50 ವರ್ಷಗಳ ಹಳೆಯ ದಾಖಲೆ ಅಳಿಸಿದ ಟೀಮ್ ಇಂಡಿಯಾ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿದೆ. ಭಾರತದ ಬ್ಯಾಟರ್‌ಗಳು ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇದಕ್ಕೆ ಸಾಕ್ಷಿಯ 350ಕ್ಕೂ ಹೆಚ್ಚು ರನ್ ಬಾರಿಸಿದ್ದಾರೆ. ಟೀಮ್ ಇಂಡಿಯಾ ಪರ ಎಲ್ಲ ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡಿದ್ದು ತಂಡಕ್ಕೆ ನೆರವಾಗಿದೆ. ಈ ಮೂಲಕ ಟೀಮ್ ಇಂಡಿಯಾ ಲಾರ್ಡ್ಸ್‌ನಲ್ಲಿ 50 ವರ್ಷ ಹಳೆಯ ದಾಖಲೆಯನ್ನು ಮುರಿದಿದೆ.
ಟೀಮ್ ಇಂಡಿಯಾದ ಬ್ಯಾಟರ್‌ಗಳು ಈ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಆರಂಭಿಕ ಕೆಎಲ್ ರಾಹುಲ್, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್‌ರೌಂಡರ್ ರವೀಂದ್ರ ಜಡೇಜಾ ಮೂರನೇ ಟೆಸ್ಟ್‌ನಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರನ್ನು ಹೊರತು ಪಡಿಸಿ ಶುಭಮನ್ ಗಿಲ್ ಸಹ ಈ ಸರಣಿಯಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಹೆಸರಿನಲಿದ್ದ 50 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ.

ಟೀಮ್ ಇಂಡಿಯಾ ಲಾರ್ಡ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ವಿಂಡೀಸ್ ತಂಡದ 50 ವರ್ಷಗಳ ಹಳೆ ದಾಖಲೆ ಅಳಿಸಿ ಹಾಕಿದೆ. ಭಾರತ ತಂಡ ವಿದೇಶಿ ನೆಲದಲ್ಲಿ ಸರಣಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಗೆ ಪಾತ್ರವಾಗಿದೆ. ವಿದೇಶಿ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆ ತನ್ನದಾಗಿಸಿಕೊಂಡಿದೆ. ಇನ್ನು ಟೀಮ್ ಇಂಡಿಯಾ ಈ ಸರಣಿಯಲ್ಲಿ 5 ಇನಿಂಗ್ಸ್‌ಗಳನ್ನು ಆಡಬೇಕಿದೆ. ಈಗಲೇ ಭಾರತ ಒಟ್ಟು 36 ಸಿಕ್ಸರ್ ಬಾರಿಸಿದೆ.
ವಿಂಡೀಸ್ ದಾಖಲೆ ಅಳಿಸಿದ ಭಾರತ
ಟೀಮ್ ಇಂಡಿಯಾ ಈ ಸರಣಿಯಲ್ಲಿ 36 ಸಿಕ್ಸರ್ ಬಾರಿಸುವ ಮೂಲಕ ಈ ದಾಖಲೆಗೆ ತನ್ನ ಹೆಸರನ್ನು ನಮೂದಿಸಿದೆ. ಈ ಮೊದಲು ವೆಸ್ಟ್ ಇಂಡೀಸ್ 1974-75ರಲ್ಲಿ ಭಾರತ ಪ್ರವಾಸ ಬೆಳೆಸಿದ್ದಾಗ, 32 ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿತ್ತು. ಈ ಮೂಲಕ ವಿಂಡೀಸ್ ದಾಖಲೆಯ ಪುಟಕ್ಕೆ ಎಂಟ್ರಿ ಪಡೆದಿತ್ತು. ಈಗ ಈ ದಾಖಲೆ ಅಳಿಸಲಾಗಿದೆ. 32 ಸಂಖ್ಯೆಯ ಸಿಕ್ಸರ್‌ಗಳನ್ನು ನ್ಯೂಜಿಲೆಂಡ್ ಪಾಕ್ ವಿರುದ್ಧದ ಸರಣಿಯಲ್ಲಿ ಬಾರಿಸಿ ಮೂರನೇ ಸ್ಥಾನದಲ್ಲಿತ್ತು. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಇದೆ. ಆಸೀಸ್ 2000ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದಾಗ 31 ಸಿಕ್ಸರ್ ಬಾರಿಸಿತ್ತು.

ಇಂಗ್ಲೆಂಡ್ ಪ್ರವಾಸದಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಹಿರಿಮೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರಿಗೆ ಸಲ್ಲುತ್ತದೆ. ಇವರು ಈ ಸರಣಿಯಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು, 400ಕ್ಕೂ ಹೆಚ್ಚು ರನ್ ಕಲೆ ಹಾಕಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ 13 ಸಿಕ್ಸರ್ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶುಭಮನ್ ಗಿಲ್ ಈ ಸರಣಿಯಲ್ಲಿ 12 ಸಿಕ್ಸರ್ ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications