Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ಶ್ರೇಯಾಂಕ : ಅಗ್ರಸ್ಥಾನಕ್ಕೇರಿದ ನಾಯಕ ವಿರಾಟ್ ಕೊಹ್ಲಿ

ನವದೆಹಲಿ, ಜೂನ್ 28 : ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟಿ-20 ಬ್ಯಾಟ್ಸ್ ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಒಟ್ಟು 799 ಅಂಕಗಳೊಂದಿಗೆ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ, ಇನ್ನು ಏಕದಿನ ಬ್ಯಾಟ್ಸ್ ಮನ್‌ಗಳ ಪಟ್ಟಿಯಲ್ಲೂ ಮೊದಲ ಸ್ಥಾನ ಹೊಂದಿದ್ದಾರೆ.

T20I rankings: Bumrah rises to second; Kohli leads batting chart

ಬೌಲರ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಇಮಾದ್ ವಾಸೀಂ ಅವರು ಅಗ್ರಪಟ್ಟ ತಮ್ಮದಾಗಿಸಿಕೊಂಡಿದ್ದಾರೆ. ಇದು ಇಮಾದ್ ಅವರ ವೃತ್ತಿ ಬದುಕಿನ ಶ್ರೇಷ್ಠ ಸಾಧನೆಯಾಗಿದೆ. ಭಾರತದ ವೇಗಿ ಜಸ್ ಪ್ರೀತ್ ಬೂಮ್ರಾ, ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಈ ಮೊದಲು ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ಸ್ಪಿನ್ನರ್‌ ಇಮ್ರಾನ್‌ ತಾಹಿರ್ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ಸ್ಪಿನ್ನರ್‌ ಆರ್‌. ಅಶ್ವಿನ್ ಅವರು ಹತ್ತನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಆಲ್‌ರೌಂಡರ್ ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್‌ ಹಸನ್ ಮೊದಲ ಸ್ಥಾನದಲ್ಲಿದ್ದು, ಭಾರತದ ಯುವರಾಜ್ ಸಿಂಗ್‌ ಐದನೇ ಸ್ಥಾನದಲ್ಲಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+