Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಐತಿಹಾಸಿಕ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ 11ರ ಬಳಗ ಅಧಿಕೃತ ಪ್ರಕಟ

Team India annouced final playing XI for WTC final match against New Zealand

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆತಿದೆ. ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಿದ್ದು ಅಂತಿಮ 11ರ ಬಳಗದಲ್ಲಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

ಈ ಪಂದ್ಯಕ್ಕೂ ಮುನ್ನ ಆಡುವ ಬಳಗ ಯಾವ ರೀತಿಯಲ್ಲಿ ಇರಬೇಕು ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಪ್ರಮುಖವಾಗಿ ಎಷ್ಟು ಮಂದಿ ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಬೇಕು ಹಾಗೂ ಇಂಗ್ಲೆಂಡ್ ಪಿಚ್ ಆಗಿರುವ ಕಾರಣ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಸಬೇಕೆಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗಿತ್ತು.

ಸಾಕಷ್ಟು ಕುತೂಹಲ ಮೂಡಿಸಿದ್ದ ಬೌಲಿಂಗ್ ವಿಭಾಗದಲ್ಲಿ ಎರಡು ಸ್ಪಿನ್ನರ್‌ಗಳು ಹಾಗೂ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ನಿರ್ಧರಿಸಿದೆ. ಹೀಗಾಗಿ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದಿದ್ದಾರೆ.

ಇನ್ನು ವೇಗಿಗಳಲ್ಲಿ ನಿರೀಕ್ಷೆಯಂತೆಯೇ ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಆಡುವ ಬಳಗದಲ್ಲಿದ್ದಾರೆ. ಅನುಭವಿ ಇಶಾಂತ್ ಶರ್ಮಾ ಕುಡ ಈ ಮಹತ್ವದ ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮೊಹಮ್ಮದ್ ಸಿರಾಜ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ ಬ್ಯಾಟ್ಸ್‌ಮನ್ ಹನುಮ ವಿಹಾರಿ ಕೂಡ ಆಡುವ ಬಳಗದಿಂದ ಹೊರಗುಳಿದಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ

Story first published: Thursday, June 17, 2021, 20:08 [IST]
Other articles published on Jun 17, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+