ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬೌಲಿಂಗ್ ಮಾಡಿ ತಂಡ ಸೇರಲು ಸಜ್ಜಾದ ಹಾರ್ದಿಕ್ ಪಾಂಡ್ಯಗೆ ತಂಡದವರಿಂದಲೇ ಎದುರಾಯಿತು ದೊಡ್ಡ ಸಮಸ್ಯೆ!

T20 WorldCup 2021: Hardik Pandya need to clear fitness test to get his spot in the Team

ಸದ್ಯ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಅಭ್ಯಾಸ ಪಂದ್ಯಗಳಲ್ಲಿ ಮಿಂಚಿದ ಟೀಮ್ ಇಂಡಿಯಾ ಸೂಪರ್ 12 ಹಂತದ ತನ್ನ ಮೊದಲನೇ ಪಂದ್ಯದಲ್ಲಿಯೇ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಸೋಲುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಹೌದು, ಕಳೆದ ಅಕ್ಟೋಬರ್ 24ರ ಭಾನುವಾರದಂದು ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಟೀಮ್ ಇಂಡಿಯಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿತು. ಇತ್ತ ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಸೋಲುವುದರ ಮೂಲಕ ಟೂರ್ನಿಯಲ್ಲಿ ಕೆಟ್ಟ ಆರಂಭ ಪಡೆದುಕೊಳ್ಳುವುದರ ಮೂಲಕ ಆಡಿದ ಮೊದಲ ಪಂದ್ಯದ ಸೋಲಿನಿಂದಲೇ ಸೆಮಿಫೈನಲ್ ಪ್ರವೇಶಿಸುವ ಹಾದಿಯಲ್ಲಿ ಹಿನ್ನಡೆಯನ್ನು ಅನುಭವಿಸಿತು.

ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಸಜ್ಜಾದ ಶ್ರೇಯಸ್ ಐಯ್ಯರ್ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಸಜ್ಜಾದ ಶ್ರೇಯಸ್ ಐಯ್ಯರ್

ಈ ಪಂದ್ಯದ ಹೀನಾಯ ಸೋಲಿನ ನಂತರ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿನ ತನ್ನ ಮುಂದಿನ ಪಂದ್ಯದಲ್ಲಿ ಅಕ್ಟೋಬರ್ 31ರ ಭಾನುವಾರದಂದು ಬಲಿಷ್ಠ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಇನ್ನು ನ್ಯೂಜಿಲೆಂಡ್ ಕೂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋತಿದ್ದು, ಇದೀಗ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಸೆಮಿಫೈನಲ್ ಹಾದಿಯಿಂದ ಬಹುತೇಕ ಹೊರಗುಳಿಯಲಿದೆ. ಹೀಗಾಗಿ ಈ ಪಂದ್ಯ ಅತಿ ಮುಖ್ಯವಾಗಿದ್ದು ಟೀಮ್ ಇಂಡಿಯಾಗೆ ಆಲ್ ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಭಾಗವಹಿಸುವಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ದ್ರಾವಿಡ್ 5ರಿಂದ 10 ವರ್ಷದ ಯೋಜನೆಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗುತ್ತಾರೆ ಎಂದ ಮಾಜಿ ಕ್ರಿಕೆಟಿಗದ್ರಾವಿಡ್ 5ರಿಂದ 10 ವರ್ಷದ ಯೋಜನೆಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗುತ್ತಾರೆ ಎಂದ ಮಾಜಿ ಕ್ರಿಕೆಟಿಗ

ಹೌದು, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾಗವಹಿಸಿದ್ದ ಹಾರ್ದಿಕ್ ಪಾಂಡ್ಯ ದೊಡ್ಡ ಮಟ್ಟದ ಬ್ಯಾಟಿಂಗ್ ನಡೆಸಲಿಲ್ಲ. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ ಈ ಪಂದ್ಯದಲ್ಲಿ ನಾನು ಬೌಲಿಂಗ್ ಮಾಡುವುದಿಲ್ಲ ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದರು. ಅಷ್ಟೇ ಅಲ್ಲದೆ ಪಾಕ್ ವಿರುದ್ಧದ ಪಂದ್ಯದ ವೇಳೆ ಭುಜದ ಗಾಯಕ್ಕೊಳಗಾದ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಕೂಡ ಮಾಡಲಿಲ್ಲ. ಹೀಗೆ ಸಾಕಷ್ಟು ಸಮಸ್ಯೆಗಳನ್ನು ಹೊಂದಿರುವ ಮತ್ತು ಬೌಲಿಂಗ್ ಮಾಡಲಾಗದ ಹಾರ್ದಿಕ್ ಪಾಂಡ್ಯರನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಕೈ ಬಿಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಬೌಲಿಂಗ್ ಮಾಡಲು ಸಜ್ಜಾದರೆ ಮಾತ್ರ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿ ಇಲ್ಲವಾದರೆ ಬೇಡ ಎಂಬ ಕೂಗು ಕೇಳಿಬಂತು. ಇದೀಗ ಇದೇ ರೀತಿ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಕೂಡ ನಿರ್ಧಾರವನ್ನು ಕೈಗೊಳ್ಳಲು ಮುಂದಾಗಿದ್ದು ಹಾರ್ದಿಕ್ ಪಾಂಡ್ಯ ಆಯ್ಕೆಗೆ ಈ ಕೆಳಕಂಡಂತಹ ಷರತ್ತನ್ನು ವಿಧಿಸಿದೆ.

{photo-feature}

Story first published: Friday, October 29, 2021, 12:26 [IST]
Other articles published on Oct 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X