ಐಪಿಎಲ್: ಶೀರ್ಷಿಕೆ ಪ್ರಾಯೋಜಕತ್ವ ಕಳೆದುಕೊಂಡ ವಿವೊ; ನೂತನ ಪ್ರಾಯೋಜಕರಾಗಿ ಭಾರತದ ಕಂಪನಿ ಆಯ್ಕೆ

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳ ಕುರಿತು ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧ್ಯಕ್ಷರಾದ ಬ್ರಿಜೇಶ್ ಪಟೇಲ್ ಅವರು ಮಾತನಾಡಿದ್ದು ಮಹತ್ವದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಪಿಟಿಐಗೆ ಮಾಹಿತಿಯನ್ನು ನೀಡಿದ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಶೀರ್ಷಿಕೆ ಪ್ರಾಯೋಜಕತ್ವದ ಕುರಿತು ಮಾತನಾಡಿದ್ದಾರೆ. 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವವನ್ನು ರತನ್ ಟಾಟಾ ಒಡೆತನದ ಟಾಟಾ ಗ್ರೂಪ್ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನು ಬ್ರಿಜೇಶ್ ಪಟೇಲ್ ಹಂಚಿಕೊಂಡಿದ್ದಾರೆ.
ಈ ಮೂಲಕ ಈ ವರ್ಷ ನಡೆಯಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ರಾಯೋಜಕತ್ವವನ್ನು ವಿವೋ ಕಂಪೆನಿಯೇ ವಹಿಸಿಕೊಳ್ಳಲಿದ್ದು ಮುಂಬರುವ ವರ್ಷದಿಂದ ಟಾಟಾ ಗ್ರೂಪ್ಸ್ ವಹಿಸಿಕೊಳ್ಳಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಈ ಹಿಂದೆ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆದ ಸಂದರ್ಭದಲ್ಲಿ ಡ್ರೀಮ್ ಇಲೆವೆನ್ ಕಂಪೆನಿ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಶೀರ್ಷಿಕೆಯ ಪ್ರಾಯೋಜಕತ್ವವನ್ನು ವಹಿಸಿಕೊಂಡಿತ್ತು. ಹೌದು, ಆ ಸಮಯದಲ್ಲಿ ಭಾರತ ಮತ್ತು ಚೀನಾ ನಡುವೆ ಉಂಟಾಗಿದ್ದ ಬಿಕ್ಕಟ್ಟಿನ ಕಾರಣದಿಂದಾಗಿ ಚೀನಾ ಮೂಲದ ಕಂಪನಿಗಳಿಗೆ ಐಪಿಎಲ್ ಪ್ರಾಯೋಜಕತ್ವವನ್ನು ವಹಿಸಿಕೊಳ್ಳಲು ಅವಕಾಶವನ್ನು ನೀಡಬಾರದು ಎಂಬ ಕೂಗು ಹಾಗೂ ವಿರೋಧ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿತ್ತು. ಹೀಗಾಗಿ ಆ ಒಂದು ಆವೃತ್ತಿಯಲ್ಲಿ ಚೀನಾ ಮೂಲದ ಕಂಪೆನಿ ವಿವೋ ಬದಲಿಗೆ ಡ್ರೀಮ್ ಇಲೆವೆನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವವನ್ನು ವಹಿಸಿಕೊಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications