ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು 10ನೇ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಈ ಬಿಗ್ ಫೈಟ್‌ಗೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಟೂರ್ನಿಯ ಚಾಂಪಿಯನ್ ಪಟ್ಟಕ್ಕೇರಲು ಎರಡೂ ತಂಡಗಳು ಪ್ಲ್ಯಾನ್ ಮಾಡಿಕೊಂಡಿವೆ. ಒಟ್ಟಾರೆ 9 ಆವೃತ್ತಿಗಳ ಟಿ20 ವಿಶ್ವಕಪ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
2007 ಭಾರತ: ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಟೂರ್ನಿಯಲ್ಲಿ ಯುವ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರು. ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 157 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಾಕಿಸ್ತಾನ 19.3 ಓವರ್‌ಗಳಲ್ಲಿ 152 ರನ್‌ಗೆ ಆಲೌಟ್ ಆಯಿತು. ಭಾರತ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

2009ರ ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್ ಆತಿಥ್ಯ ನೀಡಿತ್ತು. ಲಾರ್ಡ್ಸ್‌ನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಿ 6 ವಿಕೆಟ್‌ಗೆ 138 ರನ್ ಸೇರಿಸಿತು. ಗುರಿಯನ್ನು ಬೆನ್ನಟ್ಟಿದ ಪಾಕ್ 18.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 139 ರನ್ ಕಲೆ ಹಾಕಿ ಜಯ ಸಾಧಿಸಿತು.

2010ರಲ್ಲಿ ಟಿ20 ವಿಶ್ವಕಪ್ ಆತಿಥ್ಯ ವೆಸ್ಟ್ ಇಂಡೀಸ್ ಪಾಲಾಯಿತು. ಈ ಟೂರ್ನಿಯ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಮೊದಲ ಬ್ಯಾಟಿಂಗ್ ಮಾಡಿ 6 ವಿಕೆಟ್‌ಗೆ 147 ರನ್ ಸೇರಿಸಿತು. ಈ ಗುರಿಯನ್ನು ಇಂಗ್ಲೆಂಡ್ 17 ಓವರ್‌ಗಳಲ್ಲಿ 4 ವಿಕೆಟ್ ಉಳಿಸಿಕೊಂಡು ಮುಟ್ಟಿ ಬೀಗಿತು.

2012ರ ಟಿ20 ವಿಶ್ವಕಪ್‌ಗೆ ಶ್ರೀಲಂಕಾ ಆತಿಥ್ಯ ನೀಡಿತ್ತು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 131 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಲಂಕಾ 18.4 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲೌಟ್ ಆಯಿತು.

ಬಾಂಗ್ಲಾದೇಶ 2014ರ ಟಿ20 ವಿಶ್ವಕಪ್ ಆಯೋಜಿಸಿತ್ತು. ಈ ಟೂರ್ನಿಯ ಅಂತಿಮ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದವು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 130 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಲಂಕಾ 17.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ಭಾರತದಲ್ಲಿ ನಡೆದಿದ್ದ 2016 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 155 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ವಿಂಡೀಸ್ 19.4 ಓವರ್‌ಗಳಲ್ಲಿ 6 ವಿಕೆಟ್‌ಗೆ 161 ರನ್ ಕಲೆ ಹಾಕಿ ಜಯ ಸಾಧಿಸಿತು.
ದುಬೈನಲ್ಲಿ 2021ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 4 ವಿಕೆಟ್‌ಗೆ 172 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ 18.5 ಓವರ್‌ಗಳಲ್ಲಿ 4 ವಿಕೆಟ್‌ಗೆ 172 ರನ್ ಸೇರಿಸಿತು. ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 2 ವಿಕೆಟ್‌ಗೆ 173 ರನ್ ಕಲೆ ಹಾಕಿತು.
2022 ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 137 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ 19 ಓವರ್‌ಗಳಲ್ಲಿ 5 ವಿಕೆಟ್ 138 ರನ್ ಕಲೆ ಹಾಕಿ ಜಯ ಸಾಧಿಸಿತು.
2024ರ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 176 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ 169 ರನ್ ಕಲೆ ಹಾಕಿ ಸೋಲು ಕಂಡಿತು. ಈ ಮೂಲಕ ಭಾರತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.