IND vs BAN: ಬಾಂಗ್ಲಾದೇಶ ವಿರುದ್ಧ ಭಾರತದ ಈ 9 ಬೌಲರ್‌ಗಳ ಪ್ರಾಬಲ್ಯ
ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಭಾರತ ಮತ್ತು ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲಿ ಬೌಲರ್‌ಗಳ ಪ್ರದರ್ಶನದ ಮೇಲೆ ಕುತೂಹಲ ಹೆಚ್ಚಿದೆ. ಯಾವಾಗಲೂ ಭಾರತ ತಂಡದ ಬೌಲರ್‌ಗಳ ಪ್ರದರ್ಶನವು ಎಲ್ಲರ ಗಮನ ಸೆಳೆದಿದೆ.
ಭಾರತದ ಪಿಚ್‌ಗಳಲ್ಲಿ ಸ್ಪಿನ್ನರ್‌ಗಳು ಸಹಾಯ ಪಡೆಯುತ್ತಿದ್ದಾರೆ. ಆದರೆ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿ ನಂಬರ್ ಒನ್ ಸ್ಥಾನದಲ್ಲಿರುವುದು ವೇಗದ ಬೌಲರ್. ಅಲ್ಲದೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನಲ್ಲಿ ಭಾರತದ ಪರ ಹೆಚ್ಚಿನ ವಿಕೆಟ್ ಪಡೆದವರು ವೇಗದ ಬೌಲರ್‌ಗಳಾಗಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಪಿನ್ನರ್‌ಗಳ ಪಾತ್ರ ಮುಖ್ಯವಾಗಿದ್ದರೂ, ವೇಗದ ಬೌಲರ್‌ಗಳು ತಮ್ಮ ಸಾಮರ್ಥ್ಯವನ್ನು ತೋರಿದ್ದಾರೆ. ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆದವರ ಸಾಲಿನಲ್ಲಿ 8 ಬೌಲರ್‌ಗಳಿದ್ದು, ಐದು ವೇಗಿಗಳು ಮತ್ತು ನಾಲ್ವರು ಸ್ಪಿನ್ನರ್‌ಗಳಿದ್ದಾರೆ.
ಬಾಂಗ್ಲಾ ಎದುರು ಭಾರತೀಯ ಬೌಲರ್‌ಗಳ ಕಮಾಲ್
ಜಹೀರ್ ಖಾನ್
ಬಾಂಗ್ಲಾದೇಶ ಎದುರು ಅತಿಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗದ ಬೌಲರ್ ಜಹೀರ್ ಖಾನ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಜಹೀರ್ ಖಾನ್ ಬಾಂಗ್ಲಾದೇಶ ವಿರುದ್ಧ 7 ಟೆಸ್ಟ್ ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ. ಅವರ ಮಾರಕ ಸ್ವಿಂಗ್ ಮತ್ತು ನಿಖರವಾದ ಲೈನ್-ಲೆಂತ್ ಯಾವಾಗಲೂ ಬಾಂಗ್ಲಾದೇಶದ ಬ್ಯಾಟರ್‌ಗಳನ್ನು ತೊಂದರೆಗೀಡು ಮಾಡಿದೆ.
ಇಶಾಂತ್ ಶರ್ಮಾ
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದ ಇಶಾಂತ್ ಶರ್ಮಾ ಕೂಟ ಬಾಂಗ್ಲಾ ತಂಡವನ್ನು ತಮ್ಮ ಬೌಲಿಂಗ್ ಮೂಲಕ ಧೂಳಿಪಟ ಮಾಡಿದ್ದಾರೆ. ಜಹೀರ್ ಖಾನ್ ನಂತರ ಅತಿಹೆಚ್ಚು ವಿಕೆಟ್ ಪಡೆದ ಎರಡನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ 7 ಟೆಸ್ಟ್‌ಗಳಲ್ಲಿ ಕೇವಲ 20.88 ಸರಾಸರಿಯೊಂದಿಗೆ 25 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ವೇಗದ ಬೌನ್ಸ್ ಬಹಳ ಪರಿಣಾಮಕಾರಿ ಆಗಿತ್ತು.
ಆರ್. ಅಶ್ವಿನ್
ಬಾಂಗ್ಲಾದೇಶ ಎದುರು ಅದ್ಭುತ ಪ್ರದರ್ಶನ ನೀಡಿರುವ ರವಿಚಂದ್ರನ್ ಅಶ್ವಿನ್ ಅತಿಹೆಚ್ಚು ವಿಕೆಟ್ ಪಡೆದ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಫ್ ಸ್ಪಿನ್ನರ್ ಅಶ್ವಿನ್ ಬಾಂಗ್ಲಾದೇಶ ವಿರುದ್ಧ 6 ಟೆಸ್ಟ್ ಪಂದ್ಯಗಳಲ್ಲಿ 23 ವಿಕೆಟ್ ಪಡೆದಿದ್ದಾರೆ. ಅವರ ಸ್ಪಿನ್ ಬೌಲಿಂಗ್ ಅನ್ನು ಎದುರಿಸುವುದು ಬಾಂಗ್ಲಾದೇಶದ ಬ್ಯಾಟರ್‌ಗಳಿಗೆ ಯಾವಾಗಲೂ ಸವಾಲಾಗಿತ್ತು.
ಉಮೇಶ್ ಯಾದವ್
ಬಲಗೈ ವೇಗದ ಬೌಲರ್ ಉಮೇಶ್ ಯಾದವ್ ಅವರು ಬಾಂಗ್ಲಾದೇಶ ವಿರುದ್ಧ 6 ಟೆಸ್ಟ್ ಪಂದ್ಯಗಳಲ್ಲಿ 22 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರ ವೇಗ ಮತ್ತು ಸ್ವಿಂಗ್ ಬೌಲಿಂಗ್‌ಗೆ ಆಡುವುದು ಬಾಂಗ್ಲಾದೇಶದ ಬ್ಯಾಟರ್‌ಗಳಿಗೆ ತಲೆ ನೋವಾಗಿತ್ತು. ಇದಾದ ನಂತರ ಮತ್ತೋರ್ವ ಮಾಜಿ ವೇಗದ ಬೌಲರ್ ಇರ್ಪಾನ್ ಕೂಡ ಬಾಂಗ್ಲಾದೇಶ ಎದುರು ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಕಮಾಲ್ ತೋರಿದ್ದಾರೆ. 2 ಟೆಸ್ಟ್ ಪಂದ್ಯಗಳಲ್ಲಿ ಕೇವಲ 18 ವಿಕೆಟ್‌ಗಳನ್ನು ಉರುಳಿಸಿದ್ದಾರೆ.
ಅನಿಲ್ ಕುಂಬ್ಳೆ
ಟೀಮ್ ಇಂಡಿಯಾದ ಮಾಜಿ ದಿಗ್ಗಜ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಆದರೆ ಬಾಂಗ್ಲಾದೇಶ ಎದುರು ಮಾತ್ರ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ಪೈಕಿ ಆರನೇ ಸ್ಥಾನದಲ್ಲಿದ್ದಾರೆ. 4 ಟೆಸ್ಟ್ ಪಂದ್ಯಗಳಲ್ಲಿ 15 ವಿಕೆಟ್ ಪಡೆದು ದಾಖಲೆ ಬರೆದಿದ್ದಾರೆ.
ಮೊಹಮ್ಮದ್ ಶಮಿ
ಭಾರತದ ವೇಗಿ ಮೊಹಮ್ಮದ್ ಶಮಿ 2 ಟೆಸ್ಟ್ ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನು ಖಾತೆಗೆ ಹಾಕಿಕೊಂಡಿದ್ದಾರೆ. ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಬಾಂಗ್ಲಾದೇಶ ವಿರುದ್ಧ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಕೇವಲ 9 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆ ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್ ಪಂದ್ಯವಾಡಿರುವ ಕುಲದೀಪ್ ಯಾದವ್ 8 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications