Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಯಾರೂ ನಂಬದಿದ್ದಾಗ ನನ್ನನ್ನು ನಂಬಿದ್ದು ನೀನು: ಕೊಹ್ಲಿ ಕುರಿತು ದಿನೇಶ್ ಕಾರ್ತಿಕ್ ಭಾವನಾತ್ಮಕ ಟ್ವೀಟ್

T20 Worpd Cup: Wicket Keeper Dinesh Karthik Tweet About Virat Kohlis Help Wins Internet

ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟರ್ ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ, ನವೆಂಬರ್ 5 ರಂದು 34 ವರ್ಷ ಪೂರೈಸಿದ್ದಾರೆ. ಜಗತ್ತಿನ ಮೂಲೆ ಮೂಲೆಗಳಿಂದ ವಿರಾಟ್ ಕೊಹ್ಲಿಗೆ ಶುಭಾಶಯಗಳು ಹರಿದುಬಂದವು. ಭಾರತೀಯ ಅಭಿಮಾನಿಗಳು ಮಾತ್ರವಲ್ಲದೆ, ಹಲವಾರು ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಭಾರತದ ವಿಕೆಟ್ ಕೀಪರ್ ಬ್ಯಾಟರ್ ಮತ್ತು ಆರ್ ಸಿಬಿ ಆಟಗಾರ ದಿನೇಶ್ ಕಾರ್ತಿಕ್ ಕೂಡ ವಿರಾಟ್ ಕೊಹ್ಲಿಗೆ ಶುಭಾಶಯ ತಿಳಿಸಿದ್ದಲ್ಲದೆ, ಕೊಹ್ಲಿ ಮಾಡಿದ ಸಹಾಯವನ್ನು ನೆನೆದಿದ್ದಾರೆ. ಕೊಹ್ಲಿ ಹುಟ್ಟುಹಬ್ಬದ ಸಂದರ್ಭದಲ್ಲಿ, ಕಾರ್ತಿಕ್ ವಿರಾಟ್ ಜೊತೆಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, "ಯಾರೂ ನಂಬದಿರುವಾಗ ಅವನು ನಂಬುವವನು! ನಿಮಗೆ ಜನ್ಮದಿನದ ಶುಭಾಶಯಗಳು."ಎಂದು ಬರೆದಿದ್ದಾರೆ.

ದಿನೇಶ್ ಕಾರ್ತಿಕ್ 2021ರ ಐಪಿಎಲ್‌ನಲ್ಲಿ ಕೆಕೆಆರ್ ಪರವಾಗಿ ಆಡಿದ್ದರು, ಆ ಋತುವಿನಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಕೈಬಿಡಲಾಯಿತು. ಆದರೆ, 2022ರಲ್ಲಿ ಆರ್ ಸಿಬಿ ತಂಡಕ್ಕೆ ದಿನೇಶ್‌ ಕಾರ್ತಿಕ್‌ರನ್ನು ಆಯ್ಕೆ ಮಾಡಿದಾಗ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

T20 Worpd Cup: Wicket Keeper Dinesh Karthik Tweet About Virat Kohlis Help Wins Internet

ದಿನೇಶ್ ಕಾರ್ತಿಕ್ ಅದೃಷ್ಟ ಬದಲಿಸಿದ 2022ರ ಐಪಿಎಲ್

ಆದರೆ ಆರ್ ಸಿಬಿಯ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಮೇಲೆ ನಂಬಿಕೆ ಇಟ್ಟಿದ್ದರು. ಎಲ್ಲರ ಊಹೆಯನ್ನು ಮೀರಿ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಮಾತ್ರವಲ್ಲದೆ, ಆರ್ ಸಿಬಿ ಪರವಾಗಿ ಬೆಸ್ಟ್ ಫಿನಿಷರ್ ಎನಿಸಿಕೊಂಡರು. ಸೋಲುವ ಪಂದ್ಯಗಳನ್ನು ಕೊನೆ ಓವರ್ ಗಳಲ್ಲಿ ಅಬ್ಬರಿಸುವ ಮೂಲಕ ಗೆಲ್ಲಿಸಿಕೊಟ್ಟಿದ್ದರು. ಐಪಿಎಲ್‌ನಲ್ಲಿ ಅವರ ಪ್ರದರ್ಶನವನ್ನು ನೋಡಿದ ಬಳಿಕ ಟೀಂ ಇಂಡಿಯಾದ ಆಯ್ಕೆದಾರರು ಅವರನ್ನು ರಾಷ್ಟ್ರೀಯ ತಂಡಕ್ಕೆ ಮರಳಿ ಕರೆದರು.

ಭಾರತ ತಂಡದಲ್ಲಿ ಸ್ಥಾನ ಪಡೆದ ದಿನೇಶ್ ಕಾರ್ತಿಕ್ ಅಲ್ಲಿಯೂ ಉತ್ತಮ ಪ್ರದರ್ಶನ ನೀಡಿದರು. ನಂತರ ಅವರ ಕನಸಿನಂತೆ ಟಿ20 ವಿಶ್ವಕಪ್ 2022ರ ತಂಡದಲ್ಲಿ ಸ್ಥಾನ ಪಡೆದರು. ಟಿ20 ವಿಶ್ವಕಪ್‌ನಲ್ಲಿ ಆಡುತ್ತಿರುವ ದಿನೇಶ್ ಕಾರ್ತಿಕ್, ಈ ಬಾರಿ ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದಾರೆ.

ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಸಹಾಯವನ್ನು ನೆನಪಿಸಿಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಟ್ವೀಟ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

T20 Worpd Cup: Wicket Keeper Dinesh Karthik Tweet About Virat Kohlis Help Wins Internet

ಅಗ್ರಸ್ಕೋರರ್ ಆಗಿರುವ ಕೊಹ್ಲಿ

2022 ರ ಟಿ 20 ವಿಶ್ವಕಪ್‌ನಲ್ಲಿ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ, ಒಟ್ಟು 220 ರನ್‌ಗಳನ್ನು ಒಟ್ಟುಗೂಡಿಸಿ 4 ಪಂದ್ಯಗಳಲ್ಲಿ 3 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ, ಕೊಹ್ಲಿ 4 ಪಂದ್ಯಗಳಲ್ಲಿ ಒಮ್ಮೆ ಮಾತ್ರ ಔಟಾಗಿದ್ದಾರೆ.

ವಿರಾಟ್ ಕೊಹ್ಲಿ 2022ರ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗಿನ ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗಾರನಾಗಿ ಕೊಹ್ಲಿ ಹೊರಹೊಮ್ಮಿದ್ದಾರೆ. ಮಹೇಲಾ ಜಯವರ್ಧನೆ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಭಾನುವಾರದಂದು ಭಾರತವು ತಮ್ಮ ಅಂತಿಮ ಗುಂಪು 2 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ದ ಆಡಲಿದ್ದು, ಕೊಹ್ಲಿಯಿಂದ ಮತ್ತೊಂದು ಅತ್ಯುತ್ತಮ ಇನ್ನಿಂಗ್ಸ್ ಬರುವ ನಿರೀಕ್ಷೆ ಇದೆ.

Story first published: Saturday, November 5, 2022, 17:09 [IST]
Other articles published on Nov 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+