
ಟಿ20 ವಿಶ್ವಕಪ್‌ನ ಸೂಪರ್ 12 ಹಂತದಲ್ಲಿ ಇಂದು ಜಿಂಬಾಬ್ವೆ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿರುವ ಬಾಂಗ್ಲಾದೇಶ 150 ರನ್‌ಗಳನ್ನು ಗಳಿಸಿದ್ದು ಎದುರಾಳಿ ಜಿಂಬಾಬ್ವೆ ತಂಡಕ್ಕೆ ಸಾಧಾರಣ ಮೊತ್ತದ ಗುರಿ ನೀಡಿದೆ. ಈ ಗುರಿಯನ್ನು ಜಿಂಬಾಬ್ವೆ ತಂಡ ಈಗ ಬೆನ್ನಟ್ಟಲು ಆರಂಭಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ತಂಡ ಉತ್ತಮ ಆರಂಭವನ್ನು ಪಡೆಯಲು ವಿಫಲವಾಯಿತು. ಆದರೆ ಆರಂಭಿಕ ಆಟಗಾರ ನಜ್ಮುಲ್ ಹುಸೈನ್ ಶಂತೋ ಅವರ ಅದ್ಭುತ ಪ್ರದರ್ಶನ ಬಾಂಗ್ಲಾದೇಶ ತಂಡಕ್ಕೆ ಆಸರೆಯಾಯಿತು. ಇತರ ಆಟಗಾರರಿಂದ ಹೇಳಿಕೊಳ್ಳುವಂತಾ ಪ್ರದರ್ಶನ ಬಾರದಿದ್ದರೂ ಕೆಲ ಸಾಧಾರಣ ಜೊತೆಯಾಟಗಳಲ್ಲಿ ಭಾಗಿಯಾಗಿ ತಂಡದ ಮೊತ್ತ 150ರ ಗಡಿ ತಲುಪಲು ನಜ್ಮುಲ್ ಹುಸೈನ್ ಕಾರಣವಾದರು.
55 ಎಸೆತಗಳನ್ನು ಎದುರಿಸಿದ ನಜ್ಮುಲ್ ಹುಸೈನ್ ಶಂತೋ 71 ರನ್ ಬಾರಿಸಿದ್ದಾರೆ. ಅವರಿಗೆ 23 ರನ್‌ಗಳಿಸಿದ ನಾಯಕ ಶಕೀಬ್ ಅಲ್ ಹಸನ್ ಹಾಗೂ ಆಫಿಫ್ ಹುಸೈನ್ 29 ರನ್‌ಗಳಿಸಿ ಸಾರ್ಥ ನೀಡಿದರು. ಇನ್ನು ಜಿಂಬಾಬ್ವೆ ಪರವಾಗಿ ರಿಚರ್ಡ್ ಎನ್‌ಗರವ ಮುಜರಬಾನಿ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರೆ ಸಿಕಂದರ್ ರಾಜಾ ಹಾಗೂ ಸೀನ್ ವಿಲಿಯಮ್ಸ ತಲಾ ಒಂದು ವಿಕೆಟ್ ಕಿತ್ತು ಮಿಂಚಿದ್ದಾರೆ.
ಜಿಂಬಾಬ್ವೆ ಆಡುವ ಬಳಗ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಮಿಲ್ಟನ್ ಶುಂಬಾ, ರಿಯಾನ್ ಬರ್ಲ್, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ಬ್ರಾಡ್ ಇವಾನ್ಸ್, ಬ್ಲೆಸಿಂಗ್ ಮುಜರಬಾನಿ
ಬಾಂಗ್ಲಾದೇಶ ಆಡುವ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ನೂರುಲ್ ಹಸನ್(ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್