Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Tamim Iqbal: ಬಾಂಗ್ಲಾದೇಶ ನಾಯಕತ್ವದಿಂದ ಕೆಳಗಿಳಿದ ತಮೀಮ್ ಇಕ್ಬಾಲ್; ಏಷ್ಯಾ ಕಪ್‌ನಿಂದಲೂ ಔಟ್!

ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ತಮೀಮ್ ಇಕ್ಬಾಲ್ ಏಕದಿನ ಸ್ವರೂಪದಲ್ಲಿ ರಾಷ್ಟ್ರೀಯ ತಂಡದ ನಾಯಕತ್ವ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

34 ವರ್ಷದ ತಮೀಮ್ ಇಕ್ಬಾಲ್ ಇತ್ತೀಚೆಗೆ ಬಾಂಗ್ಲಾದೇಶ ತಂಡದ ಮ್ಯಾನೇಜ್‌ಮೆಂಟ್‌ನೊಂದಿಗಿನ ವಿವಾದದ ನಂತರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದರು. ಆದರೆ, ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದ ನಂತರ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದರು ಎಂಬುದು ಗಮನಾರ್ಹ ಸಂಗತಿ.

tamim-iqbal-steps-down-as-bangladesh-odi-captain

ಇದಾದ ಬಳಿಕ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಅಧ್ಯಕ್ಷ ನಜ್ಮುಲ್ ಹಸನ್ ಅವರು ತಮೀಮ್ ಇಕ್ಬಾಲ್‌ರೊಂದಿಗಿನ ವಿವಾದ ಸರಿಪಡಿಸಲು ಮ್ಯಾನೇಜ್‌ಮೆಂಟ್ ಎಲ್ಲದಕ್ಕೂ ಸಿದ್ಧವಾಗಿದೆ ಮತ್ತು ಕ್ರಿಕೆಟಿಗ ಗಾಯಗೊಂಡಿರುವ ಕಾರಣ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಎಂದು ಖಚಿತಪಡಿಸಿದ್ದರು.

ಸದ್ಯದ ವರದಿಗಳ ಪ್ರಕಾರ, ತಮೀಮ್ ಇಕ್ಬಾಲ್ ಅವರು ಸರಿಯಾದ ಸಮಯಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯುವ 2023ರ ಏಷ್ಯಾ ಕಪ್‌ನಿಂದಲೂ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಪ್ರಕಾರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು (ಬಿಸಿಬಿ) ತಮೀಮ್ ಇಕ್ಬಾಲ್ ಅವರು ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಗೂ ಮುನ್ನ ಚೇತರಿಸಿಕೊಳ್ಳುತ್ತಾರೆ ಹಾಗೂ ಮುಂಬರುವ 2023ರ ಏಕದಿನ ವಿಶ್ವಕಪ್ ವೇಳೆಗೆ ಸಂಪೂರ್ಣವಾಗಿ ಫಿಟ್ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಆದರೆ, ಸದ್ಯಕ್ಕೆ ತಮೀಮ್ ಇಕ್ಬಾಲ್ ಅವರ ಗಾಯದ ಬಗ್ಗೆ ಹೆಚ್ಚಿನ ಮಾಹಿತಿಗಳು ಹೊರಬಂದಿಲ್ಲ. ಆದರೂ, ತಮೀಮ್ ಇಕ್ಬಾಲ್ ಸರಿಯಾದ ಸಮಯದಲ್ಲಿ ಚೇತರಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆಯಿದೆ.

ಇದೇ ವೇಳೆ ತಮೀಮ್ ಇಕ್ಬಾಲ್ ಅನುಪಸ್ಥಿತಿಯಲ್ಲಿ, ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಆರಂಭಿಕ ಬ್ಯಾಟರ್ ಲಿಟ್ಟನ್ ದಾಸ್ ಅವರು ಬಾಂಗ್ಲಾದೇಶ ತಂಡದ ಜವಾಬ್ದಾರಿಯನ್ನು ನಿಭಾಯಿಸಿದರು.

ಹೀಗಾಗಿ, 28 ವರ್ಷದ ಲಿಟ್ಟನ್ ದಾಸ್ ಬಾಂಗ್ಲಾದೇಶ ತಂಡದ ಚುಕ್ಕಾಣಿ ಹಿಡಿಯಲು ಮತ್ತು ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ತಂಡವನ್ನು ಮುನ್ನಡೆಸಲು ನೆಚ್ಚಿನ ಅಟಗಾರನಾಗಿದ್ದಾರೆ. ಅಲ್ಲದೆ ಅವರ ನಾಯಕತ್ವದ ದಾಖಲೆಯು ಉತ್ತಮವಾಗಿ ಕಾಣುತ್ತದೆ. ಅವರು ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದ್ದಾರೆ.

ಅತ್ತ ತಮೀಮ್ ಇಕ್ಬಾಲ್ ಅವರ ಪರಿಸ್ಥಿತಿ ಇನ್ನೂ ಸ್ವಲ್ಪ ತಲೆನೋವಾಗಿದೆ. ನಿವೃತ್ತಿ ಘೋಷಣೆಯ ನಂತರ ಇಕ್ಬಾಲ್ ತಂಡದ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗದ ಕಾರಣ ಮ್ಯಾನೇಜ್‌ಮೆಂಟ್‌ನೊಂದಿಗಿನ ಅವರ ಕಹಿ ಸಂಬಂಧವು ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ. ವಿಶ್ವಕಪ್‌ಗೆ ಮುಂಚಿತವಾಗಿ ಎಡಗೈ ಬ್ಯಾಟರ್ ಮರಳುವ ಬಗ್ಗೆ ಬಿಸಿಬಿ ಮುಖ್ಯಸ್ಥ ನಜ್ಮುಲ್ ಹಸನ್ ವಿಶ್ವಾಸ ಹೊಂದಿದ್ದರೂ, ತಮೀಮ್ ಇಕ್ಬಾಲ್ ಅದರ ಬಗ್ಗೆ ಹೆಚ್ಚು ಮಾತನಾಡಿಲ್ಲ.

ಒಟ್ಟಾರೆಯಾಗಿ, ಅನುಭವಿ ಆಟಗಾರ ತಮೀಮ್ ಇಕ್ಬಾಲ್ 241 ಏಕದಿನ ಪಂದ್ಯಗಳಲ್ಲಿ ಬಾಂಗ್ಲಾದೇಶ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದು, ಇದರಲ್ಲಿ 8313 ರನ್ ಗಳಿಸಿದ್ದಾರೆ. ತಮೀಮ್ ಇಕ್ಬಾಲ್ ಅವರು ಏಷ್ಯಾ ಕಪ್ ಪಂದ್ಯಾವಳಿಯಿಂದ ಹೊರಗುಳಿದರೆ, ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿರುವ ಬಾಂಗ್ಲಾದೇಶ ತಂಡಕ್ಕೆ ದೊಡ್ಡ ನಷ್ಟವಾಗಲಿದೆ.

Story first published: Friday, August 4, 2023, 12:33 [IST]
Other articles published on Aug 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+