ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

"ವಿರಾಟ್ ಕೊಹ್ಲಿ ನಾಯಕತ್ವದ ಭವಿಷ್ಯಕ್ಕೆ ಟಿ20 ವಿಶ್ವಕಪ್ ನಿರ್ಣಾಯಕ"

T20 World Cup will be very importent for Virat Kohlis captaincy career: Saba Karim
ವಿರಾಟ್ ನಾಯಕನಾಗಿ ಇರ್ಬೇಕು ಅಂದ್ರೆ ಹೀಗೆ ಮಾಡ್ಲೇ ಬೇಕು | Oneindia Kannada

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ಕಾಲದ ಸರ್ವಶ್ರೇಷ್ಠ ಆಟಗಾರ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ. ಕಳೆದ ಕೆಲ ತಿಂಗಳುಗಳಿಂದ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕಗಳು ಸಿಡಿಯದಿದ್ದರೂ ಸ್ಥಿರ ಪ್ರದರ್ಶನವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಕೊಹ್ಲಿಯ ಒಟ್ಟಾರೆ ಅಂಕಿಅಂಶಗಳೇ ಆತ ಶ್ರೇಷ್ಠ ಆಟಗಾರ ಎಂಬುದನ್ನು ಹೇಳುತ್ತವೆ.

ಆದರೆ ವಿರಾಟ್ ಕೊಹ್ಲಿ ನಾಯಕತ್ವದ ವಿಚಾರವಾಗಿ ಸಾಕಷ್ಟು ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತವೆ. ಟೀಮ್ ಇಂಡಿಯಾ ನಾಯಕನಾಗಿ ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗದಿರುವುದು ಕೂಡ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಮಾಜಿ ಆಯ್ಕೆಗಾರ ಸಬಾ ಕರೀಮ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಬಾ ಕರೀಮ್ ಪ್ರಕಾರ ಮುಂದಿನ ಟಿ20 ವಿಶ್ವಕಪ್ ವಿರಾಟ್ ಕೊಹ್ಲಿ ನಾಯಕತ್ವದ ಭವಿಷ್ಯಕ್ಕೆ ನಿರ್ಣಾಯಕ ಪಾತ್ರವಹಿಸಲಿದೆ ಎಂದಿದ್ದಾರೆ.

ಮಹಿಳೆಯರ ಏಕದಿನ ಸರಣಿ: ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯಮಹಿಳೆಯರ ಏಕದಿನ ಸರಣಿ: ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

"ಟಿ20 ವಿಶ್ವಕಪ್ ವಿರಾಟ್ ಕೊಹ್ಲಿಯ ನಾಯಕತ್ವದ ಭವಿಷ್ಯಕ್ಕೆ ಬಹಳ ನಿರ್ಣಾಯಕ ಪಾತ್ರವಹಿಸಲಿದೆ. ನನ್ನ ಪ್ರಕಾರ ಆತನಿಗೆ ಒತ್ತಡಗಳು ಹೆಚ್ಚಾಗುತ್ತಿದೆ. ನಾಯಕನಾಗಿ ತಾನು ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ ಎಂದು ಸ್ವತಃ ವಿರಾಟ್ ಕೊಹ್ಲಿಗೂ ತಿಳಿದಿದೆ. ಹೀಗಾಗಿ ವಿರಾಟ್ ಕೊಹ್ಲಿ ಮುಮದಿನ ಟಿ20 ವಿಶ್ವಕಪ್‌ ಗೆಲ್ಲಲು ಕೊಹ್ಲಿ ತನ್ನ ಎಲ್ಲಾ ಪ್ರಯತ್ನಗಳನ್ನು ಕೂಡ ನಡೆಸಲಿದ್ದಾರೆ" ಎಂದು ಸಬಾ ಕರೀಂ ಹೇಳಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಭಾರತದ ಮತ್ತೋರ್ವ ಮಾಜಿ ಕ್ರಿಕೆಟಿಗ ರಿತೀಂದರ್ ಸೋಧಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ತನ್ನ ನಾಯಕತ್ವದ ದಾಖಲೆಯನ್ನು ವಿರಾಟ್ ಕೊಹ್ಲಿ ಉತ್ತಮ ಪಡಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ಕೊರೊನಾವೈರಸ್‌ನ ಕಾರಣದಿಂದಾಗಿ ಈ ಮಹತ್ವದ ಟೂರ್ನಿಯನ್ನು ಯುಎಇ ಹಾಗೂ ಒಮಾನ್‌ಗೆ ಸ್ಥಳಾಂತರಿಸಲಾಗಿದೆ.

"ತಂಡದಲ್ಲಿರುವ ಆಟಗಾರರಿಗೆ ಮಾಡುವ ಅವಮಾನ": ಪೃಥ್ವಿ ಶಾ ಸೇರ್ಪಡೆಗೆ ಕಪಿಲ್ ದೇವ್ ವಿರೋಧ

"ನೀವು ಒತ್ತಡದ ಬಗ್ಗೆ ಮಾತನಾಡುತ್ತಿದ್ದೀರಾ ಎಂದಾದರೆ ಅದು ವಿರಾಟ್ ಕೊಹ್ಲಿಯ ಮೇಲೆ ಖಂಡಿತಾ ಇದೆ. ಯಾಕೆಂದರೆ ಕೊಹ್ಲಿ ನಾಯಕತ್ವದಲ್ಲಿ ಭಾರತ ಐಸಿಸಿ ಟೂರ್ನಮೆಂಟ್ ಗೆದ್ದಿಲ್ಲ. ಸುದೀರ್ಘ ಕಾಲ ನಾಯಕನಾಗಿದ್ದ ಸಂದರ್ಭದಲ್ಲಿ ತಂಡ ಕಠಿಣ ಸಂದರ್ಭಗಳಲ್ಲಿ ಒತ್ತಡಕ್ಕೆ ಸಿಲುಕಿದೆ ಹಾಗೂ ಸೋಲು ಕಂಡಿದೆ. ಹೀಗಾಗಿ ವಿರಾಟ್ ಕೊಹ್ಲಿಗೆ ಈ ದಾಖಲೆಯನ್ನು ಉತ್ತಮ ಪಡಿಸಿಕೊಳ್ಳುವ ಅನಿವಾರ್ಯತೆಯಿದೆ" ಎಂದು ರಿತೀಂದರ್ ಸಿಂಗ್ ಸೋಧಿ ಹೇಳಿದ್ದಾರೆ.

Story first published: Sunday, July 4, 2021, 13:33 [IST]
Other articles published on Jul 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X