For Quick Alerts
ALLOW NOTIFICATIONS  
For Daily Alerts
 

ಗೆಲುವಿನ ಜೊತೆಗೆ ಭಾರತ ಐತಿಹಾಸಿಕ ಸಾಧನೆ: ಮೂರು ಮಾದರಿಯಲ್ಲೂ ಈಗ ಟೀಮ್ ಇಂಡಿಯಾ ನಂ.1

ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಈ ಗೆಲುವಿನ ಜೊತೆಗೆ ಭಾರತ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನವನ್ನು ಹಿಂದಕ್ಕೆ ತಳ್ಳಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಇದರೊಂದಿಗೆ ಈಗ ಭಾರತ ಎಲ್ಲಾ ಮೂರು ಮಾದರಿಯಲ್ಲಿಯೂ ನಂ.1 ತಂಡ ಎನಿಸಿಕೊಂಡಿದೆ.

ಮುಂಬರುವ ವಿಶ್ವಕಪ್ ಟೂರ್ನಿಗೆ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡು ಕಣಕ್ಕಿಳಿಯಬೇಕು ಎನ್ನುವ ಪೈಪೋಟಿಯನ್ನು ಭಾರತ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತಂಡಗಳು ನಡೆಸುತ್ತಿವೆ. ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶ ಪಡೆಯದ ಹೊರತಾಗಿಯೂ ಪಾಕಿಸ್ತಾನ ತಂಡ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಏಷ್ಯಾಕಪ್ ಫೈನಲ್‌ನಲ್ಲಿ ಭಾರತದ ಭಾರತದ ಗೆಲುವು ಅಗ್ರಸ್ಥಾನದ ಸನಿಹಕ್ಕೆ ತಂದು ನಿಲ್ಲಿಸಿತ್ತು. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೂ ಮುನ್ನ ಭಾರತ ಪಾಕಿಸ್ತಾನದ ಜೊತೆಗೆ 115 ಅಂಕಗಳೊಂದಿಗೆ ಸಮಸಾಧನೆ ಮಾಡಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಗೆಲುವು ಪಾಕಿಸ್ಥಾನ ತಂಡವನ್ನು ಹಿಂದಿಕ್ಕುವಂತೆ ಮಾಡಿದೆ.

Team India become no.1 Team in all three formats after win against Australia

ಟೆಸ್ಟ್ ಮಾದರಿಯಲ್ಲಿ ಭಾರತ 118 ಅಂಕಗಳೊಂದಿಗೆ ನಂಬರ್1 ಸ್ಥಾನದಲ್ಲಿದ್ದು ಆಸ್ಟ್ರೇಲಿಯಾ ಕೂಡ ಇಷ್ಟೇ ಅಂಕಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದೆ. ಇನ್ನು ಟಿ20 ಮಾದರಿಯಲ್ಲಿ ಭಾರತ 264 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾದಲ್ಲಿರುವ ಇಂಗ್ಲೆಂಡ್ ತಂಡಕ್ಕಿಂತ 3 ಅಂಕಗಳನ್ನು ಮುಂದಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದಯಗಳ ಸರಣಿಯನ್ನು ಭಾರತ ಗೆದ್ದುಕೊಂಡರೆ ಎಲ್ಲಾ ಮಾದರಿಯಲಿಯೂ ನಂಬರ್ 1 ಎನಿಸಿಕೊಂಡಿ ಭಾರತ ವಿಶ್ವಕಪ್ ಟೂರ್ನಿಗೆ ಅಡಿಯಿಡಲಿದೆ.

ಇನ್ನು ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದೆ. ಆರಂಭದಲ್ಲಿ ಮೊಹಮ್ಮದ್ ಶಮಿ ಅವರ ಬೌಲಿಂಗ್‌ನಿಂದಾಗಿ ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗದ ವಿರುದ್ಧ ಅದ್ಭುತ ಮೇಲುಗೈ ಸಾಧಿಸಿದ್ದ ಭಾರತ ಬಳಿಕ ಬ್ಯಾಟಿಂಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿತು. ಹೀಗಾಗಿ 5 ವಿಕೆಟ್‌ಗಳ ಅಂತರದ ಅದ್ಭುತ ಗೆಲುವು ಸಾಧಿಸಿದಂತಾಗಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬೌಲಿಂಗ್‌ನಲ್ಲಿ ಅಬ್ಬರಿಸಿದ ಭಾರತ ಆಸ್ಟ್ರೇಲಿಯಾ ತಂಡವನ್ನು 266 ರನ್‌ಗಳಿಗೆ ಕಟ್ಟಿ ಹಾಕಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ 5 ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಭಾರತದ ಮೇಲುಗೈಗೆ ಕಾರಣವಾದರು. ನಂತರ ಬ್ಯಾಟಂಗ್‌ನಲ್ಲಿ ಟೀಮ್ ಇಂಡಿಯಾದ ಯುವ ಆರಂಬಿಕ ಆಟಗಾರರಾದ ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಅರ್ಧ ಶತಕ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ
ಬೆಂಚ್: ತಿಲಕ್ ವರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ
ಬೆಂಚ್: ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್ವುಡ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ತನ್ವೀರ್ ಸಂಘ

Story first published: Friday, September 22, 2023, 23:39 [IST]
Other articles published on Sep 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+