ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಸೂಪರ್ 12 ಸುತ್ತಿಗೆ ಲಗ್ಗೆಯಿಟ್ಟ ಮೊದಲನೇ ತಂಡ ಶ್ರೀಲಂಕಾ; ಅತ್ತ ಸೋತ ಪಾಕಿಸ್ತಾನ!

T20 worldcup 2021: Sri Lanka Won against Ireland by 70 runs and Pakistan lose to South Africa

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಮತ್ತು ಅಭ್ಯಾಸ ಪಂದ್ಯಗಳು ನಡೆಯುತ್ತಿದ್ದು, ಇಂದು ( ಅಕ್ಟೋಬರ್ 20 ) ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳ ನಡುವೆ ನಡೆದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಶ್ರೀಲಂಕಾ 70 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಸೂಪರ್ 12 ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಮೂಲಕ ಶ್ರೀಲಂಕಾ ಸೂಪರ್ 12 ಹಂತಕ್ಕೆ ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅರ್ಹತೆಯನ್ನು ಪಡೆದುಕೊಂಡ ಮೊದಲ ತಂಡ ಎನಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಈ ಮೂಲಕ ಮೊದಲು ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ಬಹುಬೇಗನೆ ತನ್ನ 3 ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೇವಲ 8 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ಶ್ರೀಲಂಕಾ ಅಲ್ಪ ಮೊತ್ತಕ್ಕೆ ಇನಿಂಗ್ಸ್ ಮುಗಿಸುವ ರೀತಿ ಇತ್ತು. ಆದರೆ ಶ್ರೀಲಂಕಾ ತಂಡದ ಪರ ಪತುಮ್ ನಿಸ್ಸಾಂಕ 61, ವನಿಂದು ಹಸರಂಗ 71 ಹಾಗೂ ತಂಡದ ನಾಯಕ ದಾಸುನ್ ಶನಕ ಅಜೇಯ 21 ರನ್ ಗಳಿಸಿದ ಕಾರಣ ಶ್ರೀಲಂಕಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಇನ್ನು ಶ್ರೀಲಂಕಾ ನೀಡಿದ 172 ರನ್‌ಗಳ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 18.3 ಓವರ್‌ಗಳಲ್ಲಿ 101 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ ಔಟ್ ಆಯಿತು. ಈ ಮೂಲಕ ಶ್ರೀಲಂಕಾ 70 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿತು. ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಒಟ್ಟು 2 ಪಂದ್ಯಗಳನ್ನಾಡಿರುವ ಶ್ರೀಲಂಕಾ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶಿಸಿದೆ. ಶ್ರೀಲಂಕಾ ಎ ಗುಂಪಿನಲ್ಲಿದ್ದು ತನ್ನ ಗುಂಪಿನ ಇತರೆ ತಂಡಗಳು ಋಣಾತ್ಮಕ ನೆಟ್ ರನ್ ರೇಟ್ ಹೊಂದಿರುವ ಕಾರಣ 2 ಪಂದ್ಯಗಳು ಮುಗಿದ ಕೂಡಲೇ 4 ಅಂಕಗಳನ್ನು ಪಡೆದು ಕೊಳ್ಳುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಕಾರಣ ಸೂಪರ್ 12 ಹಂತಕ್ಕೆ ಪ್ರವೇಶಿಸಿದೆ. ಇನ್ನು ಬಿ ಗುಂಪಿನ ಸ್ಕಾಟ್ಲೆಂಡ್ ತಂಡ ಕೂಡ 2 ಪಂದ್ಯಗಳನ್ನಾಡಿ 4 ಅಂಕಗಳನ್ನು ಗಳಿಸಿದೆ. ಆದರೆ ತನ್ನ ಗುಂಪಿನ ಉಳಿದ ತಂಡಗಳ ನೆಟ್ ರನ್ ರೇಟ್ ಧನಾತ್ಮಕವಾಗಿರುವ ಕಾರಣ ಸ್ಕಾಟ್ಲೆಂಡ್ ಬೇಗನೆ ಸೂಪರ್ 12 ಹಂತವನ್ನು ಪ್ರವೇಶಿಸುವಲ್ಲಿ ಸಫಲವಾಗಿಲ್ಲ.

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯಗಳಲ್ಲಿ ಭಾರತಕ್ಕೆ ಸತತ ಜಯ; ಪಾಕಿಸ್ತಾನಕ್ಕೆ ಶುರು ಈ ತ್ರಿಮೂರ್ತಿಗಳ ಭಯ!ಟಿ20 ವಿಶ್ವಕಪ್ ಅಭ್ಯಾಸ ಪಂದ್ಯಗಳಲ್ಲಿ ಭಾರತಕ್ಕೆ ಸತತ ಜಯ; ಪಾಕಿಸ್ತಾನಕ್ಕೆ ಶುರು ಈ ತ್ರಿಮೂರ್ತಿಗಳ ಭಯ!

ದ. ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನ

ದ. ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನ

ಮತ್ತೊಂದೆಡೆ ಇಂದು ಪಾಕಿಸ್ತಾನ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ಅಭ್ಯಾಸ ಪಂದ್ಯವೊಂದು ನಡೆದಿದ್ದು, ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 6 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡ ಫೀಲ್ಡಿಂಗ್ ಮಾಡುವ ಆಯ್ಕೆಯನ್ನು ಆಯ್ದುಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಫಕರ್ ಜಮಾನ್ 52, ಶೋಯೆಬ್ ಮಲಿಕ್ 28 ಮತ್ತು ಅಸಿಫ್ ಅಲಿ 32 ರನ್ ಗಳಿಸಿದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಇನ್ನು ಪಾಕಿಸ್ತಾನ ನೀಡಿದ 187 ರನ್‌ಗಳ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವುದರ ಮೂಲಕ ರೋಚಕ ಜಯವನ್ನು ಸಾಧಿಸಿತು. ದಕ್ಷಿಣ ಆಫ್ರಿಕಾ ಪರ ವಾನ್ ಡರ್ ಡುಸೆನ್ 51 ಎಸೆತಗಳಲ್ಲಿ ಅಜೇಯ 101 ರನ್ ಬಾರಿಸಿ ಶತಕ ಸಿಡಿಸುವುದರ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು ಹಾಗೂ ತಂಡದ ನಾಯಕ ಟೆಂಬಾ ಬವುಮಾ 46 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಅಂತಿಮವಾಗಿ 2 ಎಸೆತಗಳಿಗೆ 7 ರನ್ ಅಗತ್ಯವಿದ್ದಾಗ ವಾನ್ ಡರ್ ಡುಸೆನ್ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸುವ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಕೊನೆಯ ಎಸೆತದಲ್ಲಿ ರೋಚಕ ಜಯವನ್ನು ತಂದುಕೊಟ್ಟರು.

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಯಾವಾಗ?l

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಯಾವಾಗ?l

ಭಾರತ ಮತ್ತು ಪಾಕಿಸ್ತಾನ ತಂಡಗಳು ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಪರಸ್ಪರ ಸೆಣಸಾಟ ನಡೆಸಲಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 12 ಹಂತದ ಪಂದ್ಯ ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

Rohit Sharma ನಾಯಕನಾಗಿ Kohliಯನ್ನು ಬಳಸಿಕೊಂಡಿದ್ದು ಹೀಗೆ | Oneindia Kannada
ಭಾರತ ಮತ್ತು ಪಾಕಿಸ್ತಾನ ಟಿ ಟ್ವೆಂಟಿ ವಿಶ್ವಕಪ್ ಮುಖಾಮುಖಿ ವಿವರ

ಭಾರತ ಮತ್ತು ಪಾಕಿಸ್ತಾನ ಟಿ ಟ್ವೆಂಟಿ ವಿಶ್ವಕಪ್ ಮುಖಾಮುಖಿ ವಿವರ

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇದುವರೆಗೂ ಒಟ್ಟು 7 ಏಕದಿನ ವಿಶ್ವಕಪ್ ಪಂದ್ಯಗಳು ನಡೆದಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಭಾರತ ತಂಡ ಜಯ ಸಾಧಿಸಿದೆ.


ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇದುವರೆಗೂ ಒಟ್ಟು 5 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳು ನಡೆದಿದ್ದು ಭಾರತ ತಂಡ 4 ಪಂದ್ಯಗಳಲ್ಲಿ ಜಯ ಗಳಿಸಿದೆ ಹಾಗೂ ಒಂದು ಪಂದ್ಯ ಟೈ ಆಗಿದೆ. ಆದರೆ ಪಾಕಿಸ್ತಾನ ಮಾತ್ರ ಯಾವುದೇ ಪಂದ್ಯದಲ್ಲಿಯೂ ಕೂಡ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿಲ್ಲ.

Story first published: Thursday, October 21, 2021, 9:42 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X