ಟಿ20 ವಿಶ್ವಕಪ್‌ಗೆ ಎಲ್ಲ ತಂಡಗಳು ಭರದಿಂದ ತಯಾರಿ ನಡೆಸಿವೆ. ಈ ನಿಟ್ಟಿನಲ್ಲಿ ಟೀಮ್ ಇಂಡಿಯಾ ಸಹ ಕಾರ್ಯ ಪ್ರವೃತ್ತವಾಗಿದೆ. ವಿಶ್ವಕಪ್‌ಗೆ ಯಾವೆಲ್ಲಾ ಆಟಗಾರರು ಆಯ್ಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ಟೀಮ್ ಮ್ಯಾನೇಜ್ಮೆಂಟ್ ತಲೆ ಕೆಡಿಸಿಕೊಳ್ಳುತ್ತಿದೆ. ಇತ್ತೀಚಿಗೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಆಯ್ಕೆದಾರ ಅಜಿತ್ ಅಗರ್ಕರ್ ಭೇಟಿ ಮಾಡಿದ್ದಾರೆ.
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.
ಇದಕ್ಕಾಗಿ ತಂಡಗಳನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸ ಬೇಕಾಗಿದೆ. ಬಿಸಿಸಿಐನಲ್ಲೂ ಸಭೆಗಳು ಶುರುವಾಗಿದೆ. ಈ ಬಾರಿಯ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಸೇರ್ಪಡೆಗೊಳ್ಳಲಿರುವ ಆಟಗಾರರು ಯಾರು ಎಂಬ ಪ್ರಶ್ನೆ ಮೂಡಿದೆ.

ಟೀಮ್ ಇಂಡಿಯಾದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಕನಸಿನಲ್ಲಿದ್ದಾರೆ. ಇನ್ನು ಬಂದಿರುವ ಮಾಹಿತಿಯ ಪ್ರಕಾರ ಇಬ್ಬರಲ್ಲಿ ಒಬ್ಬರ ಸ್ಥಾನಕ್ಕೆ ಕುತ್ತು ಇರುವುದು ಕಂಡು ಬಂದಿದೆ.
ಚುಟುಕು ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಇವರ ಓಪನಿಂಗ್ ಒಂದು ಸ್ಲಾಟ್ ಹಿಡಿದಿಟ್ಟುಕೊಂಡಿದ್ದಾರೆ. ಇನ್ನುಳಿದ ಒಂದು ಸ್ಲಾಟ್‌ಗೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ನಡುವೆ ಪೈಪೋಟಿ ನಡೆದಿದೆ. ಬಿಸಿಸಿಐ ವಿರಾಟ್ ಕೊಹ್ಲಿ ಅವರಿಗೆ ಟಿ20 ವಿಶ್ವಕಪ್ ತಂಡದಿಂದ ಕೈ ಬಿಡುವ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಐಪಿಎಲ್‌ನಲ್ಲಿ ಇವರು ನೀಡುತ್ತಿರುವ ಪ್ರದರ್ಶನ ವಿರಾಟ್ ಆಯ್ಕೆ ಮಾಡುವಂತೆ ಪ್ರಚೋದಿಸುತ್ತಿವೆ.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆದಾರು ಇವರು ಸಹ ಓಪನರ್ ಆಗಿ ಕಣಕ್ಕೆ ಇಳಿಯಬಹುದು. ಸದ್ಯ ವಿರಾಟ್ ಕೊಹ್ಲಿ ಐಪಿಎಲ್ 2024ರಲ್ಲಿ ಆರ್‌ಸಿಬಿ ಪರ ಇನ್ನಿಂಗ್ಸ್ ಆರಂಭಿಸುತ್ತಿದ್ದು, ಇದೇ ಕಾರ್ಯವನ್ನು ಟಿ20 ವಿಶ್ವಕಪ್‌ನಲ್ಲಿ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಈ ವರ್ಷದ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಸದ್ಯಕ್ಕೆ ವಿರಾಟ್ ಹೆಸರಿಗಿದೆ. ಅವರು ಈ ಐಪಿಎಲ್‌ನಲ್ಲಿ ಶತಕ ಬಾರಿಸಿ ಸಂಭ್ರಮಿಸಿದ್ದಾರೆ.
ಒಂದು ವೇಳೆ ಹೀಗೆ ಆದಲ್ಲಿ ಶುಭಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಅವರ ಸ್ಥಾನಕ್ಕೆ ಕುತ್ತು ಬರಲಿದೆ. ಈ ಇಬ್ಬರೂ ಆಟಗಾರರು ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಯಶಸ್ವಿ ಜೈಸ್ವಾಲ್ ಆಡಿರುವ 7 ಪಂದ್ಯಗಳಲ್ಲಿ 17.28ರ ಸರಾಸರಿಯಲ್ಲಿ 121 ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಸಹ ಸೇರಿದೆ. ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುತ್ತಿರುವ ಶುಭಮನ್ ಗಿಲ್ ಆಡಿರುವ 6 ಪಂದ್ಯಗಳಲ್ಲಿ 255 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 151.78 ಆಗಿದ್ದು, ಸರಾಸರಿ 51 ಆಗಿದೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೋಡಿ ಇನ್ನಿಂಗ್ಸ್ ಆರಂಭಿಸುವ ಹೊಣೆಯನ್ನು ಹೊತ್ತುಕೊಂಡರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಸ್ಥಾನವನ್ನು ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನದಲ್ಲಿ ಆಡಬಹುದು. ರಿಂಕು ಸಿಂಗ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು.
ಜೈಸ್ವಾಲ್ ಉತ್ತಮ ಆರಂಭ ಪಡೆದರೂ ಅದನ್ನು ದೊಡ್ಡ ಸ್ಕೋರ್ ಆಗಿ ಕನ್ವರ್ಟ್ ಮಾಡಲು ಆಗುತ್ತಿಲ್ಲ. ಇದು ಮುಂದುವರಿದರೆ ಶುಭಮನ್ ಗಿಲ್ ಮೂರನೇ ಓಪನರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅವರು ಬ್ಯಾಕಪ್ ಓಪನರ್ ಆಗಿ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಆದರೆ, ಆಯ್ಕೆದಾರರು ಏನು ಯೋಚಿಸುತ್ತಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೇ 1ರಂದು ತಂಡವನ್ನು ಪ್ರಕಟಿಸುವ ನಿರೀಕ್ಷೆ ಇದ್ದು, ಆ ಬಳಿಕವಷ್ಟೇ ಸಂಪೂರ್ಣ ಚಿತ್ರಣ ತಿಳಿಯಲಿದೆ.