Team India: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪುವ ಭಾರತದ 4 ಸಮೀಕರಣಗಳು
ಭಾರತ ತಂಡವು ಆಸ್ಟ್ರೇಲಿಯಾದಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡುತ್ತಿದೆ. ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿತ್ತು. ಇದೀಗ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯಲಿದೆ. ಇದು ಪಿಂಕ್ ಬಾಲ್ ಟೆಸ್ಟ್ ಅಂದರೆ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಈ ಪಂದ್ಯವನ್ನು ಗೆಲ್ಲುವುದು ರೋಹಿತ್ ಶರ್ಮಾ ಪಡೆಗೆ ದೊಡ್ಡ ಸವಾಲಾಗಿದೆ. ಕಳೆದ ಬಾರಿ ಆಸ್ಟ್ರೇಲಿಯವನ್ನು ಡೇ-ನೈಟ್ ಟೆಸ್ಟ್‌ನಲ್ಲಿ ಎದುರಿಸಿದ ಭಾರತ 36 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಬಾರಿ ಭಾರತ ಯಾವುದೇ ತಪ್ಪು ಮಾಡದೆ ಪಂದ್ಯವನ್ನು ಗೆಲ್ಲಲು ಯೋಜನೆ ರೂಪಿಸಿದೆ. ಇದರೊಂದಿಗೆ ಟೀಮ್ ಇಂಡಿಯಾ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪುವ ಹಾದಿಯನ್ನು ಸುಲಭಗೊಳಿಸುವ ನಿರೀಕ್ಷೆಯಲ್ಲಿದೆ. ಮುಂದಿನ ವರ್ಷ ಜೂನ್ 11 ರಿಂದ ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಡಬ್ಲ್ಯೂಟಿಸಿ ಫೈನಲ್ ಪಂದ್ಯ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧ ಪರ್ತ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಮರಳಿ ಪಡೆದಿದೆ. ಸೋಲು ಕಂಡ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಜಾರಿದೆ. ಇದಾದ ಬಳಿಕ ಶ್ರೀಲಂಕಾ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಒಂದು ಸ್ಥಾನ ಕೆಳಗಿಳಿಸಿದೆ. ಇದೀಗ ಆಫ್ರಿಕಾ ತಂಡ ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಡಬ್ಲ್ಯೂಟಿಸಿ ಅಂಕಪಟ್ಟಿಯನ್ನು ಅಂತಿಮಗೊಳ್ಳಲು ಇನ್ನೂ ಕೆಲವು ತಿಂಗಳುಗಳು ಬಾಕಿಯಿದ್ದರೂ, ಫೈನಲ್ ತಲುಪಲು ಪ್ರಬಲ ಪೈಪೋಟಿ ಏರ್ಪಟ್ಟಿದೆ.

ಫೈನಲ್ ರೇಸ್‌ನಲ್ಲಿ ನಾಲ್ಲು ತಂಡಗಳು
ಟೀಮ್ ಇಂಡಿಯಾ ಜೊತೆಗೆ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳು ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳ ರೇಸ್‌ನಲ್ಲಿವೆ. ಆದರೆ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬಳಿಕ ನ್ಯೂಜಿಲೆಂಡ್ ತಂಡದ ನಿರೀಕ್ಷೆ ಬಹುತೇಕ ಅಂತ್ಯಗೊಂಡಿದೆ. ಪವಾಡ ನಡೆದರೆ ಮಾತ್ರ ಫೈನಲ್ ತಲುಪುವ ಸಾಧ್ಯತೆಯಿದೆ. ಡಬ್ಲ್ಯೂಟಿಸಿ ಫೈನಲ್ ರೇಸ್‌ನಿಂದ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ, ಬಾಂಗ್ಲಾದೇಶ ತಂಡಗಳು ಹೊರಗುಳಿದಿವೆ. ಆದರೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಇತರ ಉಳಿದ ತಂಡಗಳ ಡಬ್ಲ್ಯೂಟಿಸಿ ಫೈನಲ್ ಕನಸಿಗೆ ಅಡ್ಡಿಯಾಗಬಹುದು. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಡಬ್ಲ್ಯೂಟಿಸಿ ಫೈನಲ್ ಸಮೀಕರಣವನ್ನು ಹಾಳುಮಾಡಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿದ್ದು, ಒಂದು ಪಂದ್ಯವನ್ನಾದರೂ ಗೆದ್ದರೆ ಹರಿಣಗಳ ಪಡೆ ಸಂಕಷ್ಟಕ್ಕೆ ಸಿಲುಕಲಿದೆ.
ಭಾರತದ ಸಮೀಕರಣಗಳು
ಭಾರತ ತಂಡ ಆಸ್ಟ್ರೇಲಿಯಾವನ್ನು 5-0, 4-1, 4-0 ಅಥವಾ 3-0 ಅಂತರದಿಂದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೋಲಿಸಿದರೆ, ಸುಲಭವಾಗಿ ಡಬ್ಲ್ಯೂಟಿಸಿ ಫೈನಲ್ ತಲುಪಲಿದೆ. ಈ ವೇಳೆ ಟೀಮ್ ಇಂಡಿಯಾ ಬೇರೆ ಯಾವುದೇ ತಂಡದ ಫಲಿತಾಂಶವನ್ನು ಅವಲಂಬಿಸುವ ಅಗತ್ಯವಿಲ್ಲ. ಆಗ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್‌ನಿಂದ ಹೊರಗುಳಿಯಲಿದೆ.
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಭಾರತ 3-1 ಅಂತರದಲ್ಲಿ ಗೆದ್ದರೆ, ಡಬ್ಲ್ಯೂಟಿಸಿ ಫೈನಲ್ ಅರ್ಹತೆ ಪಡೆಯಬಹುದು. ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡದ ಗೆಲುವಿಗೆ ಟೀಮ್ ಇಂಡಿಯಾ ಪ್ರಾರ್ಥಿಸಬೇಕಾಗುತ್ತದೆ. ಒಂದು ವೇಳೆ ಭಾರತ ಸರಣಿಯನ್ನು 3-1 ಅಂತರದಲ್ಲಿ ಗೆದ್ದು, ಎರಡನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಶ್ರೀಲಂಕಾವನ್ನು ಸೋಲಿಸಿದರೆ ಟೀಮ್ ಇಂಡಿಯಾ ಹೊರಗುಳಿಯಲಿದೆ. ಎರಡನೇ ಟೆಸ್ಟ್ ಡ್ರಾಗೊಂಡರೂ ಭಾರತ ಮುನ್ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧ 3-2 ಅಂತರಲ್ಲಿ ಭಾರತ ಗೆದ್ದರೆ ಡಬ್ಲ್ಯೂಟಿಸಿ ಫೈನಲ್ ಲೆಕ್ಕಚಾರ ಉಲ್ಟಾ ಆಗಲಿವೆ. ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಶ್ರೀಲಂಕಾದಿಂದ ಸ್ವಲ್ಪ ಸಹಾಯ ಬೇಕಾಗುತ್ತದೆ. ಜನವರಿ 29 ರಿಂದ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಲಂಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಕನಿಷ್ಠ ಡ್ರಾ ಸಾಧಿಸಬೇಕಾಗುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿ 2-2 ರಲ್ಲಿ ಅಂತ್ಯಗೊಂಡರೆ, ಟೀಮ್ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಹಾದಿ ಕಠಿಣವವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆಲ್ಲಲೇಬೇಕಾಗುತ್ತದೆ. ಮತ್ತೊಂದೆಡೆ ಶ್ರೀಲಂಕಾ ತಂಡ ಕೂಡ ಆಸ್ಟ್ರೇಲಿಯಾ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications