೆಂಡ್ ತಂಡದ ಪರವಾಗಿ ಬೆನ್ ಸ್ಟೋಕ್ಸ್ ಹ್ಯಾರಿ ಬ್ರೂಕ್ ಅದ್ಭುತ ಪ್ರದರ್ಶನ ನೀಡಿದ್ದು ಭರ್ಜರಿ ಗೆಲುವಿಗೆ ಕಾರಣವಾದರು.

ಸಾಧಾರಣ ಗುರಿ ನೀಡಿದ ಪಾಕ್
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಿತು. ಬಾಬರ್ ಅಜಂ ಹಾಗೂ ರಿಜ್ವಾನ್ ಬದಲಿಗೆ ಮಸೂದ್ ಹಾಗೂ ಹೈದರ್ ಅಲಿ ಜೋಡಿ ಆರಂಭಿಕರಾಗಿ ಕಣಕ್ಕಿಳಿದು ಉತ್ತಮ ಆರಂಭ ನೀಡಿದರು. ಪಾಕಿಸ್ತಾನ ತಂಡದ ಪರವಾಗಿ ಯಾವ ಆಟಗಾರ ಕೂಡ ದೊಡ್ಡ ಮೊತ್ತದ ಕೊಡುಗೆ ನೀಡಲು ವಿಫಲವಾದರು ಕೂಡ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಲು ಯಶಸ್ವಿಯಾಗಿತ್ತು. ಮಳೆಯಿಂದಾಗಿ ಈ ಪಂದ್ಯ 19 ಓವರ್‌ಗಳಿಗೆ ನಿಗದಿಗೊಳಿಸಲಾಗಿತ್ತು.

ಮಿಂಚಿದ ಇಂಗ್ಲೆಂಡ್ ದಾಂಡಿಗರು
ಪಾಕಿಸ್ತಾನ ತಂಡ ನೀಡಿದ 161 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ ತಂಡ ಆರಂಭಿಕ ಆಘಾತ ಅನುಭವಿಸಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಸ್ಪೋಟಕ ಪ್ರದರ್ಶನ ನೀಡಿದ ಕಾರಣದಿಂದಾಗಿ ಇಂಗ್ಲೆಂಡ್ ತಂಡ ಸುಲಭವಾಗಿ ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಬೆನ್ ಸ್ಟೋಕ್ಸ್ 18 ಎಸೆತಗಳಲ್ಲಿ 36 ರನ್‌ಗಳಿಸಿದರೆ ಲಿಯಾಮ್ ಲಿವಿಂಗ್ಸ್ಟನ್ 16 ಎಸೆತಗಳಲ್ಲಿ 28 ರನ್ ಸಿಡಿಸಿದರು. ಇನ್ನು ಹ್ಯಾರಿ ಬ್ರೂಕ್ 24 ಎಸೆತಗಳಲ್ಲಿ 45 ರನ್ ಸಿಡಿಸಿದರೆ ಸ್ಯಾಮ್ ಕರನ್ 14 ಎಸೆತಗಳಲ್ಲಿ 33 ರನ್ ಬಾರಿಸಿ ಮಿಂಚಿದರು. ಇದರ ಪರಿಣಾಮವಾಗಿ ಇಂಗ್ಲೆಂಡ್ ತಂಡ 14.4 ಓವರ್‌ಗಳಲ್ಲಿಯೇ 4 ವಿಕೆಟ್ ಕಳೆದುಕೊಂಡು ಈ ಗುರಿ ಮುಟ್ಟುವಲ್ಲಿ ಯಶಸ್ವಿಯಾಗಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಅಲೆಕ್ಸ್ ಹೇಲ್ಸ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಡೇವಿಡ್ ವಿಲ್ಲಿ, ಡೇವಿಡ್ ಮಲನ್, ಕ್ರಿಸ್ ವೋಕ್ಸ್, ರೀಸ್ ಟೋಪ್ಲಿ, ಮಾರ್ಕ್ ವುಡ್
ಪಾಕಿಸ್ತಾನ: ಹೈದರ್ ಅಲಿ, ಶಾನ್ ಮಸೂದ್, ಶಾದಾಬ್ ಖಾನ್ (ನಾಯಕ), ಮೊಹಮ್ಮದ್ ನವಾಜ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೇನ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ರಿಜ್ವಾನ್, ಬಾಬರ್ ಆಜಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications