Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್ 2022: ಐರ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಜಿಂಬಾಬ್ವೆ

T20 world cup, Zim vs Ire: Zimbabwe win against Ireland by 31 runs in 4th match

ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನ ನಾಲ್ಕನೇ ಪಂದ್ಯದಲ್ಲಿ ಐರ್ಲೆಂಡ್ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದು ಐರ್ಲೆಂಡ್‌ಗೆ ಸೋಲಿನ ರುಚಿ ತೋರಿಸಿದೆ. ಅನುಭವಿ ಆಟಗಾರ ಸಿಕಂದರ್ ರಾಜಾ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದು ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.

ಈ ಪಂದ್ಯದಲ್ಲಿ ಐರ್ಲೆಂಡ್ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ನಡೆಸಿತು. ಇದಕ್ಕೆ ಪೂರಕವಾಗಿ ಆರಂಭದಲ್ಲಿ ಬೌಲಿಂಗ್‌ನಲ್ಲಿ ಅದ್ಭುತವಾಗಿ ಪ್ರದರ್ಶನ ನೀಡಿದ ಐರ್ಲೆಂಡ್ ತಂಡ ಉತ್ತಮ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಯಿತು. ಆದರೆ ಜಿಂಬಾಬ್ವೆ ತಂಡದ ಮಧ್ಯಮ ಕ್ರಮಾಂಕದ ಅನುಭವಿ ಆಟಗಾರ ಸಿಕಂದರ್ ರಾಜಾ ತಮ್ಮ ಅದ್ಭುತ ಫಾರ್ಮನ್ನು ಈ ಪಂದ್ಯದಲ್ಲಿಯೂ ಮುಂದುವರಿಸಿದ್ದಾರೆ. ಹೀಗಾಗಿ ಜಿಂಬಾಬ್ವೆ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು.

48 ಎಸೆತಗಳನ್ನು ಎದುರಿಸಿದ ಸಿಕಂದರ್ ರಾಜಾ 82 ರನ್‌ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಒಳಗೊಂಡಿತ್ತು. ಈ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಜಿಂಬಾಬ್ವೆ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 174 ರನ್ ಗಳಿಸಲು ಯಶಸ್ವಿಯಾಯಿತು.

ಈ ಮೊತ್ತವನ್ನು ಬೆನ್ನಟ್ಟಿದ ಐರ್ಲೆಂಡ್ ತಂಡ ಕೂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಮಧ್ಯಮ ಕ್ರಮಾಂಕದ ಆಟಗಾರರು ಕೆಲ ಕಾಲ ಹೋರಾಟ ನಡೆಸಿದರಾದರೂ ಜಿಂಬಾಬ್ವೆ ನೀಡಿದ ಗುರಿ ತಲುಪಲು ಐರ್ಲೆಂಡ್ ತಂಡಕ್ಕೆ ಸಾಧ್ಯವಾಗಲಿಲ್ಲ. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 143 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ 31 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಜಿಂಬಾಬ್ವೆ ಆಡುವ ಬಳಗ: ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಕ್ರೇಗ್ ಎರ್ವಿನ್ (ನಾಯಕ), ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಮಿಲ್ಟನ್ ಶುಂಬಾ, ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ಮುಜರಬಾನಿ ಆಶೀರ್ವಾದ
ಬೆಂಚ್: ಬ್ರಾಡ್ ಇವಾನ್ಸ್, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ಕ್ಲೈವ್ ಮದಂಡೆ

ಐರ್ಲೆಂಡ್ ಆಡುವ ಬಳಗ: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಪಾಲ್ ಸ್ಟಿರ್ಲಿಂಗ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ,
ಮಾರ್ಕ್ ಅದೈರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಬೆಂಚ್: ಸ್ಟೀಫನ್ ಡೊಹೆನಿ, ಕಾನರ್ ಓಲ್ಫರ್ಟ್, ಗ್ರಹಾಂ ಹ್ಯೂಮ್, ಫಿಯಾನ್ ಹ್ಯಾಂಡ್

Story first published: Monday, October 17, 2022, 19:37 [IST]
Other articles published on Oct 17, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+