Ind vs Eng: ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಭುವನೇಶ್ವರ್ ಕುಮಾರ್

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಮುಕ್ತಾಯವಾಗಿದ್ದು ಅಂತಿಮ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿದೆ. ಎರಡು ಪಂದ್ಯದಲ್ಲಿಯೂ ಭಾರತ ತಂಡ ಅಮೋಘ ಪ್ರದರ್ಶನ ನೀಡಿದ್ದು ಭರ್ಜರಿ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿಯಿರುವಂತೆಯೇ ಗೆದ್ದುಕೊಂಡಿದೆ. ಇದೀಗ ವೈಟ್‌ವಾಶ್‌ನತ್ತ ಭಾರತ ಚಿತ್ತ ನೆಟ್ಟಿದೆ.
ಈ ಎರಡು ಪಂದ್ಯದಲ್ಲಿಯೂ ಭಾರತದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದು ವೇಗಿ ಭುವನೇಶ್ವರ್ ಕುಮಾರ್. ಪವರ್‌ಪ್ಲೇನಲ್ಲಿ ಅಮೋಘ ದಾಳಿಯ ಮೂಲಕ ಎದುರಾಳಿಯನ್ನು ಕಂಗೆಡಿಸುವ ತಮ್ಮ ಚಾಕಚಕ್ಯತೆಯನ್ನು ಈ ಎರಡು ಪಂದ್ಯದಲ್ಲಿಯೂ ಭುವಿ ಪ್ರದರ್ಶಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆರಂಭಿಕ ಹಂತದಲ್ಲಿಯೇ ಎದುರಾಳಿಗೆ ಆಘಾತ ನೀಡುತ್ತಿದ್ದಾರೆ. ಇದೀಗ ಪವರ್‌ಪ್ಲೇನಲ್ಲಿ ಭುವನೇಶ್ವರ್ ಕುಮಾರ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ಪವರ್‌ಪ್ಲೇನಲ್ಲಿ 500 ಡಾಟ್ ಬಾಲ್ ಹಾಕಿ ಭುವಿ ದಾಖಲೆ
ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅವರ ಅದ್ಭುತ ಪ್ರದರ್ಶನದಿಂದಾಗಿ ಭಾರತ 49 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಗಿದೆ. ಈ ಪಂದ್ಯದ ಮೂಲಕ ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಪವರ್‌ಪ್ಲೇ ಅವಧಿಯಲ್ಲಿ 500 ಡಾಟ್ ಬಾಲ್ ಎಸೆದ ದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿದ್ದಾರೆ ಭಾರತದ ಈ ವೇಗಿ.

ಭಾರೀ ಅಂತರದಲ್ಲಿ ಮುಂದಿದ್ದಾರೆ ಭುವಿ
ಇನ್ನು ಈ ದಾಖಲೆಯ ಪಟ್ಟಿಯನ್ನು ಗಮನಿಸಿದರೆ ಭಾರತದ ಭುವನೇಶ್ವರ್ ಕುಮಾರ್ ಭಾರೀ ಅಂತರದಿಂದ ಮುಂದಿದ್ದಾರೆ. ಪವರ್‌ಪ್ಲೇನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ ಇದ್ದು 383 ಡಾಟ್ ಬಾಲ್ ಎಸೆದಿದ್ದಾರೆ. ನಂತರ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ 368 ಡಾಟ್ ಬಾಲ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲೂ ಭುವಿಗೆ ಅಗ್ರಸ್ಥಾನ
ಇನ್ನು ಬ್ಯಾಟರ್‌ಗಳಿಗೆ ಅನುಕೂಲಕರವಾಗುವಂತಾ ಪವರ್‌ಪ್ಲೇ ಅವಧಿಯಲ್ಲಿ ವಿಕೆಟ್ ಕಬಳಿಕೆಯಲ್ಲೂ ಭುವನೇಶ್ವರ್ ಕುಮಾರ್ ಭಾರೀ ಯಶಸ್ಸು ಸಾಧಿಸಿದ್ದಾರೆ. ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿಯೂ ಭುವಿ ಅಗ್ರಸ್ಥಾನದಲ್ಲಿದ್ದಾರೆ. ಈ ಅವಧಿಯಲ್ಲಿ ಭುವನೇಶ್ವರ್ ಕುಮಾರ್ 37 ವಿಕೆಟ್ ಸಂಪಾದಿಸಿದ್ದಾರೆ. (ಇದು ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದವರೆಗಿನ ಸಂಖ್ಯೆ) ಎರಡನೇ ಸ್ಥಾನದಲ್ಲಿ ತಲಾ 33 ವಿಕೆಟ್ ಪಡೆದಿರುವ ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ ಹಾಗೂ ನ್ಯೂಜಿಲೆಂಡ್‌ನ ಟಿಮ್ ಸೌಥಿ ಇದ್ದಾರೆ.

ವೈಟ್‌ವಾಶ್ ಮೇಲೆ ಭಾರತದ ಕಣ್ಣು
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯದಲ್ಲಿಯೂ ಭಾರತ ಅದ್ಭುತ ಪ್ರದರ್ಶನ ನೀಡುವ ಮೂಲಕ ಸರಣಿಯನ್ನು ಈಗಾಗಲೇ ವಶಕ್ಕೆ ಪಡೆದಾಗಿದೆ. ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಈ ಪಂದ್ಯವನ್ನು ಕೂಡ ಗೆಲ್ಲುವ ಮೂಲಕ ಭಾರತ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಸರಣಿಯನ್ನು ವಶಕ್ಕೆ ಪಡೆಯುವ ಉತ್ಸಾಹದಲ್ಲಿದೆ. ಭಾರತದ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಅದ್ಭುತ ಫಾರ್ಮ್‌ನಲ್ಲಿರುವ ಕಾರಣ ತಂಡದ ಆತ್ಮವಿಶ್ವಾಸ ಸಹಜವಾಗಿ ಹೆಚ್ಚಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications