ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ ಟ್ವೆಂಟಿ ವಿಶ್ವಕಪ್ 2021ರಲ್ಲಿ ಆಶ್ಚರ್ಯಕರವಾಗಿ ಸ್ಥಾನ ಪಡೆದುಕೊಳ್ಳಬಹುದಾದ 5 ಭಾರತೀಯ ಕ್ರಿಕೆಟಿಗರು

t20 worldcup 2021: These 5 Indian players may get chance in Squad

ಕ್ರಿಕೆಟ್ ಅಭಿಮಾನಿಗಳ ಚಿತ್ತ ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯತ್ತ ನೆಟ್ಟಿದೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯು ಸಾಕಷ್ಟು ಕುತೂಹಲಗಳನ್ನು ಹುಟ್ಟು ಹಾಕಿದ್ದು ಯಾವ ತಂಡ ಸರಣಿಯನ್ನು ಕೈವಶ ಪಡಿಸಿಕೊಳ್ಳಲಿದೆ ಎಂಬುದರ ಕುರಿತು ಕ್ರಿಕೆಟ್ ಅಭಿಮಾನಿಗಳು ಸಾಕಷ್ಟು ಚರ್ಚೆಗಳನ್ನು ನಡೆಸುತ್ತಿದ್ದಾರೆ. ಹೀಗೆ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ಈ ದಾಖಲೆಗಳ ಮೇಲೆ ಕೊಹ್ಲಿ, ರೋಹಿತ್ ಮತ್ತು ಜೋ ರೂಟ್ ಕಣ್ಣುಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ಈ ದಾಖಲೆಗಳ ಮೇಲೆ ಕೊಹ್ಲಿ, ರೋಹಿತ್ ಮತ್ತು ಜೋ ರೂಟ್ ಕಣ್ಣು

ಹೌದು, ಅಕ್ಟೋಬರ್ 17 ರಿಂದ ನವೆಂಬರ್‌ 14 ರವರೆಗೆ ನಡೆಯಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಇತ್ತೀಚೆಗಷ್ಟೇ ಐಸಿಸಿ ಅಧಿಕೃತವಾಗಿ ಬಿಡುಗಡೆಗೊಳಿಸಿತ್ತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾದ ನಂತರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ಟೀಮ್ ಇಂಡಿಯಾ ತಂಡದಲ್ಲಿ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಪಂಡಿತರು ಮತ್ತು ಕ್ರಿಕೆಟ್ ಅಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಕೆಲವೊಂದಷ್ಟು ತಂಡಗಳು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಘೋಷಣೆ ಮಾಡಿಕೊಂಡಿವೆ, ಆದರೆ ಟೀಮ್ ಇಂಡಿಯಾ ಮಾತ್ರ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನಾಡಲು ತಂಡದಲ್ಲಿ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ಇದುವರೆಗೂ ಬಿಟ್ಟುಕೊಟ್ಟಿಲ್ಲ. ಮುಂದಿನ ತಿಂಗಳು ಯುಎಇಯಲ್ಲಿ ಐಪಿಎಲ್ ಟೂರ್ನಿ ಆರಂಭವಾಗಲಿದ್ದು ಯಾವುದೇ ಸಮಯದಲ್ಲಿ ಬೇಕಾದರೂ ಬಿಸಿಸಿಐ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಬಹುದು.

ಟಿಟ್ವೆಂಟಿ ಪಂದ್ಯಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲಿವೆ ಈ 5 ಹೊಸ ನಿಯಮಗಳು!; ವೀಕ್ಷಕರಿಗೆ ಹಬ್ಬದೂಟಟಿಟ್ವೆಂಟಿ ಪಂದ್ಯಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲಿವೆ ಈ 5 ಹೊಸ ನಿಯಮಗಳು!; ವೀಕ್ಷಕರಿಗೆ ಹಬ್ಬದೂಟ

ಇನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ಭಾಗವಹಿಸುವ ಅವಕಾಶವನ್ನು ಆಶ್ಚರ್ಯಕರವಾಗಿ ಪಡೆದುಕೊಳ್ಳಬಲ್ಲ 5 ಭಾರತೀಯ ಕ್ರಿಕೆಟಿಗರ ಪಟ್ಟಿ ಈ ಕೆಳಕಂಡಂತಿದೆ ನೋಡಿ

1. ವರುಣ್ ಚಕ್ರವರ್ತಿ

1. ವರುಣ್ ಚಕ್ರವರ್ತಿ

ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ವರ್ಷಗಳ ನಂತರ ಯಶಸ್ಸಿನ ಹಾದಿಗೆ ಮರಳಿದ್ದ ವರುಣ್ ಚಕ್ರವರ್ತಿ 13 ಪಂದ್ಯಗಳನ್ನಾಡಿ ಪ್ರಮುಖ 17 ವಿಕೆಟ್‍ಗಳನ್ನು ಪಡೆದಿದ್ದರು. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವರುಣ್ ಚಕ್ರವರ್ತಿ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳುವ ಅವಕಾಶವನ್ನು ಪಡೆದರೂ ಸಹ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಬಿದ್ದರು. ನಂತರ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗುವ ಅವಕಾಶವನ್ನು ಫಿಟ್‌ನೆಸ್ ಸಮಸ್ಯೆಯಿಂದ ಕಳೆದುಕೊಂಡ ವರುಣ್ ಚಕ್ರವರ್ತಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳುವ ಆಟಗಾರರ ಪಟ್ಟಿಯಲ್ಲಿದ್ದಾರೆ. ಟ್ವೆಂಟಿ ಪಂದ್ಯಗಳಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿ ಮಿಂಚಿರುವ ವರುಣ್ ಚಕ್ರವರ್ತಿ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡದಲ್ಲಿ ಆಶ್ಚರ್ಯಕರವಾಗಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ.

2. ಇಶಾನ್ ಕಿಶನ್

2. ಇಶಾನ್ ಕಿಶನ್

2020ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ 500ಕ್ಕೂ ಹೆಚ್ಚು ರನ್ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಟಿ ಟ್ವೆಂಟಿ ಮತ್ತು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‍ಗೂ ಸಹ ಪಾದಾರ್ಪಣೆಯನ್ನು ಮಾಡಿದರು. ಇಶಾನ್ ಕಿಶನ್ ತಾನು ಆಡಿದ ಚೊಚ್ಚಲ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ 32 ಎಸೆತಗಳಲ್ಲಿ 56 ರನ್ ಬಾರಿಸಿ ಮಿಂಚಿದರು ಮತ್ತು ತಾನು ಆಡಿದ ಚೊಚ್ಚಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ 42 ಎಸೆತಗಳಿಗೆ 59 ರನ್ ಬಾರಿಸಿ ಗಮನ ಸೆಳೆದರು. ಹೀಗೆ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ತಾವು ಆಡಿದ ಅಂತಾರಾಷ್ಟ್ರೀಯ ಏಕದಿನ ಮತ್ತು ಟಿ ಟ್ವೆಂಟಿ ಚೊಚ್ಚಲ ಪಂದ್ಯದಲ್ಲಿಯೇ ಅರ್ಧಶತಕಗಳನ್ನು ಬಾರಿಸುವುದರ ಮೂಲಕ ಮಿಂಚಿದ್ದಾರೆ. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಶಾನ್ ಕಿಶನ್ ಸ್ಥಾನ ಪಡೆದುಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3. ಕೃನಾಲ್ ಪಾಂಡ್ಯ

3. ಕೃನಾಲ್ ಪಾಂಡ್ಯ

ಈಗಾಗಲೇ ಟೀಮ್ ಇಂಡಿಯಾ ಪರ 19 ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಭಾಗವಹಿಸಿರುವ ಕೃನಾಲ್ ಪಾಂಡ್ಯಾ ಇತ್ತೀಚಿನ ಕೆಲ ಪಂದ್ಯಗಳಲ್ಲಿ ಮಂಕಾಗಿದ್ದರೂ ಸಹ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಮಯದಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಆಟವನ್ನಾಡಿದ್ದು ಮುಂದುವರಿಯಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕೃನಾಲ್ ಪಾಂಡ್ಯಾಗೆ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಲಭಿಸಬಹುದು.

4. ಮೊಹಮ್ಮದ್ ಸಿರಾಜ್

4. ಮೊಹಮ್ಮದ್ ಸಿರಾಜ್

ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಕೆಟ್ಟ ಪ್ರದರ್ಶನದ ಮೂಲಕ ಸಾಲುಸಾಲು ಟೀಕೆಗಳಿಗೆ ಒಳಗಾಗಿದ್ದ ಸಿರಾಜ್ ಕಳೆದ ಬಾರಿಯ ಐಪಿಎಲ್ ಟೂರ್ನಿ ಮತ್ತು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಯಶಸ್ಸಿನ ಹಾದಿಯಲ್ಲಿ ಮುಂದುವರೆದಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿಯೂ ಸಹ ಉತ್ತಮ ಪ್ರದರ್ಶನ ನೀಡಿ ಮಿಂಚುತ್ತಿರುವ ಮೊಹಮ್ಮದ್ ಸಿರಾಜ್ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶವನ್ನು ಪಡೆದುಕೊಳ್ಳಲಿರುವ ಯುವ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಅಹಂಕಾರ ಬಿಟ್ಟು ಕೊಹ್ಲಿ ಬ್ಯಾಟಿಂಗ್ ಮಾಡ್ಲಿ ಎಂದ ಮಾಜಿ ಕ್ರಿಕೆಟಿಗ | Oneindia Kannada
5. ಚೇತನ್ ಸಕಾರಿಯಾ

5. ಚೇತನ್ ಸಕಾರಿಯಾ

ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ಆಡುವ ಅವಕಾಶವನ್ನು ಯುವ ಆಟಗಾರ ಚೇತನ್ ಸಕಾರಿಯಾ ಪಡೆದುಕೊಳ್ಳಬಹುದಾದ ಸಾಧ್ಯತೆಗಳೂ ಇವೆ. ಐಪಿಎಲ್ ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಚೇತನ್ ಸಕಾರಿಯಾ ತಾನೊಬ್ಬ ಉತ್ತಮ ಬೌಲರ್ ಎಂದು ಗುರುತಿಸಿಕೊಂಡಿದ್ದು ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಶ್ಚರ್ಯಕರವಾಗಿ ಆಯ್ಕೆಯಾಗುವ ಸಂಭವವಿದೆ.

Story first published: Wednesday, August 25, 2021, 16:49 [IST]
Other articles published on Aug 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X