Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Tamim Iqbal: ಬಾಂಗ್ಲಾ ಸ್ಟಾರ್ ಕ್ರಿಕೆಟಿಗ ತಮೀಮ್ ಇಕ್ಬಾಲ್‌ಗೆ ಹೃದಯಾಘಾತ

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದೆ. ಸೋಮವಾರ ದೇಶೀಯ ಕ್ರಿಕೆಟ್ ಪಂದ್ಯದ ವೇಳೆ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಢಾಕಾದ ಹೊರವಲಯದ ಸವಾರ್ ಎಂಬಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್‌ನ 50 ಓವರ್‌ಗಳ ಪಂದ್ಯದಲ್ಲಿ ತಮೀಮ್ ಇಕ್ಬಾಲ್ ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ತಂಡವನ್ನು ಮುನ್ನಡೆಸುತ್ತಿದರು.

ಮೊಹಮಡೆನ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಶಿನೆಪುಕುರ್ ಕ್ರಿಕೆಟ್ ಕ್ಲಬ್ ನಡುವಿನ ಪಂದ್ಯ ಸವಾರ್ ಎಂಬಲ್ಲಿ ನಡೆಯುತ್ತಿತ್ತು. ಈ ಪಂದ್ಯಕ್ಕೂ ಮುನ್ನ ಟಾಸ್‌ನಲ್ಲಿ ತಮೀಮ್ ಇಕ್ಬಾಲ್ ಭಾಗವಹಿಸಿದ್ದರು. ಆದರೆ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಮೈದಾನದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

Tamim Iqbal suffers heart attack during Dhaka Premier Division Cricket League

ತಮೀಮ್ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಾಗ ಆರಂಭದಲ್ಲಿ ಅವರನ್ನು ಹೆಲಿಕಾಪ್ಟರ್ ಮೂಲಕ ಢಾಕಾಗೆ ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಅವರನ್ನು ಬಿಕೆಎಸ್‌ಪಿ ಮೈದಾನದಿಂದ ಏರ್‍‌ಲಿಫ್ಟ್ ಮಾಡಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಫಜಿಲತುನ್ನೆಸ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಗಳು ಹೇಳಿವೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯ ವೈದ್ಯ ದೇಬಾಶಿಶ್ ಚೌಧರಿ ಮಾತನಾಡಿ, "ತಮೀಮ್ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಇಸಿಜಿ ಮಾಡಲಾಗಿದ್ದು, ಸ್ವಲ್ಪ ಸಮಸ್ಯೆ ಇರುವುದು ಕಂಡು ಬಂದಿದೆ. ಕೆಲವೊಮ್ಮೆ ಹೃದಯದ ಸ್ಥಿತಿ ಏನೆಂದು ನಿಮಗೆ ತಕ್ಷಣ ಅರ್ಥವಾಗುವುದಿಲ್ಲ. ಮೊದಲ ರಕ್ತ ಪರೀಕ್ಷಾ ವರದಿಯಲ್ಲಿ ಒಂದು ಸಮಸ್ಯೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ತಮೀಮ್ ಇಕ್ಬಾಲ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಸದಸ್ಯರು ಆಸ್ಪತ್ರೆ ಆಗಮಿಸಿದರು. ಹೀಗಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತನ್ನ ನಿಗದಿತ ಮಂಡಳಿಯ ಸಭೆಯನ್ನು ರದ್ದುಗೊಳಿಸಿತು.

ತಮೀಮ್ ಇಕ್ಬಾಲ್ 2007 ರಿಂದ 2023 ರವರೆಗೆ ಬಾಂಗ್ಲಾದೇಶ ಪರ ಎಲ್ಲಾ ಸ್ವರೂಪಗಳಲ್ಲಿ 391 ಪಂದ್ಯಗಳನ್ನು ಆಡಿದ್ದಾರೆ. ತಮೀಮ್ ಇಕ್ಬಾಲ್ 15000 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕಗಳನ್ನು ಗಳಿಸಿದ ಏಕೈಕ ಬಾಂಗ್ಲಾದೇಶದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Story first published: Monday, March 24, 2025, 15:47 [IST]
Other articles published on Mar 24, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+