Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಬಲುದೊಡ್ಡ ಸುಳಿವು ನೀಡಿದ ರೋಹಿತ್ ಶರ್ಮಾ

2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋಲು ಕಂಡು ನಿರ್ಗಮಿಸಿದ ಬಳಿಕ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಕಣಕ್ಕಿಳಿದಿಲ್ಲ. ಚುಟುಕು ಮಾದರಿಯಲ್ಲಿ ಹಾರ್ದಿಕ್ ಪಾಂಡ್ಯ ಅವರೇ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಮಾತ್ರವಲ್ಲದೆ ವಿರಾಟ್ ಕೊಹ್ಲಿ ಕೂಡ ಚುಟುಕು ಮಾದರಿಯಲ್ಲಿ ಕಾಣಿಸಿಕೊಳ್ಳಯತ್ತಿಲ್ಲ. ಹೀಗಾಗಿ ಈ ಇಬ್ಬರು ಆಟಗಾರರು ಟಿ20 ಮಾದರಿಯಲ್ಲಿ ಮುಂದೆ ಕಾಣಿಸಿಕೊಳ್ಳುವ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲ ಮುಂದುವರಿದಿದೆ.

ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿಯೂ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕೂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಈ ಸಂದರ್ಭದಲ್ಲಿ ವಿಂಡೀಸ್ ಪ್ರವಾಸ ಮುಗಿಸಿ ಅಮೆರಿಕಾ ಪ್ರವಾಸವನ್ನು ಆನಂದಿಸುತ್ತಿರುವ ರೋಹಿತ್ ಶರ್ಮಾ ಮುಂದಿನ ವರ್ಷದ ಟಿ20 ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಮಹತ್ವದ ಸುಳಿವೊಂದನ್ನು ಬಿಟ್ಟುಕೊಟ್ಟಿದ್ದಾರೆ.

Team India captain Rohit Sharma hints on playing in t20 world cup 2024

ಯುಎಸ್‌ಎನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ರೋಹಿತ್ ಶರ್ಮಾ ಅಲ್ಲಿ ತಮ್ಮ ಅಭಿಮಾನಿಗಳಲ್ಲಿ ಮಾತನಾಡುತ್ತಾ ಈ ಬಗ್ಗೆ ಸುಳಿವು ನೀಡಿದ್ದಾರೆ. ಯುಎಸ್‌ಎಗೆ ನಾನು ಬರಲು ಮುಖ್ಯ ಕಾರಣ ಮುಂದಿನ ವರ್ಷ ಇಲ್ಲಿ ವಿಶ್ವಕಪ್ ನಡೆಯಲಿದೆ ಎನ್ನುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಮಾತನಾಡಿದ್ದಾರೆ.

"ಇಲ್ಲಿ ಬಂದು ಆನಂದಿಸುತ್ತಾ ಕಾಲ ಕಳೆಯುವುದಕ್ಕಿಂತ ಹೆಚ್ಚಾಗಿ ಇಲ್ಲಿಗೆ ಬರಲು ಮತ್ತೊಂದು ಕಾರಣವೂ ಇದೆ. ಅದೇನೆಂದರೆ ವಿಶ್ವಕಪ್ ಸನಿಹದಲ್ಲಿದೆ. 2024ರಲ್ಲಿ ಇಲ್ಲಿ ಟಿ20 ವಿಶ್ವಕಪ್ ಆಯೋಜನೆಯಾಗಲಿದೆ. ಹಾಗಾಗಿ ಎಲ್ಲರೂ ಕೂಡ ಸಾಕಷ್ಟು ಉತ್ಸುಕರಾಗಿದ್ದೀರಿ ಎಂದು ಭಾವಿಸುತ್ತೇನೆ. ಖಮಡಿಯವಾಗಿಯೂ ಅದನ್ನು ಎದುರುನೋಡುತ್ತಿದ್ದೇನೆ" ಎಂದಿದ್ದಾರೆ ರೋಹಿತ್ ಶರ್ಮಾ.

ಭಾರತವು 2022ರ ಅಂತ್ಯದ ಬಳಿಕ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಸತತವಾಗಿ ಆಡುತ್ತಿದೆ. ಅಲ್ಲದೆ ಚುಟುಕು ಮಾದರಿಯಲ್ಲಿ ಹೊಸ ಮುಖಗಳೊಂದಿಗೆ ಕಣಕ್ಕಿಳಿಯುತ್ತಿದೆ. 2021 ಮತ್ತು 2022ರ ವಿಶ್ವಕಪ್‌ನಲ್ಲಿ ಆಕ್ರಮಣಕಾರಿ ಆಟದ ಬದಲಿಗೆ ಆಂಕರ್ ಪಾತ್ರವನ್ನು ನಿರ್ವಹಿಸಿದ ಭಾರತದ ಮೂವರು ಅಗ್ರಕ್ರಮಾಂಕದ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್ ಶೈಲಿಯ ಕಾರಣದಿಂದಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಹೀಗಾಗಿ ಭಾರತ ಆ ನಿಟ್ಟಿನಲ್ಲಿ ಕೆಲ ಬದಲಾವನೆಯತ್ತ ಮುಖಮಾಡಿದೆ.

ಮತ್ತೊಂದೆಡೆ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನ ಒಂದು ಮಾದರಿಯಿಂದ ನಿವೃತ್ತಿ ಪಡೆಯುವ ಬಗ್ಗೆ ಈವರೆಗೂ ಮಾತನಾಡಿಲ್ಲ. ಇವರಿಬ್ಬರು ಕೂಡ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಅಲ್ಲದೆ ಇದೀಗ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಸಿದ್ಧತೆಯನ್ನು ಕೂಡ ನಡೆಸುತ್ತಿದ್ದಾರೆ.

Story first published: Sunday, August 6, 2023, 17:26 [IST]
Other articles published on Aug 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+